ಚಂದನವನದ ನಟ ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಅವರು ತಮ್ಮ ಹುಟ್ಟೂರಿನ ರಥೋತ್ಸವದಲ್ಲಿ ಭಾಗಿಯಾಗಿ ತೇರು ಎಳೆದಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿಯಲ್ಲಿರುವ ಅಹೋಬಲ ನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿ ಸಾರ್ವಜನಿಕರ ಜತೆಗೂಡಿ ರಥ ಎಳೆದು ಸಂಭ್ರಮಿಸಿದ್ದಾರೆ.
ಈ ವೇಳೆ, ತಮ್ಮ ಮೆಚ್ಚಿನ ಸ್ಟಾರ್ ನಟರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದು, ಜನಸಂದಣಿ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

ಇದನ್ನೂ ಓದಿ: ಮಧುಗಿರಿ | ಜೀತ ವಿಮುಕ್ತರ ಪುನರ್ವಸತಿಗೆ ₹500 ಕೋಟಿ ಮೀಸಲಿಡಲು ಆಗ್ರಹ
