ಜಿಲ್ಲಾ ಮಟ್ಟದ ಹೋಂ ಸ್ಟೇ, ರೆಸಾರ್ಟ್ಸ್ ಹಾಗೂ ಲಾಡ್ಜ್ಸ್ ಮಾಲೀಕರು/ವ್ಯವಸ್ಥಾಪಕರುಗಳ ಸಭೆ ನಡೆಸಿ ಸೂಕ್ತ ತಿಳುವಳಿಕೆ, ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಜಿಲ್ಲಾ ಪೊಲೀಸ್ ಚಿಕ್ಕಮಗಳೂರು ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬುಧವಾರ ಸಭೆ ನಡೆಸಲಾಯಿತು.
ಜಿಲ್ಲೆಯಲ್ಲಿನ ಎಲ್ಲಾ ಪ್ರವಾಸಿ ತಾಣಗಳಲ್ಲಿನ ಹೋಂ ಸ್ಟೇಗಳು ರೆಸಾರ್ಟ್ & ಲಾಡ್ಜ್ಸ್ ಗಳಲ್ಲಿ ವಿದೇಶಿ ಪ್ರವಾಸಿಗರನ್ನು ಒಳಗೊಂಡಂತೆ ಎಲ್ಲಾ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆಯ ಸಂಬಂಧ ಸೂಕ್ತ ಕ್ರಮಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳುವುದು. ಹೊರ ವಲಯಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯುವ ಮುಂಚಿತವಾಗಿ ಸಂಬಂಧಿಸಿದ ಅಧಿಕಾರ ವ್ಯಾಪ್ತಿಯುಳ್ಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಅನುಮತಿಯನ್ನು ಪಡೆಯಬೇಕು.

ಪೊಲೀಸರ ಅನುಮತಿ ಇಲ್ಲದೆ, ನಿರ್ಜನ ಪ್ರದೇಶ ಹೊರವಲಯ ಅಥವಾ ಅರಣ್ಯ ಪ್ರದೇಶಗಳಲ್ಲಿ ಪ್ರವಾಸಿಗರನ್ನು ಕರೆದೊಯ್ದಲ್ಲಿ ದುಷ್ಕರ್ಮಿಗಳಿಂದ ಅಥವಾ ಕಾಡುಪ್ರಾಣಿಗಳಿಂದ ಸಂಭವಿಸುವ ದುರ್ಘಟನೆಗಳಿಗೆ ಹೋಂ ಸ್ಟೇ, ರೆಸಾರ್ಟ್ ಅಥವಾ ಲಾಡ್ಜ್ ಮಾಲೀಕರುಗಳೇ ಜವಾಬ್ದಾರರಾಗಿರುತ್ತಾರೆ ಹಾಗೂ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಎಸ್ಪಿ ಡಾ.ವಿಕ್ರಂ ಅಮಟೆ ತಿಳಿಸಿದರು.
ರೆಸಾರ್ಟ್ ಗಳು / ಹೋಮ್ ಸ್ಟೇಗಳನ್ನು ನಿರ್ವಹಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳು:
1) ಹೋಂ ಸ್ಟೇಗಳು / ರೆಸಾರ್ಟ್ ಗಳಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. 2) ಡ್ರಗ್ಸ್ ಮತ್ತು ಮಾದಕ ವಸ್ತುಗಳ ಬಳಕೆ,ಮಾರಾಟ, ಸಂಗ್ರಹಣೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇದನ್ನು ಎಲ್ಲಾ ಅತಿಥಿಗಳಿಗೆ ಗೋಚರಿಸುವಂತೆ ಪ್ರಮುಖ ಸ್ಥಳದಲ್ಲಿ ಪ್ರದರ್ಶಿಸಬೇಕು. 3) ವಿದೇಶಿ ಪ್ರಜೆಗಳ ಆಗಮನದ ಬಗ್ಗೆ ತಕ್ಷಣ ಮಾಹಿತಿ ನೀಡಬೇಕು ಮತ್ತು ಫಾರ್ಮ್-ಸಿ ಅನ್ನು ತಕ್ಷಣ ಸ್ಥಳೀಯ ಪೊಲೀಸ್ ಠಾಣೆ ಮತ್ತು ಜಿಲ್ಲಾ ಪೊಲೀಸ್ ಕಚೇರಿಗೆ ಕಳುಹಿಸಬೇಕು. 4) ಆವರಣದ ಮುಖ್ಯ ದ್ವಾರ, ಒಳಗೆ ಮತ್ತು ಹೊರಗೆ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಸಿಸಿಟಿವಿ ದೃಶ್ಯಾವಳಿಗಳನ್ನು ಕನಿಷ್ಠ ಮೂರು ತಿಂಗಳವರೆಗೆ ಸಂಗ್ರಹಿಸಿಡಬೇಕು. 5) ವಿದೇಶಿ ಪ್ರಜೆಗಳು ಸೇರಿದಂತೆ ಎಲ್ಲಾ ಅತಿಥಿಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಬೇಕು ಹಾಗೂ ಹಲವು ಸೂಚನೆಗಳೊಂದಿಗೆ ಜಿಲ್ಲಾ ಪೊಲೀಸರಿಂದ ಮಾಹಿತಿ ತಿಳಿಸಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸರ್ಕಾರಿ ಶಾಲೆಗೆ ಹೈಟೆಕ್ ಸ್ಪರ್ಶ; ದಾನಿಗಳಿಗೆ ಧನ್ಯವಾದ ಅರ್ಪಿಸಿದ ಶಾಲೆ
ಈ ವೇಳೆ ಶೈಲೇಂದ್ರ ಪೊಲೀಸ್ ಉಪಾದೀಕ್ಷಕರು ಚಿಕ್ಕಮಗಳೂರು ಉಪ ವಿಭಾಗ, ಕೆ ಸಿ ಆನಂದ್ ಡಿಎಫ್ಓ (ಸಾಮಾಜಿಕ ಅರಣ್ಯ), ರಮೇಶ್ ಬಾಬು ಡಿಎಫ್ಓ ಚಿಕ್ಕಮಗಳೂರು, ನಂದೀಶ್ ಡಿಎಫ್ಓ ಕೊಪ್ಪವಿಭಾಗ, ಶಿವರಾತ್ರಿಶ್ವರ ಸ್ವಾಮಿ ಎಸಿಎಫ್ ಭದ್ರಾ ವೈಲ್ಡ್ ಲೈಫ್, ಉಮರ್ ಬಾಷಾ ಎಸಿಎಫ್ ತರೀಕೆರೆ, ಎ ಎಸ್ ಮೋಹನ್ ಎಸಿಎಫ್ ಚಿಕ್ಕಮಗಳೂರು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕರಾದ ನಾಗರಾಜ್ ಚಿಟ್ಟ ಸೇರಿದಂತೆ ಜಿಲ್ಲೆಯಲ್ಲಿನ ಹೋಂ ಸ್ಟೇ ರೆಸಾರ್ಟ್ ಲಾಡ್ಜ್ಸ್ ಮಾಲೀಕರು /ವ್ಯವಸ್ಥಾಪಕರುಗಳು ಉಪಸ್ಥಿತರಿದ್ದರು.
