ಕಾಫಿನಾಡಿನಲ್ಲಿ ಮಾರ್ಚ್ 15 ರಿಂದ 17 ರವರೆಗೆ ಉರುಸ್ ಹಬ್ಬದ ಹಿನ್ನೆಲೆಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ಸಾರ್ವಜನಿಕರ ಸುರಕ್ಷತೆ ಮತ್ತು ವ್ಯವಸ್ಥೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಎಂದು ಜಿಲ್ಲಾ ಅಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
ಈ ನಿರ್ಬಂಧವು ಚಂದ್ರದ್ರೋಣ ಪರ್ವತ ಸರಣಿಯ ಪ್ರಮುಖ ಪ್ರವಾಸಿ ತಾಣಗಳಾದ ದತ್ತಪೀಠ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರ ಮತ್ತು ಝರಿಫಾಲ್ಸ್ ಗೆ ಅನ್ವಯಿಸುತ್ತದೆ. ಹಾಗೆಯೇ, ಬಾಬಾ ಬುಡನ್ ಗಿರಿಯ ವ್ಯಾಪ್ತಿಯಲ್ಲಿ ಹೋಂ ಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ಈಗಾಗಲೇ ಬುಕ್ಕಿಂಗ್ ಮಾಡಿರುವ ಪ್ರವಾಸಿಗರಿಗೆ ಮಾತ್ರ ಪ್ರವೇಶವನ್ನು ಅನುಮತಿಸಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸರ್ಕಾರಿ ಶಾಲೆಗೆ ಹೈಟೆಕ್ ಸ್ಪರ್ಶ; ದಾನಿಗಳಿಗೆ ಧನ್ಯವಾದ ಅರ್ಪಿಸಿದ ಶಾಲೆ
ಚಿಕ್ಕಮಗಳೂರು ವ್ಯಾಪ್ತಿಯ ಸ್ಥಳೀಯ ನಿವಾಸಿಗಳಿಗೆ ಈ ನಿರ್ಬಂಧ ಅನ್ವಯಿಸುವುದಿಲ್ಲ. ಉರುಸ್ ಹಬ್ಬಕ್ಕೆ ಆಗಮಿಸುವ ಭಕ್ತಾದಿಗಳ ಭಾರೀ ವಾಹನಗಳ ಸಂಚಾರವನ್ನು ಕೂಡ ನಿರ್ಬಂಧಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ಆದೇಶವನ್ನು ಹೊರಡಿಸಿದರು.
