ಎಲ್ಲ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಸೈಬರ್ ಅಪರಾಧಗಳ ಕುರಿತು ತರಬೇತಿ: ಸಚಿವ ಪರಮೇಶ್ವರ್

Date:

Advertisements

ರಾಜ್ಯದ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸೈಬರ್ ಅಪರಾಧಗಳ ಕುರಿತು ಹೆಚ್ಚಿನ ಅರಿವು ಮತ್ತು ತರಬೇತಿ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ಸಿಐಡಿ ಹಾಗೂ ಸೈಬರ್ ಕ್ರೈಮ್ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರ ವತಿಯಿಂದ ‌ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ “CIDECODE” ಸೈಬರ್ ಅಪರಾಧ ಶೃಂಗಸಭೆ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಸೈಬರ್ ಅಪರಾಧಗಳಿಗೆ ಯಾವುದೇ ರೀತಿಯ ಇತಿಮಿತಿಗಳಿಲ್ಲ. ಪ್ರಪಂಚದಲ್ಲಿ ಆಗುತ್ತಿರುವ ಸೈಬರ್ ಅಪರಾಧಗಳ ಕುರಿತು ಅರಿವು ಮೂಡಿಸಬೇಕು ಎಂಬ ಉದ್ದೇಶದಿಂದ ಸಿಸಿಐಟಿಆರ್ ಸ್ಥಾಪಿಸಲಾಗಿದೆ. ಈವರೆಗೆ 46 ಸಾವಿರಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ” ಎಂದು ತಿಳಿಸಿದರು.

Advertisements

“2023ರಲ್ಲಿ 22 ಸಾವಿರ ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿದ್ದವು. ಬ್ಯಾಂಕ್ ಅಕೌಂಟ್, ಡೇಟಾ ಹ್ಯಾಕ್, ಸರ್ಕಾರಿ ಖಾತೆಗಳು ಹ್ಯಾಕ್‌ ಆಗುವುದು ಸೇರಿದಂತೆ ನಾನಾ ರೀತಿಯ ಸೈಬರ್ ಅಪರಾಧಗಳು ಆಗುತ್ತಿವೆ. ಇದನ್ನು ತಡೆಗಟ್ಟದೆ ಹೋದರೆ ಮುಂದಿನ ದಿನಗಳಲ್ಲಿ ತೊಂದರೆಗಳಾಗುತ್ತವೆ. ಸಾಮಾನ್ಯ ಅಪರಾಧಗಳಿಗಿಂತ ಸೈಬರ್ ಕ್ರೈಂ ಹೆಚ್ಚಾಗುತ್ತಿವೆ” ಎಂದು ಹೇಳಿದರು.

“ಬೆಂಗಳೂರು ನಗರದಲ್ಲಿ ದಸಖಲಾಗುತ್ತಿರುವ ಸಾಮಾನ್ಯ ಅಪರಾಧಗಳಲ್ಲಿ ಶೇ. 30ರಷ್ಟು ಸೈಬರ್ ಅಪರಾಧಗಳು ದಾಖಲಾಗುತ್ತಿವೆ. ವೈಟ್‌ಫೀಲ್ಡ್ ವಿಭಾಗದ ವ್ಯಾಪ್ತಿಯಲ್ಲಿ ಶೇ.40ರಷ್ಟು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿವೆ. ಇದು ಇನ್ನು ಹೆಚ್ಚಾಗುವ ಸಾಧ್ಯತೆ ಇದೆ. ಆರಂಭಿಕ ಹಂತದಲ್ಲೆ ಹೆಚ್ಚು ಫೋಕಸ್ ಮಾಡಿ ತಡೆಗಟ್ಟಲು ಅಗತ್ಯ ಕ್ರಮ ವಹಿಸಲಾಗುವುದು” ಎಂದರು.

“ಕಾನೂನು ಸುವ್ಯವಸ್ಥೆಯನ್ನು ಬಲಪಡಿಸಲು ತಂತ್ರಜ್ಞಾನ ಮತ್ತು ತರಬೇತಿಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಜಾಗತಿಕವಾಗಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಗಟ್ಟಲು ತಾಂತ್ರಿಕ ಬಲವರ್ಧನೆಯನ್ನು ಹೆಚ್ಚಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಸಿಐಡಿ ಡಿಕೋಡ್ ಶೃಂಗಸಭೆಯು ಸಹಕಾರಿಯಾಗಲಿದೆ. ಹ್ಯಾಕಥಾನ್ ಮತ್ತು ಸೈಬರ್ ಲಾ ಐಡಿಯಾಥಾನ್‌ನಂತಹ ಕಾರ್ಯಕ್ರಮಗಳು ಸುರಕ್ಷಿತ ಡಿಜಿಟಲ್ ಕರ್ನಾಟಕ ಮತ್ತು ಸುರಕ್ಷಿತ ಭಾರತವನ್ನು ನಿರ್ಮಿಸುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ” ಎಂದು ಅಭಿಪ್ರಾಯಪಟ್ಟರು.

ಕೇಂದ್ರ ತನಿಖಾ ವಿಭಾಗವು (ಸಿಐಡಿ) ಆಯೋಜಿಸಿದ್ದ ಹ್ಯಾಕಥಾನ್ ಮತ್ತು ಸೈಬರ್ ಲಾ ಐಡಿಯಾಥಾನ್‌ಗಳಲ್ಲಿ ಭಾಗವಹಿಸಿ, ಡೀಪ್ ಫೇಕ್ ಪತ್ತೆ, ಬ್ಲಾಕ್ ಚೈನ್ ತಂತ್ರಜ್ಞಾನ ಬಳಕೆ ಸೇರಿದಂತೆ ಇನ್ನಿತರ ಸೈಬರ್ ಅಪರಾಧಗಳಿಗೆ ಸಮಸ್ಯೆಗಳನ್ನು ಬಗೆಹರಿಸಲು ತಂತ್ರಾಂಶಗಳನ್ನು ಅಭಿವೃದ್ಧಿಪಡಿಸುವ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗೃಹ ಸಚಿವ ಜಿ.ಪರಮೇಶ್ವರ ಅವರು ಬಹುಮಾನ ನೀಡಿ ಅಭಿನಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X