ಹುಬ್ಬಳ್ಳಿ | ನಾಗರಿಕ ಸೇವೆಗಳಲ್ಲಿ ವಿಳಂಬ; ಪಾಲಿಕೆ ವಿರುದ್ಧ ಪ್ರತಿಭಟನೆ

Date:

Advertisements

ನಾಗರಿಕ ಸೇವೆಗಳು ಜನರನ್ನು ತಲುಪುವಲ್ಲಿ ವಿಳಂಬ ಉಂಟಾಗುತ್ತಿರುವುದನ್ನು ಖಂಡಿಸಿ ದಲಿತ ಮುಖಂಡರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಲಯ-5 ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಡೆಸಿದ್ದಾರೆ.

“ಪಾಲಿಕೆಯ ವಲಯ-5ರ ಕಚೇರಿಯಲ್ಲಿ ಹಲವು ನಾಗರಿಕ ಸೇವೆಗಳಲ್ಲಿ ನಿರಂತರ ವಿಳಂಬವಾಗುತ್ತಿದೆ. ಇ-ಆಸ್ತಿ, ಖಾತಾ ವರ್ಗಾವಣೆ, ಜನನ-ಮರಣ ಪತ್ರ ಸೇರಿದಂತೆ ಬಹುತೇಕ ನಾಗರಿಕ ಸೇವೆಗಳನ್ನು ಒದಗಿಸಲು ಅಧಿಕಾರಿಗಳು ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ಸಾರ್ವಜನಿಕರಿಗೆ ಸೇವೆ ಒದಗಿಸಲು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ. ಈ ಕುರಿತ ವಿಡಿಯೋ, ಆಡಿಯೋ ಸಾಕ್ಷಿಗಳನ್ನು ನಾವು ಸಂಗ್ರಹಿಸಿದ್ದೇವೆ. ಅವುಗಳನ್ನು ಲೋಕಾಯುಕ್ತರು ಮತ್ತು ಪಾಲಿಕೆಯ ಆಯುಕ್ತರ ಗಮನಕ್ಕೆ ತರಲಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಕಚೇರಿಯಲ್ಲಿ ದುಡ್ಡು ಕೊಟ್ಟರೆ ಮಾತ್ರ ಕಡತಗಳನ್ನು ವಿಲೇವಾರಿ ಮಾಡಲಾಗುತ್ತದೆ. ಇಲ್ಲವಾದಲ್ಲಿ ಬಡವರು, ಹೆಂಗಸರು, ವಯಸ್ಸಾದವರು ಎಂದು ನೋಡದೆ ಅಲೆದಾಡಿಸುತ್ತಿದ್ದಾರೆ” ಎಂದು ಆರೋಪಿಸಿದ್ದು, ಈ ಹಿಂದೆ 9-10 ತಿಂಗಳುಗಳಿಂದ ವಿಲೇವಾರಿ ಆಗದೆ ಉಳಿದಿರುವ ಹಲವು ಅರ್ಜಿಗಳ ಸ್ವೀಕೃತಿ ಪ್ರತಿಗಳನ್ನು ಮಾಧ್ಯಮಗಳ ಎದುರಿಗೆ ಪ್ರದರ್ಶಿಸಿದರು.

“ಕಚೇರಿಯಲ್ಲಿ ಯಾವುದೇ ನಾಮಫಲಕವಾಗಲಿ, ಸಂಬಂಧಿತ ಸೇವೆಗಳ ಬಗ್ಗೆ ಮಾಹಿತಿ ಫಲಕಗಳಾಗಲಿ ಇಲ್ಲದೆ ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಯಾರನ್ನು ಸಂಪರ್ಕಿಸಬೇಕೆಂದು ತಿಳಿಯದೆ ಪರದಾಡುವಂತಾಗಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಅಕ್ಕಿ ನೀಡಲು ಕೇಂದ್ರ ನಿರಾಕರಣೆ; ರಾಜ್ಯಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ಸಹಾಯಕ ವಲಯ ಆಯುಕ್ತ ಫಕ್ಕೀರಪ್ಪ ಇಂಗಳಗಿ ಸ್ಥಳಕ್ಕೆ ಧಾವಿಸಿದ್ದು, ಪ್ರತಿಭಟನಾಕಾರರನ್ನು ಸಮಾಧಾನಗೊಳಿಸಿ ಬಾಕಿ ಉಳಿದಿರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಲು ಮತ್ತು ಕಚೇರಿಯ ಆಡಳಿತ ಸುಧಾರಣೆಗಾಗಿ ತಾವು ಕೈಗೊಂಡಿರುವ ಕ್ರಮಳನ್ನು ಹೋರಾಟಗಾರರಿಗೆ ವಿವರಿಸಿ, ಇನ್ನು ಎರಡು ದಿನಗಳ ಅವಧಿಯಲ್ಲಿ ಬಾಕಿ ಉಳಿದಿರುವ ಎಲ್ಲ ಹಿಂದಿನ ಕಡತಗಳನ್ನು ತೆರವುಗೊಳಿಸುವಾದಾಗಿ ಭರವಸೆ ನೀಡಿ ಪ್ರತಿಭಟನೆಯನ್ನು ಹಿಂಪಡೆಯಲು ಕೋರಿದರು.

ಪ್ರತಿಭಟನೆಯಲ್ಲಿ ಚಾಮುಂಡೇಶ್ವರಿ ನಗರದ ಅಧ್ಯಕ್ಷ ಪರಶುರಾಮ ಮಲ್ಯಾಳ, ವೆಂಕಟೇಶ್ ಕೊಂಡಪಲ್ಲಿ, ನರಸಿಂಹ ವೆಪಚಾರಲ, ಕೊಂಡಯ್ಯ ಪೂಜಾರಿ, ನರಸಪ್ಪ ಎಲಕಪಟಿ, ಆನಂದ ಮಾದರ, ಪ್ರಶಾಂತ ಮಾದರ, ಜೀವನ ಅನಂತಪುರ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X