ಬಿಬಿಎಂಪಿ | ಬಾಕಿ ಬಿಲ್ ಪಾವತಿ ಮಾಡದಿದ್ದರೇ ಕಾಮಗಾರಿ ಸ್ಥಗಿತ: ಗುತ್ತಿಗೆದಾರರ ಸಂಘ

Date:

Advertisements
  • ಹೊಸ ಸರ್ಕಾರ ಬಂದ ನಂತರ ಬಿಲ್ ಪಾವತಿ ಸ್ಥಗಿತ
  • ಕಳೆದ 26 ತಿಂಗಳ ಬಿಲ್ ಪಾವತಿ ಮಾಡುವುದು ಬಾಕಿ

ಅಮೃತ ನಗರೋತ್ಥಾನ ಯೋಜನೆಯಡಿ ಮಂಜೂರಾಗಿರುವ ಕನಿಷ್ಠ ₹650 ಕೋಟಿ ಬಾಕಿ ಬಿಲ್‌ಗಳನ್ನು ಸರ್ಕಾರ ಬಿಡುಗಡೆ ಮಾಡಬೇಕು. ಒಂದು ವೇಳೆ, ವಿಫಲವಾದರೇ ಜೂನ್ 29 ರಿಂದ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್, “ಗುತ್ತಿಗೆದಾರರಿಗೆ ನೀಡಬೇಕಾದ ₹2,500 ಕೋಟಿ ಕಾಮಗಾರಿಯ ಬಾಕಿ ಬಿಲ್ ಇನ್ನೂ ಪಾವತಿಯಾಗಿಲ್ಲ. ಕಳೆದ ಕೆಲವು ತಿಂಗಳ ಹಿಂದೆ ಬಿಬಿಎಂಪಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದಾಗ ಮೂರು ತಿಂಗಳು ಬಿಲ್ ಪಾಸ್ ಮಾಡಿದ್ದರು. ಅಂದಾಜು ₹250 ಕೋಟಿ ಬಿಲ್ ಪಾವತಿ ಮಾಡಿದ್ದಾರೆ. ಹೊಸ ಸರ್ಕಾರ ಬಂದ ನಂತರ ಬಿಲ್ ಪಾವತಿ ಸ್ಥಗಿತಗೊಳಿಸಲಾಗಿದೆ” ಎಂದು ತಿಳಿಸಿದರು.

“ಕಳೆದ 26 ತಿಂಗಳ ಬಿಲ್ ಪಾವತಿ ಮಾಡುವುದು ಬಾಕಿ ಉಳಿದಿದೆ. ಇದರಿಂದ ಗುತ್ತಿಗೆದಾರರು ಕಂಗಾಲಾಗಿದ್ದಾರೆ. ಸರ್ಕಾರದ ಮೇಲೆ ಹೊರೆಯಾಗಿರುವ ಕಾಮಗಾರಿಗಳು, ಹಿಂದಿನ ಬಿಜೆಪಿ ಸರ್ಕಾರವು ಪ್ರಾರಂಭಿಸಿದ ಯೋಜನೆಗಳ ಮರುಪರಿಶೀಲನೆಯವರೆಗೂ ಬಿಲ್‌ಗಳಿಗೆ ತಡೆಹಿಡಿದಿದ್ದಾರೆ. ಚಾಲ್ತಿಯಲ್ಲಿದ್ದ ಕಾಮಗಾರಿಗಳನ್ನು ಕೂಡ ಸರ್ಕಾರದ ಆದೇಶ ಎಂದು ಬಿಲ್ ಪಾವತಿ ಮಾಡುವುದನ್ನು ಸ್ಥಗಿತಗೊಳಿಸಿದ್ದಾರೆ. ಸದ್ಯಕ್ಕೆ ಬಿಬಿಎಂಪಿಯಲ್ಲಿ 1000 ಗುತ್ತಿಗೆದಾರರು ಇದ್ದಾರೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದರೋಡೆಗೆ ಹೊಂಚು ಹಾಕಿದ್ದ ಐವರು ಆರೋಪಿಗಳ ಬಂಧನ

“ಈ ತಿಂಗಳೊಳಗೆ ಬಾಕಿ ಬಿಲ್ ಪಾವತಿ ಮಾಡಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಮನವಿ ಮಾಡಿದ್ದೇವೆ. ಈ ತಿಂಗಳ ಒಳಗೆ ಬಾಕಿ ಬಿಲ್ ಪಾವತಿ ಮಾಡದಿದ್ದರೇ, ಹೋರಾಟ ಮಾಡಲಾಗುವುದು. ಹಿಂದಿನ ಬಿಜೆಪಿ ಸರ್ಕಾರ ಗುತ್ತಿಗೆದಾರರಿಗೆ ಹುಂಡಿ ಪಾವತಿ ಮಾಡುತ್ತೇವೆ ಎಂದು ಹೇಳಿತ್ತು. ಆದರೆ, ಅದು ಅಸ್ತಿತ್ವಕ್ಕೆ ಬರಲೇ ಇಲ್ಲ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X