ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಮರಾಠಿಗ ಮಂಗೇಶ ಮೇಯರ್, ಉಪಮೇಯರ್ ಸ್ಥಾನಕ್ಕೆ ವಾಣಿ ಆಯ್ಕೆ

Date:

Advertisements

ಬೆಳಗಾವಿ ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಮಂಗೇಶ ಪವಾರ ಹಾಗೂ‌ ಉಪಮೇಯರ್ ಆಗಿ ವಾಣಿ‌ ವಿಲಾಸ ಜೋಶಿ‌ ಶನಿವಾರ ಬಹುಮತದಿಂದ ಆಯ್ಕೆಯಾದರು.

ಮೇಯರ್ ಸ್ಥಾನ ಸಾಮಾನ್ಯ ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. 40 ಸದಸ್ಯರನ್ನು ಹೊಂದಿರುವ ಬಿಜೆಪಿ ಗುಂಪು ಮತ್ತೊಮ್ಮೆ ಪಾಲಿಕೆ‌ ಚುಕ್ಕಾಣಿ ‌ಹಿಡಿದಿದೆ. ಮರಾಠಿಗರಾದ ಮಂಗೇಶ 41ನೇ ವಾರ್ಡಿನ ಸದಸ್ಯ, ಕನ್ನಡತಿಯಾದ ವಾಣಿ 43ನೇ ವಾರ್ಡಿನ ಸದಸ್ಯೆಯಾಗಿದ್ದಾರೆ.

ಈ ಎರಡೂ‌ ವಾರ್ಡುಗಳು ದಕ್ಷಿಣ ವಿಧಾನಸಭಾ‌ ಕ್ಷೇತ್ರಕ್ಕೆ ಬರುತ್ತವೆ. ಪಾಲಿಕೆ ಮೇಲೆ ಬಿಗಿ ಹಿಡಿತ ಸಾಧಿಸಿರುವ ಶಾಸಕ ಅಭಯ ಈ ಅಯ್ಕೆಗೆ ಮುಂಚೂಣಿ ನಾಯಕತ್ವ ವಹಿಸಿದ್ದರು.

Advertisements

ಚುನಾವಣಾ ಪ್ರಕ್ರಿಯೆ: ಸರಿಯಾಗಿ 1 ಗಂಟೆಗೆ ಪ್ರಾದೇಶಿಕ ಆಯುಕ್ತ ಎಸ್ ಬಿ ಶೆಟ್ಟೆನ್ನವರ ಚುನಾವಣಾ ಪ್ರಕ್ರಿಯೆ ಆರಂಭಿಸಿದರು. ಮೇಯರ್ ಸ್ಥಾನಕ್ಕೆ ಬಿಜೆಪಿಯ ಮಂಗೇಶ ಪವಾರ್, ರಾಜು ಭಾತಖಾಂಡೆ, ಎಂಇಎಸ್ ನ ಬಸವರಾಜ ಮಾರುತಿ ಮೋದಗೇಕರ, ಎಐಎಂಐಎಂನ ಶಾಹಿದಖಾನ್ ಪಠಾಣ ತಲಾ 2 ನಾಮಪತ್ರ ಸಲ್ಲಿಸಿದ್ದರು. 2 ನಿಮಿಷ ಅವಕಾಶದ ಬಳಿಕ ರಾಜು ಭಾತಖಾಂಡೆ ಹಾಗೂ ಶಾಹಿದಖಾನ್ ಪಠಾಣ ಉಮೇದುವಾರಿಕೆ ಹಿಂಪಡೆದರು.

ಮಂಗೇಶ ಹಾಗೂ ಬಸವಾರಾಜ ಮಧ್ಯೆ ಚುನಾವಣೆ ನಡೆಯಿತು. ಮಂಗೇಶ ಪರವಾಗಿ 40 ವಿರುದ್ಧವಾಗಿ 5 ಮತಗಳು ಚಲಾವಣೆಯಾದವು. ತಟಸ್ಥವಾಗಿ ಇರುವ ಆಯ್ಕೆಗೆ ಯಾರೂ ಕೈ ಎತ್ತಲಿಲ್ಲ. ಬಸವಾರಾಜ ಪರವಾಗಿ 20, ವಿರೋಧವಾಗಿ 40 ಮತಗಳು ಬಂದವು.

ಅತಿ ಹೆಚ್ಚು ಮತ ಪಡೆದ ಮಂಗೇಶ ಅವರನ್ನು ಮೇಯರ್ ಎಂದು ಘೋಷಿಸಲಾಯಿತು. ಉಪಮೇಯರ್ ಸ್ಥಾನಕ್ಕೆ ವಾಣಿ ವಿಲಾಸ ಜೋಶಿ, ದೀಪಾಲಿ ಟೊಪ್ಪಗಿ, ಶ್ರೀಮತಿ ಖುರ್ಷಿದ್ ಮುಲ್ಲಾ, ಲಕ್ಷ್ಮೀ ಲೋಕರಿ ತಲಾ 2 ನಾಮಪತ್ರ ಸಲ್ಲಿದ್ದರು. ಖುರ್ಷಿದ್ ಮುಲ್ಲಾ ಹಾಗೂ ದೀಪಾಲಿ ಉಮೇದುವಾರಿಕೆ ವಾಪಸ್ ಪಡೆದರು.

ಈ ಸುದ್ದಿ ಓದಿದ್ದೀರಾ? ಅಥಣಿ | ʼಪರಿಶಿಷ್ಟರಿಗೆ 50 ವರ್ಷಗಳಿಂದ ಮರೀಚಿಕೆಯಾದ ಮೂಲಸೌಕರ್ಯʼ

ಕಣದಲ್ಲಿ ಉಳಿದ ವಾಣಿ ವಿಲಾಸ ಜೋಶಿ ಪರವಾಗಿ 40 ವಿರೋಧವಾಗಿ‌ 19 ಮತಗಳು ಬಂದವು. ಲಕ್ಷ್ಮೀ ಲೋಕರಿ ಪರವಾಗಿ 20 ವಿರೋಧವಾಗಿ 40 ಮತಗಳು ಬಂದವು. ಹೆಚ್ಚು ಮತ ಪಡೆದ ವಾಣಿ ಅವರನ್ನು ಉಪಮೇಯರ್ ಎಂದು‌ ಘೋಷಿಸಲಾಯಿತು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಸತೀಶ ಜಾರಕಿಹೊಳಿ, ಶಾಸಕ ಆಸಿಫ್ ಸೇಠ್, ಸಂಸದೆ ಪ್ರಿಯಾಂಕ ಜಾರಕಿಹೊಳಿ ಹಾಗೂ ಒಬ್ಬ ಪಾಲಿಕೆ ಸದಸ್ಯ ಗೈರಾದರು. 65 ಮತದಾರ ಪೈಕಿ 60 ಮಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X