ಎಸ್ಸಿ, ಎಸ್ಟಿ, ಓಬಿಸಿ ಹಾಗೂ ಮುಸ್ಲಿಮರಿಗೆ 2 ಕೋಟಿ ರೂ. ವರೆಗೆ ಗುತ್ತಿಗೆ ಮೀಸಲು: ಸಂಪುಟ ತೀರ್ಮಾನ

Date:

Advertisements

ಪರಿಶಿಷ್ಟ ಜಾತಿ–ಪಂಗಡ, ಹಿಂದುಳಿದವರು ಹಾಗೂ ಮುಸ್ಲಿಮ್‌ ಸಮುದಾಯದ ಗುತ್ತಿಗೆದಾರರಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗಳು, 1 ಕೋಟಿ ರೂ.ವರೆಗಿನ ಸರಕು ಮತ್ತು ಸೇವೆಗಳ ಪೂರೈಕೆಯ ಟೆಂಡರ್‌ನಲ್ಲಿ ಮೀಸಲಾತಿ ಕಲ್ಪಿಸುವ ತೀರ್ಮಾನದ ಜೊತೆಗೆ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡಲು ರಾಜ್ಯ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ.

ವಿಧಾನಸೌಧದ ಕ್ಯಾಬಿನೆಟ್ ಹಾಲ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ವಿಚಾರವಾಗಿ ಬಜೆಟ್​ನಲ್ಲಿ ಘೋಷಣೆ ಮಾಡಿದಂತೆ ಸದನಕ್ಕೆ ವಿಧೇಯಕ ತರಲು ಅನುಮೋದನೆ ನೀಡಲಾಗಿದೆ.

ಒಂದು ಕೋಟಿವರೆಗಿನ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವುದು. ಹಿಂದುಳಿದ, ಇತರೇ ಹಿಂದುಳಿದ ವರ್ಗಗಳಿಗೆ ಮಾತ್ರ ಇದ್ದ ಕಾಮಗಾರಿ ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೂ ಮೀಸಲಾತಿ ವಿಸ್ತರಿಸಿ ಗುತ್ತಿಗೆ ನೀಡಲು ಅವಕಾಶ ಕೊಡಲು ನಿರ್ಧಾರ ಮಾಡಲಾಗಿದೆ.

Advertisements

ಎಸ್​ಸಿ ಎಸ್​ಟಿ ಸಮುದಾಯಕ್ಕೆ ಈ ಹಿಂದೆ ಇದ್ದ 1 ಕೋಟಿವರೆಗಿನ ಮೊತ್ತ ವಿಸ್ತರಿಸಿ 2 ಕೋಟಿವರೆಗೆ ಮೀಸಲಾತಿ ಅವಕಾಶ ಕಲ್ಪಿಸಲಿದೆ. ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಇದೇ ವೇಳೆ ಇ-ಖಾತಾ ನಿರೀಕ್ಷೆಯಲ್ಲಿದ್ದವರಿಗೂ ಸರ್ಕಾರ ಸಿಹಿ ಸುದ್ದಿ ನೀಡಿದೆ. ಗ್ರಾಮೀಣ ಭಾಗದಲ್ಲಿ ಇ-ಖಾತಾ ನೀಡಲು ಸಚಿವ ಸಂಪುಟದ ಒಪ್ಪಿಗೆ ನೀಡಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಧೇಯಕಕ್ಕೆ ಅನುಮೋದನೆ ಕೊಡಲಾಗಿದೆ. ಈ ವಿಧೇಯಕ ಅಂಗೀಕಾರವಾದರೆ, ಗ್ರಾಮೀಣ ಭಾಗದ ಕಂದಾಯ ಬಡಾವಣೆ, ಗ್ರಾಮ ಠಾಣಾ ವ್ಯಾಪ್ತಿಯಲ್ಲಿನ ಮನೆ ನಿವೇಶನಗಳು ಸಕ್ರಮ ಮಾಡಲಾಗುತ್ತದೆ. ಕೆಪಿಎಸ್​ಸಿಯಲ್ಲಿ ಲೋಪ ದೋಷಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಸುಧಾರಣಾ ಕ್ರಮಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.

ಕೆಪಿಎಸ್‌ಸಿ ಸದಸ್ಯರ ಸಂಖ್ಯೆ ಇಳಿಕೆಗೆ ಒಲವು

ಲೋಕಸೇವಾ ಆಯೋಗದ ಪರೀಕ್ಷೆ ಆಡಳಿತ ಸುಧಾರಣೆಗೆ ಪ್ರತ್ಯೇಕ ಸಮಿತಿ ರಚನೆಗೆ ಸಂಪುಟ ಒಪ್ಪಿಗೆ ನೀಡಿದೆ. ಸಮಿತಿ ಶಿಫಾರಸುಗಳನ್ನು ಪಾಲನೆ ಮಾಡುವ ಬಗ್ಗೆಯೂ ಸಂಪುಟ ಸಭೆಯಲ್ಲಿ ಸಮಾಲೋಚನೆ ಮಾಡಲಾಗಿದೆ. ಲೋಕಸೇವಾ ಆಯೋಗದ ಸಮಗ್ರ ಸುಧಾರಣೆಗೆ ಕ್ರಮ ವಹಿಸಲು ಸಂಪುಟ ತೀರ್ಮಾನ ಕೈಗೊಳ್ಳಲಾಗಿದೆ. ಆಯೋಗದ ಕಾರ್ಯವೈಖರಿ ಮತ್ತು ಅಕ್ರಮಗಳ ಕುರಿತು ವಿಧಾನಸಭೆಯಲ್ಲಿ ಇತ್ತೀಚೆಗೆ ಪಕ್ಷಾತೀತವಾಗಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಆಯೋಗದ ಸದಸ್ಯರ ಸಂಖ್ಯೆಯನ್ನು 8ಕ್ಕೆ (ಅಧ್ಯಕ್ಷರು ಸೇರಿ) ಇಳಿಸಲು ಸಚಿವ ಸಂಪುಟ ಸಭೆಯಲ್ಲಿ ಒಲವು ವ್ಯಕ್ತವಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಸ್ತುತ ಈಗ ಸದಸ್ಯರ ಸಂಖ್ಯೆ 15 ಇದೆ. ಆಯೋಗಕ್ಕೆ ಅರ್ಹರನ್ನು ಆಯ್ಕೆ ಮಾಡಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಶೋಧ ಸಮಿತಿಯೊಂದನ್ನು ರಚಿಸಲು ಸಭೆಯಲ್ಲಿ ಚರ್ಚೆಯಾಗಿದ್ದು, ಮುಂದಿನ ಅಧಿವೇಶನದ ಹೊತ್ತಿಗೆ ಸಮಗ್ರ ಸುಧಾರಣಾ ವಿಧೇಯಕ ಮಂಡನೆ ಮಾಡುವ ಸಾಧ್ಯತೆ ಇದೆ.

ಸಂಪುಟ ಸಭೆಯ ಪ್ರಮುಖನಿರ್ಧಾರಗಳು…

  • ಬೆಂಗಳೂರಿನ ಹೆಬ್ಬಾಳದಲ್ಲಿರುವ ಕೃಷಿ ಇಲಾಖೆಯ 4 ಎಕರೆ 25 ಗುಂಟೆ ಜಾಗವನ್ನು ಅಂತಾರಾಷ್ಟ್ರೀಯ ಪುಷ್ಪ ಹರಾಜು ಬೆಂಗಳೂರು ಸಂಸ್ಥೆಗೆ ಎರಡು ವರ್ಷಗಳ ಅವಧಿಗೆ ಬಾಡಿಗೆ ರಹಿತವಾಗಿ ನೀಡುವುದು.
  • ರಾಜ್ಯದಲ್ಲಿ ‘ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ-ವಿ2’ ಅನುಷ್ಠಾನ
  • ಪಿಎಂ ಜನ್​ವುನ್ ಬ್ಯಾಚ್-2ರಡಿ 39.25 ಕೋಟಿ ರೂ. ವೆಚ್ಚದಲ್ಲಿ 39.99 ಕಿ.ಮೀ. ಉದ್ದದ 22 ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕಾಮಗಾರಿಯು ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಏಜೆನ್ಸಿಯಿಂದ ಅನುಷ್ಠಾನ.
  • ಬೆಂಗಳೂರು ಬಯೋಇನ್ನೋವೇಷನ್ ಸೆಂಟರ್ (BBC) ಪುನರ್ನಿರ್ಮಾಣ ಮತ್ತು ಉಪಕರಣಗಳ ಬದಲಿಗಾಗಿ 96.77 ಕೋಟಿ ರೂ. ಸಹಾಯಕ್ಕಾಗಿ ಅನುಮೋದನೆ.
  • ಬೆಂಗಳೂರಿನಲ್ಲಿರುವ ಸರ್ಕಾರಿ ದಂತ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಕಟ್ಟಡ ನವೀಕರಣ, ಹೊಸದಾಗಿ ಮೂರು ಅಂತಸ್ತಿನ ಕಟ್ಟಡ ನಿರ್ಮಾಣ ಹಾಗೂ ಉಪಕರಣ/ ಪೀಠೋಪಕರಣ ಖರೀದಿಗೆ 40.03 ಕೋಟಿ ರೂ. ವೆಚ್ಚ
  • ಅಗ್ನಿ ದುರಂತದಲ್ಲಿ ಹಾನಿಗೀಡಾದ ಬೆಂಗಳೂರು ಜೈವಿಕ ನಾವೀನ್ಯತಾ ಕೇಂದ್ರ ದುರಸ್ತಿ, ಪುನರ್ ಸ್ಥಾಪನೆ ಮತ್ತು ಉಪಕರಣಗಳ ಬದಲಾವಣೆಗೆ 96.77 ಕೋಟಿ ರೂ. ನೆರವು
  • ಮಂಡ್ಯದಲ್ಲಿ ಸಮಗ್ರ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ ಸ್ಥಾಪನೆಯನ್ನು ಕೈಬಿಡಲು. ಚಾಲ್ತಿ ತೋಟಗಾರಿಕಾ ಕಾಲೇಜು ಮುಂದುವರಿಸಲು ಸಂಪುಟ ಸಭೆ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
  • ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಪೋಷಣ್ ಅಭಿಯಾನದಡಿ ಅಂಗನವಾಡಿ ಕೇಂದ್ರಗಳಿಗೆ 21.53 ಕೋಟಿ ರೂ.ಗಳ ವೆಚ್ಚದಲ್ಲಿ ಒಟ್ಟು 26918 ಗ್ರೋತ್ ಮಾನಿಟರಿಂಗ್ ಡಿವೈಸ್ ಕಿಟ್​ಗಳ ಖರೀದಿತ
  • ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಅಪರ ನಿಬಂಧಕರು (ಕಾನೂನು ಸಲಹೆ), ಉಪ ಲೋಕಾಯುಕ್ತ-2 ಅವರ ಆಪ್ತ ಕಾರ್ಯದರ್ಶಿ ಹುದ್ದೆಗಳಿಗೆ ಜಿಲ್ಲಾ ನಿವೃತ್ತ ನ್ಯಾಯಾಧೀಶರಾದ ಕೆ.ಅಮರನಾರಾಯಣ ಮತ್ತು ಸಿ.ರಾಜಶೇಖರ ಗುತ್ತಿಗೆ ಆಧಾರದಲ್ಲಿ ನೇಮಕ
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X