ಕನ್ನಡ ಹಾಗೂ ತುಳು ವಿದ್ವಾಂಸ ಮಂಗಳೂರಿನ ಡಾ. ವಾಮನ ನಂದಾವರ ನಿಧನರಾಗಿದ್ದಾರೆ. ಮೂರು ವರ್ಷಗಳಿಂದ ಉಳಾಯಿಬೆಟ್ಟುವಿನಲ್ಲಿರುವ ವೃದ್ಧಾಶ್ರಮವೊಂದರಲ್ಲಿ ಜೀವನ ನಡೆಸುತ್ತಿದ್ದ ವಾಮನ ಅವರು ಇಂದು (ಮಾ.15) ಕೊನೆಯುಸಿರೆಳೆದಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ತುಳು ಜಾನಪದ ವಿದ್ವಾಂಸರಾಗಿದ್ದ ಅವರು, ಕೋಟಿ-ಚೆನ್ನಯರ ಕುರಿತು ಸಂಶೋಧನೆ ಕೈಗೊಂಡಿದ್ದರು. ವಾಮನ ಅವರು ಈವರೆಗೆ ಸುಮಾರು 25 ಕೃತಿಗಳನ್ನು ರಚಿಸಿದ್ದಾರೆ. ಪ್ರಕಾಶಕ ಹಾಗೂ ಸಮಾಜದ ಸಂಘಟಕರಾಗಿಯೂ ಗುರುತಿಸಿಕೊಂಡಿದ್ದರು.
ಮಂಗಳೂರಿನಲ್ಲಿರುವ ಉವ ತುಳು ಭವನದಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಮಂಗಳೂರು | ದಿಗಂತ್ ನಾಪತ್ತೆ ಪ್ರಕರಣಕ್ಕೆ ಕೋಮುಬಣ್ಣ; ಶಾಸಕರು, ಸಂಘಪರಿವಾರದ ಪ್ರಮುಖರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
ವಾಮನ ನಂದಾವರ ಹಾಗೂ ಅವರ ಪತ್ನಿ ಲೇಖಕಿ ಚಂದ್ರಕಲಾ ನಂದಾವರ ದಂಪತಿ ಈಚೆಗಷ್ಟೆ ಎಸ್ ವಿ ಪರಮೇಶ್ವರಭಟ್ಟ ಪ್ರಶಸ್ತಿಗೆ ಭಾಜನರಾಗಿದ್ದರು.
