ಚಿತ್ರದುರ್ಗ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಗಾದಿಲಿಂಗಪ್ಪ ಮೇಲೆ ಬಿಜೆಪಿ ಮಧುಗಿರಿ ಘಟಕದ ಹನುಮಂತೇಗೌಡ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿರುವ ಹನುಮಂತೇಗೌಡ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿತ್ರದುರ್ಗದಲ್ಲಿ ತುರುವನೂರು ರಸ್ತೆಯಲ್ಲಿ ಘಟನೆ ನಡೆದಿದೆ. ಶುಕ್ರವಾರ ತಡರಾತ್ರಿ, ಆರೋಪಿ ಹನುಮಂತೇಗೌಡ ತನ್ನ ಸಂಗಡಿಗರೊಂದಿಗೆ ಗುಂಪು ಕಟ್ಟಿಕೊಂಡು ರಸ್ತೆಯಲ್ಲಿ ನಿಂತಿದ್ದರು. ಅದನ್ನು ಪ್ರಶ್ನಿಸಿದ್ದಕ್ಕಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಪಿಎಸ್‌ಐ ಗಾದಿಲಿಂಗಪ್ಪ ಅವರ ಕೈಗಳಿಗೆ ಗಾಯಗಳಾಗಿವೆ.
ಆರೋಪಿ ಹನುಮಂತೇಗೌಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದಾಗ್ಯೂ, ಪೊಲೀಸರೇ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹನುಮಂತೇಗೌಡ ಕೂಡ ಆರೋಪ ಮಾಡಿದ್ದಾರೆ. ತಮಗೂ ಎದೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜಾತಿ ಗಣತಿ ಜವಾಬ್ದಾರಿಯನ್ನು ಇವರಿಗೆ ನೀಡಲಿ ಸರಕಾರ
ಬಿಜೆಪಿಯ ನಾಯಕರು ಇದಕ್ಕೆ ಉತ್ತರ ಕೋಡಿ