ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ಕಾರು ಸಂಪೂರ್ಣ ಅಪ್ಪಚ್ಚಿಯಾಗಿರುವ ಘಟನೆ ಬೆಳಗಾವಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ ಸಂಭವಿಸಿದೆ.
ಏಕಾಏಕಿ ಕಾರಿನ ಮೇಲೆ ಲಾರಿ ಬಿದ್ದು ಕಾರು ನಜ್ಜುಗುಜ್ಜಾಗಿದೆ. ಕಾರಿನೊಳಗೆ ಸಿಲುಕಿದ್ದ ಇಬ್ಬರು ಸವಾರರು ನರಳಾಡಿದ್ದಾರೆ. ತಮ್ಮನ್ನು ರಕ್ಷಿಸುವಂತೆ ಕೈಬೀಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಇಬ್ಬರೂ ಬದುಕುಳಿದಿದ್ದಾರೆ. ಪರಪ್ಪ ಬಾಳೆಕಾಯಿ, ನಿಂಗಪ್ಪ ಕೊಪ್ಪದ ಭೀಕರ ಅಪಘಾತದಲ್ಲಿ ಬದುಕುಳಿದವರು.

ಇದನ್ನೂ ಓದಿ: ಬೆಳಗಾವಿ | ಗೋಕಾಕ ನಗರಸಭೆ: ₹4.95 ಲಕ್ಷ ಉಳಿತಾಯದ ಬಜೆಟ್ ಮಂಡನೆ
ಇತ್ತೀಚೆಗಷ್ಟೇ ಬೆಂಗಳೂರಿನ ಹೊರವಲಯದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಂಟೈನರ್ ಲಾರಿ ಬಿದ್ದು ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದರು. ಅದೇ ರೀತಿಯಲ್ಲೇ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಮುಗುಚಿ ಬಿದ್ದಿದ್ದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

