ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ಶುಕ್ರವಾರ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಸಮೀಪ ಸ್ಕೂಟರ್ ಒಂದು ಬಂದು ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಕುಮಾರ ಪಟ್ಟಣ ಸಮೀಪದ ಸ್ವಗ್ರಾಮಕ್ಕೆ ತೆರಳುವಾಗ ಈ ಅಪಘಾತ ನಡೆದಿದೆ. ಮಾರ್ಗಮಧ್ಯೆ ಮೂತ್ರ ವಿಸರ್ಜನೆಗಾಗಿ ಕಾರಿನಿಂದ ಇಳಿಯುವಾಗ ಸ್ಕೂಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರುದ್ರಪ್ಪ ಲಮಾಣಿ ರಸ್ತೆಗೆ ಬಿದ್ದಿದ್ದು, ಅವರ ತಲೆ, ಕೈಕಾಲುಗಳಿಗೆ ಗಾಯವಾಗಿದೆ.
ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಎಸ್ ಎಸ್ ಆಸ್ಪತ್ರೆಗೆ ಅವರನ್ನು ಕಳುಹಿಸಲಾಗಿದ್ದು, ರುದ್ರಪ್ಪ ಲಮಾಣಿ ಅವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಹಿರಿಯೂರು DYSP ಶಿವಕುಮಾರ್, ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಆನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.