ಉಡುಪಿ | ಶಿಕ್ಷಕರ ವರ್ಗಾವಣೆಗೆ ವಿರೋಧ; ಶಾಲೆಗೆ ಬೀಗ ಜಡಿದು ಪ್ರತಿಭಟನೆ

Date:

Advertisements

ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನ ವರ್ಗಾವಣೆಯನ್ನು ವಿರೋಧಿಸಿ ಹಾಗೂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ಕೋಡಿ ಬೆಂಗ್ರೆ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಶಾಲೆಯಲ್ಲಿ ಈಗಾಗಲೇ ಶಿಕ್ಷಕರ ಕೊರತೆಯಿದೆ. ಹೀಗಿದ್ದರೂ ಇದೀಗ ಮತ್ತೊಬ್ಬರನ್ನು ವರ್ಗಾವಣೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿರುವುದಕ್ಕೆ ಗ್ರಾಮಸ್ಥರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಒಂದನೇ ತರಗತಿಯಿಂದ ಏಳನೇ ತರಗತಿಯವರೆಗೆ ಒಟ್ಟು ಎಂಭತ್ತು ವಿದ್ಯಾರ್ಥಿಗಳು ಕಲಿಯುತ್ತಿದ್ದು ಈ ಮುಂಚೆ ಮೂವರು ಶಿಕ್ಷಕರಿದ್ದರು. ಇದೀಗ ಅವರಲ್ಲಿ ಒಬ್ಬರನ್ನು ವರ್ಗಾವಣೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.

“ಸರ್ಕಾರಿ ಶಾಲೆಯನ್ನು ನೇರವಾಗಿ ಮುಚ್ಚದೆ‌ ಶಿಕ್ಷಕರನ್ನು ವರ್ಗಾವಣೆ ಮಾಡುವ ಮೂಲಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹುನ್ನಾರ ನಡೆಯುತ್ತಿದೆ” ಎಂದು ಸ್ಥಳೀಯ ಮುಖಂಡ ರಮೇಶ್ ತಿಂಗಳಾಯ ಆರೋಪಿಸಿದ್ದಾರೆ.

Advertisements

“ಶಿಕ್ಷಣಾಧಿಕಾರಿಗಳಿಗೆ, ಉದ್ಯಮಿಗಳಿಗೆ, ರಾಜಕಾರಣಿಗಳಿಗೆ ಆಸಕ್ತಿ ಇದ್ದರೆ ಅವರು ಸರ್ಕಾರಿ ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲಿ. ಅದು ಬಿಟ್ಟು ಶಿಕ್ಷಣವನ್ನು ಇಂದು ಉದ್ಯೋಗಕ್ಕಾಗಿ ಬಳಸಲಾಗುತ್ತಿರುವುದು ಖೇದಕರ” ಎಂದರು.

“ಸರ್ಕಾರಿ ಶಾಲೆಗೆ ಶಿಕ್ಷಕರನ್ನು ನೇಮಕ ಮಾಡುತ್ತಿಲ್ಲ. ಇದರಿಂದ ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾಗುತ್ತಿದೆ. ಈ ಮುಂಚೆ ಕೌನ್ಸಿಲಿಂಗ್ ನಡೆಸುವಾಗ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ನಮ್ಮನ್ನು ಬಂಧಿಸುವ ಪ್ರಯತ್ನ ನಡೆದಿತ್ತು. ನ್ಯಾಯಯುತವಾದ ಬೇಡಿಕೆಯಿಟ್ಟಾಗ ನಮ್ಮನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ. ಇದೀಗ ಮತ್ತೆ ನಮ್ಮ ಶಿಕ್ಷಕರೊಬ್ಬರನ್ನು ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿದೆ. ಎಂಭತ್ತು ಮಕ್ಕಳು ಎರಡು ಶಿಕ್ಷಕರಿಂದ ಕಲಿಯುವುದು ಹೇಗೆ” ಎಂದು ಪ್ರಶ್ನಿಸಿದರು.

“ನಮಗೆ ನ್ಯಾಯ ದೊರಕಿಸಿಕೊಡಬೇಕು. ಏಳು ಶಿಕ್ಷಕರು ಈ ಶಾಲೆಗೆ ಬರಬೇಕು. ಬಡ ಕೂಲಿ ಕಾರ್ಮಿಕರ ಮಕ್ಕಳು, ಮೀನುಗಾರರ ಮಕ್ಕಳು ಶಿಕ್ಷಣದಿಂದ ವಂಚಿತರಾಗುವುದನ್ನು ತಡೆಯಬೇಕು. ಅಲ್ಲಿಯವರೆಗೆ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು” ಎಂದರು.

“ಶಿಕ್ಷಣ ಇಲಾಖೆಯಲ್ಲಿ ಶೈಕ್ಷಣಿಕವಾಗಿ ಇರುವ ಎಲ್ಲ ಕಾನೂನುಗಳನ್ನು ಮರು ಪರಿಶೀಲಿಸುವವರೆಗೆ ವರ್ಗಾವಣೆ ಪ್ರಕ್ರಿಯೆಯನ್ನು ತಡೆ ಹಿಡಿದು ಶಾಲೆಯ ಉಳಿವಿಗಾಗಿ ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಭೂಸ್ವಾಧೀನ ಹಿಂಪಡೆಯುವಂತೆ ರೈತರ ಒತ್ತಾಯ

“2021-22ರಲ್ಲಿ ವರ್ಗಾವಣೆಯಾದ ಶಿಕ್ಷಕರ ಬದಲಿಗೆ ಇನ್ನೋರ್ವ ಶಿಕ್ಷಕರನ್ನು ನೀಡದೆ ಇದ್ದಲ್ಲಿ ಅನಿರ್ದಿಷ್ಟ ಕಾಲದವರೆಗೆ ಶಾಲೆಗೆ ಬೀಗ ಜಡಿದು ಪ್ರತಿಭಟಿಸಲಾಗುವುದು. ಇದರಿಂದಾಗುವ ಮಕ್ಕಳ ಶೈಕ್ಷಣಿಕ ತೊಂದರೆಗೆ ಜಿಲ್ಲಾಡಳಿತ, ಶಿಕ್ಷಣ ಇಲಾಖೆ, ಸರ್ಕಾರವೇ ನೇರ ಹೊಣೆಯಾಗಲಿದೆ” ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು ಮತ್ತು ಪೋಷಕರು ಸೇರಿದಂತೆ ನೂರಾರು ಮಂದಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X