ಜಾನುವಾರು ಸಾಕಾಣಿಕೆ ಹೆಚ್ಚಿಸಲು ರೈತರಿಗೆ ಪ್ರೋತ್ಸಾಹ ನೀಡಿ: ಸಚಿವ ಕೆ ಹೆಚ್ ಮುನಿಯಪ್ಪ

Date:

Advertisements

ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳಲ್ಲಿ ಜಿಲ್ಲೆಯ ಸಾಕಷ್ಟು ರೈತರು ತೊಡಗಿಸಿಕೊಂಡಿದ್ದು ಅಂತಹ ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಆಯೋಜಿಸಲಾದ 2024-25ನೇ ಸಾಲಿನ ವಿಸ್ತರಣಾ ಚಟುವಟಿಕೆಗಳ ಹಾಗೂ ಪಶುವೈದ್ಯಕೀಯ ಸಿಬ್ಬಂದಿಯವರ ತಾಂತ್ರಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನು ಓದಿದ್ದೀರಾ? ರಾಜ್ಯ ಬಜೆಟ್‌ | ಜಾನುವಾರು ಸಾವಿಗೆ ನೀಡಲಾಗುವ ಪರಿಹಾರ ಹೆಚ್ಚಳ

Advertisements

21ನೇ ಜಾನುವಾರು ಗಣತಿ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ, ಈ ಕಾರ್ಯಕ್ಕೆ ಕಾರಣರಾದ ಪಶು ವೈದ್ಯಾಧಿಕಾರಿಗಳಿಗೆ ಧನ್ಯವಾದ ತಿಳಿಸುತ್ತಾ ಜಾನುವಾರು ಸಾಕಾಣಿಕೆಯಲ್ಲಿ ರಾಜ್ಯದಲ್ಲಿ, ರಾಷ್ಟ್ರದಲ್ಲಿ ಜಿಲ್ಲೆ ಉತ್ತಮ ಹೆಸರು ಪಡೆಯಬೇಕು. ಹಾಗಾಗಿ ಪಶು ವೈದ್ಯಾಧಿಕಾರಿಗಳ ಸೇವೆ ಕೂಡ ಮುಖ್ಯ ಎಂದು ತಿಳಿಸಿದರು.

ರೈತರಿಗೆ ಜಾನುವಾರು ಸಾಕಾಣಿಕೆ ಕುರಿತಂತೆ ಮಾಹಿತಿ, ತರಬೇತಿ, ಕಾರ್ಯಾಗಾರಗಳನ್ನು ಏರ್ಪಡಿಸಿ ಸರ್ಕಾರದಿಂದ ಸಿಗುವಂತಹ ಸಾಲ ಸೌಲಭ್ಯ, ಪ್ರೊತ್ಸಾಹಧನ ಬಗ್ಗೆ ಮಾಹಿತಿ ನೀಡಿ, ಜಾನುವಾರುಗಳಿಗೆ ತಗುಲುವ ರೋಗಗಳನ್ನು ನಿಯಂತ್ರಿಸಲು ಕಾಲಕಾಲಕ್ಕೆ ಲಸಿಕೆ ಹಾಕಿ ಎಂದು ಸಲಹೆ ನೀಡಿದರು.

ಹಾಲು ಉತ್ಪಾದನೆಯನ್ನು ಹೆಚ್ಚಿಸಬೇಕು, ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಂಡು ಕೊಟ್ಟಿಗೆ ಗೊಬ್ಬರ ಬಳಸಿ ಪೌಷ್ಟಿಕ ಆಹಾರ ಉತ್ಪನ್ನ, ಗುಣಮಟ್ಟದ ತರಕಾರಿ ಬೆಳೆಗಳನ್ನು ಬೆಳೆದು ಮಾದರಿ ಜಿಲ್ಲೆಯನ್ನಾಗಿ ಮಾಡಬೇಕು ಎಂಬ ಗುರಿ ಇದೆ ಈ ನಿಟ್ಟಿನಲ್ಲಿ ಅಧಿಕಾರಿಗಳು ಸಹಕಾರ ಕೂಡ ಮುಖ್ಯ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಮಡಿಕೇರಿ | ಜಾನುವಾರುಗಳ ಮೇಲೆ ಹುಲಿ ದಾಳಿ; 12 ಆಡು, 7 ಕರುಗಳ ಸಾವು

ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಗ್ರಾಮ ಪಂಚಾಯಿತಿ ಆವರಣಗಳಲ್ಲಿರುವ ಜಾನುವಾರುಗಳ ಕುಡಿಯುವ ನೀರು ತೊಟ್ಟಿಗಳನ್ನ ಸ್ವಚ್ಚಗೊಳಿಸಿ ನೀರು ಹಾಯಿಸಿ. ಜಿಲ್ಲೆಯ ಯಾವುದೇ ಭಾಗದಿಂದ ಕೂಡ ಕುಡಿಯುವ ನೀರು ಸಮಸ್ಯೆ ಇದೆ ಎಂದು ಸಾರ್ವಜನಿಕರು ನನ್ನ ಬಳಿ ಮನವಿ ಮಾಡಬಾರದು. ತಕ್ಷಣವೇ ಅಧಿಕಾರಿಗಳ ಸಭೆ ಕರೆದು ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಆಗದಂತೆ ಸೂಕ್ತ ಕ್ರಮ ವಹಿಸಿ ಅಧಿಕಾರಿಗಳಿಗೆ ಸೂಚಿಸಿದರು.

ಪಶುಸಂಗೋಪನೆಯಲ್ಲಿ ತೊಡಗಿರುವ 2.90 ಲಕ್ಷ ರೈತರು

ಪಶು ಸಂಗೋಪನೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಜಗದೀಶ್ ಅವರು ಮಾತನಾಡಿ ಜಿಲ್ಲೆಯಲ್ಲಿ ಸುಮಾರು 2,90,551 ರೈತರು ಪಶುಸಂಗೋಪನೆಯಲ್ಲಿ ತೊಡಗಿಕೊಂಡಿದ್ದಾರೆ. ಪಶು ಇಲಾಖೆಯಲ್ಲಿ ಒಟ್ಟು 105 ಪಶು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು 21ನೇ ಜಾನುವಾರು ಗಣತಿ ಪ್ರಕಾರ 1,70,720 ದನಗಳು, 14,924 ಎಮ್ಮೆಗಳು, 1,17,715 ಕುರಿಗಳು, 95 ಸಾವಿರ ಮೇಕೆಗಳು ಜಿಲ್ಲೆಯಲ್ಲಿದೆ. 2,93,876 ಜಾನುವಾರುಗಳಿಗೆ ಕಾಲು ಬಾಯಿ ಲಸಿಕೆಯನ್ನು ನೀಡಿದ್ದೇವೆ. ಜಿಲ್ಲೆಯಲ್ಲಿ 5.5 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಜಾನುವಾರು ವಿಮೆ ಸೌಲಭ್ಯವನ್ನು ಎಪಿಎಲ್ ಪಡಿತರ ಚೀಟಿಗೆ 50% , ಬಿಪಿಎಲ್ ಪಡಿತರ ಚೀಟಿಗೆ 75% ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ, ಉಪಕಾರ್ಯದರ್ಶಿ ಟಿ.ಕೆ ರಮೇಶ್, ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾ.ಜಗದೀಶ್ ಕುಮಾರ್ ಸೇರಿದಂತೆ ಜಿಲ್ಲೆಯ ಪಶುವೈದ್ಯಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X