- ಗ್ಯಾರಂಟಿ ಘೋಷಣೆಯಂತೆ ಜುಲೈ 1ರಂದೇ ಅನ್ನಭಾಗ್ಯ ಜಾರಿ ಮಾಡಲು ಒತ್ತಾಯ
- ಪ್ರತಿಭಟನಾ ನಿರತ ಬಿಜೆಪಿ ನಾಯಕರನ್ನು ಬಂಧಿಸಿ ಕರೆದೊಯ್ದ ಪೊಲೀಸರು
ರಾಜ್ಯ ಸರ್ಕಾರ ತಾನು ಘೋಷಿಸಿದಂತೆಯೇ ಅನ್ನಭಾಗ್ಯ ಗ್ಯಾರಂಟಿ ಯೋಜನೆಯಡಿ ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ನೀಡಲೇಬೇಕು ಎಂದು ಒತ್ತಾಯಿಸಿ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಮಂಗಳವಾರ ಬೆಂಗಳೂರಿನ ಮೌರ್ಯವೃತ್ತದ ಬಳಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು.
ಈ ಸುದ್ದಿ ಓದಿದ್ದೀರಾ?:ಪಡಿತರದಲ್ಲಿ ಅಕ್ಕಿ ಜೊತೆಗೆ ರಾಗಿ, ಜೋಳ ನೀಡಲಿ: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಗ್ರಹ
ಕಾಂಗ್ರೆಸ್ ಹೇಳಿದಂತೆ 10 ಕೆಜಿ ಅಕ್ಕಿ ಕೊಡಬೇಕು. ಯೋಜನೆ ಘೋಷಣೆ ಮಾಡುವ ವೇಳೆ ದಾಸ್ತಾನು ಪರಿಶೀಲನೆ ಮಾಡದೆ ಗ್ಯಾರಂಟಿ ನೀಡಿದ್ದಾರೆ. ಈಗ ಅದರ ಅನುಷ್ಠಾನ ಸಾಧ್ಯವಾಗದೆ ಇರುವ ಕಾರಣ ಅಕ್ಕಿ ಹಂಚಿಕೆ ವಿಚಾರದಲ್ಲಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ. ಹಾಗೆಯೇ ಜನರ ದಾರಿ ತಪ್ಪಿಸುತ್ತಿದೆ ಎಂದು ಪ್ರತಿಭಟನಾನಿರತ ಬಿಜೆಪಿ ನಾಯಕರು ಕಿಡಿಕಾರಿದರು.
ಪ್ರತಿಭಟನಾ ನಿರತ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವ ಆರ್.ಅಶೋಕ್ ಸೇರಿ ಬಿಜೆಪಿ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.