ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕನ್ನಡ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಮಾರ್ಚ್ 14ರಂದು ವಜಾಗೊಳಿಸಿದೆ.
2025ರ ಮಾರ್ಚ್ 3ರಂದು ಬರೋಬ್ಬರಿ 14.2 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡುವಾಗ ರನ್ಯಾ ಸಿಕ್ಕಿಬಿದಿದ್ದಾರೆ. ರನ್ಯಾ ತಪಾಸಣೆ ನಡೆಸಿದಾಗ ಅವರ ಬಳಿ ಸುಮಾರು 12.56 ಕೋಟಿ ರೂಪಾಯಿ ಮೌಲ್ಯದ 14.2 ಕೆಜಿ ಚಿನ್ನ ಪತ್ತೆಯಾಗಿದೆ. ರನ್ಯಾ ತೊಡೆಗಳಲ್ಲಿ ಟೇಪ್ ಮೂಲಕ ಚಿನ್ನದ ಬಾರ್‌ಗಳನ್ನು ಸುತ್ತಲಾಗಿದ್ದು, ಚಿನ್ನದ ಮೇಲೆ ಬ್ಯಾಡೆಂಜ್ ಹಾಕಲಾಗಿತ್ತು ಎಂದು ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ | ಬಿಜೆಪಿ, ಕಾಂಗ್ರೆಸ್ ನಡುವೆ ‘ಗೋಲ್ಡ್’ ರಾಜಕೀಯ; ಸಮಗ್ರ ವರದಿ
ಇನ್ನು ರನ್ಯಾ ರಾವ್‌ಗೆ ಚಿನ್ನ ಕಳ್ಳಸಾಗಣೆಗೆ ಸಹಕಾರ ನೀಡಿದ ಆರೋಪದಲ್ಲಿ ಸ್ನೇಹಿತ ತರುಣ್ ರಾಜು ಬಂಧನ ಮಾಡಲಾಗಿದೆ. ಸದ್ಯ ನ್ಯಾಯಾಲಯವು ತರುಣ್‌ಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
