ಬೀದರ್‌ | ಕುಸುಬೆ ಖರೀದಿ : ಪ್ರತಿ ಕ್ವಿಂಟಾಲ್‌ ₹5,940 ಬೆಂಬಲ ಬೆಲೆ ನಿಗದಿ

Date:

Advertisements

ಎಫ್‌ಎಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನವನ್ನು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ದರದಲ್ಲಿ ರೈತರಿಂದ ಕುಸುಬೆ ಖರೀದಿಸಲು ಬೀದರ ಜಿಲ್ಲೆಯಲ್ಲಿ ಒಟ್ಟು 9 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.

2024-25ನೇ ಸಾಲಿಗೆ ಭಾರತ ಸರ್ಕಾರವು ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ರೈತರು ಬೆಳೆದಿರುವ ಎಫ್‌ಎಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ ₹5,940 ದರ ನಿಗದಿಪಡಿಸಲಾಗಿದೆ. ಸರ್ಕಾರಿ ಆದೇಶದನ್ವಯ ಜಿಲ್ಲಾ ಮಟ್ಟದ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಖರೀದಿಸಲು ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ನಿಯಮಿತ (ಕೆಒಎಫ್‌) ಸಂಸ್ಥೆಗೆ ನೋಡಲ್ ಏಜೆನ್ಸಿಗಳನ್ನಾಗಿ ನೇಮಿಸಿದೆ ಎಂದು ಅವರು ತಿಳಿಸಿದ್ದಾರೆ.

ರೈತರು ತಮ್ಮ ಸಮೀಪದ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ತಾವು ಬೆಳೆದ ಕುಸುಬೆ ಮಾರಾಟಕ್ಕೆ ನೋಂದಾಯಿಸಿಕೊಳ್ಳಬೇಕು. ಸರ್ಕಾರಿ ಆದೇಶದನ್ವಯ ಮಾ.15 ರಂದು ನಡೆದ ಜಿಲ್ಲಾ ಮಟ್ಟದ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಖರೀದಿಸಲು ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.

Advertisements

ಪ್ರತಿ ಎಕರೆಗೆ 5 ಕ್ವಿಂಟಲ್‍ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್‍ವರೆಗೆ ಖರೀದಿಸಲು ಬೆಂಬಲ ಬೆಲೆ ₹5,940 ನಿಗದಿಪಡಿಸಲಾಗಿದೆ. ಮೊತ್ತವನ್ನು ಡಿಬಿಟಿ ಮೂಲಕ ರೈತರ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುತ್ತದೆ. ತಕ್ಷಣದಿಂದ ಜಾರಿಗೆ ಬರುವಂತೆ ರೈತರ ನೋಂದಣಿ ಕಾರ್ಯವನ್ನು ಸರ್ಕಾರದ ಆದೇಶದ ದಿನಾಂಕದಿಂದ 80 ದಿನಗಳವರೆಗೆ ಹಾಗೂ ಖರೀದಿ ಪ್ರಕ್ರಿಯೆ ಸರ್ಕಾರದ ಆದೇಶದ ದಿನಾಂಕದಿಂದ 90 ದಿನಗಳವರೆಗೆ ಜರುಗಲಿದೆ.

ಕುಸುಬೆ ಖರೀದಿ ಕೇಂದ್ರಗಳ ವಿವರ: ಔರಾದ (ಬಾ) ತಾಲ್ಲೂಕು: ಪಿಕೆಪಿಎಸ್ ಔರಾದ (ಬಾ), ಪಿಕೆಪಿಎಸ್ ಕಮಲನಗರ, ಬಸವಕಲ್ಯಾಣ ತಾಲ್ಲೂಕು: ಪಿಕೆಪಿಎಸ್ ನಾರಾಯಣಪೂರ್, ಪಿಕೆಪಿಎಸ್ ಮುಡಬಿ, ಪಿಕೆಪಿಎಸ್ ಗಡಿಗೌಡಗಾಂವ್, ಭಾಲ್ಕಿ ತಾಲ್ಲೂಕು: ಪಿಕೆಪಿಎಸ್ ಭಾತಂಬ್ರಾ, ಪಿಕೆಪಿಎಸ್ ಕೋನಮೇಳಕುಂದಾ, ಬೀದರ ತಾಲ್ಲೂಕು: ಪಿಕೆಪಿಎಸ್‌ ಜನವಾಡಾ, ಹುಮನಾಬಾದ್ ತಾಲ್ಲೂಕು: ಪಿಕೆಪಿಎಸ್ ಚಿಟಗುಪ್ಪಾ

ಈ ಸುದ್ದಿ ಓದಿದ್ದೀರಾ? ಔರಾದ್‌ ಸೀಮೆಯ ಕನ್ನಡ | ಹಂತಿ ಹೊಡಿಲಾಕ್‌ ನಮ್‌ ಎತ್ಗೊಳ್‌ ಖಾಲಿನೇ ಅವಾ!

ʼಖರೀದಿ ಕೇಂದ್ರಗಳು ಲಾಗಿನ್ ಕ್ರೆಡೆನ್ಸಿಯಲ್ಸ್‌ಗಳು ಪಡೆದು ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದ ಮೇಲೆ ನೋಂದಣಿ ಮಾಡಿಕೊಳ್ಳಲು ಇಚ್ಛಿಸುವ ರೈತರು ಸಮೀಪದ ಖರೀದಿ ಕೇಂದ್ರಗಳಿಗೆ ನೋಂದಣಿ ಮಾಡಿಸಿಕೊಂಡು ತಮ್ಮ ಕುಸುಬೆ ಉತ್ಪನ್ನವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮಾರಾಟ ಮಾಡಿ ಸದರಿ ಯೋಜನೆಯ ಸದುಪಯೋಗಪಡೆದುಕೊಳ್ಳಬೇಕುʼ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X