ದ್ವೇಷ ಹರಡುವವರ ಮಧ್ಯೆ ಮುಸ್ಲಿಮರಿಗಾಗಿ ‘ಇಫ್ತಾರ್ ಕೂಟ’ ಆಯೋಜಿಸಿದ ‘ಮೀನಾಕ್ಷಿ ಅಮ್ಮ’ನ ಕುಟುಂಬ!

Date:

Advertisements

ಆ ಸಭಾಂಗಣದಲ್ಲಿ ಪರಸ್ಪರ ಆಲಿಂಗನ ಇತ್ತು, ಪ್ರೀತಿಯ ಮಾತು ಇತ್ತು, ಪ್ರೀತಿಯ ಅಪ್ಪುಗೆ ಇತ್ತು, ಎಲ್ಲರನ್ನೂ ಒಳಗೊಳ್ಳುವ ಪ್ರೀತಿಯ ಹಾಡು ಇತ್ತು, ಸಮಾರಂಭದ ಕೊನೆಗೆ ಹೊಟ್ಟೆ ಪೂರ್ತಿ ರುಚಿಕರವಾದ ಬಿರಿಯಾನಿಯೂ ಇತ್ತು…ಇಲ್ಲದೇ ಇದ್ದದ್ದು ‘ದ್ವೇಷ’ ಮಾತ್ರ!

ಹೌದು. ಈ ಎಲ್ಲ ದೃಶ್ಯ ಕಂಡು ಬಂದಿದ್ದು ಬೆಂಗಳೂರಿನ ಸೈಂಟ್ ಮಾರ್ಕ್ಸ್ ರಸ್ತೆಯಲ್ಲಿರುವ ಆಶೀರ್ವಾದ್ ಸಭಾಂಗಣದಲ್ಲಿ.

ದೇಶದಲ್ಲಿ ಮುಸ್ಲಿಮರ ವಿರುದ್ಧ ನಡೆಯುತ್ತಿರುವ ದ್ವೇಷ ಭಾಷಣಗಳಿಗೆ ವಿರುದ್ಧವಾಗಿ ತಮಿಳುನಾಡು ಮೂಲದ ಮೀನಾಕ್ಷಿ ಅಮ್ಮನ ಕುಟುಂಬ ಮೂರನೇ ಬಾರಿಗೆ ಬೆಂಗಳೂರಿನಲ್ಲಿ ‘ಅಮ್ಮನ ಇಫ್ತಾರ್ ಕೂಟವನ್ನು ಏರ್ಪಡಿಸಿದ್ದರು. ಈ ಇಫ್ತಾರ್ ಕೂಟದಲ್ಲಿ ಹಿಂದೂ-ಮುಸ್ಲಿಮರು ಸೇರಿದಂತೆ ಕ್ರಿಶ್ಚಿಯನ್ ಸಮುದಾಯದ ಮಂದಿಯೂ ಭಾಗವಹಿಸಿ, ‘ದ್ವೇಷದ ಭಾಷೆಗೆ ಪ್ರೀತಿಯೇ ಉತ್ತರ’ ಎಂದು ಸಾರಿದರು.

Advertisements
1003795183

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರನ್ನುದ್ದೇಶಿಸಿ ಮಾತನಾಡಿದ ಮೀನಾಕ್ಷಿ ಶ್ರೀನಿವಾಸನ್, “ಇದು ನಮ್ಮ ಕುಟುಂಬ ಮುಸ್ಲಿಮ್ ಸಹೋದರ-ಸಹೋದರರಿಗಾಗಿ ಮೂರನೇ ಬಾರಿ ಆಯೋಜಿಸಿರುವ ಇಫ್ತಾರ್ ಕೂಟ. ನಮ್ಮ ದೇಶದಲ್ಲಿ ಮುಸ್ಲಿಮ್ ಸಮುದಾಯದ ವಿರುದ್ಧ ಪ್ರತಿದಿನವೂ ದ್ವೇಷ ಹುಟ್ಟಿಸುವಂತಹ ಕಾರ್ಯವನ್ನು ವ್ಯವಸ್ಥಿತವಾಗಿ ಮಾಡಲಾಗುತ್ತಿದೆ. ಆದರೆ, ನಾವೆಲ್ಲರೂ ಮನುಷ್ಯರು. ಪರಸ್ಪರ ಪ್ರೀತಿಯಿಂದ ಬಾಳಿ-ಬದುಕಿ ಈ ದೇಶವನ್ನು ಕಟ್ಟಬೇಕು.‌ ಸಮಾಜದಲ್ಲಿ ದ್ವೇಷ ಹುಟ್ಟಿಸುವ ಮಂದಿ ಕಡಿಮೆ ಇದ್ದರೂ ಅದರ ಪರಿಣಾಮ ದೊಡ್ಡದಾಗಿದೆ. ಹಾಗಾಗಿ, ನಾವೆಲ್ಲರೂ ಒಗ್ಗಟ್ಟಿನಲ್ಲಿ ಸಾಗಬೇಕು. ಸಮಾಜದಲ್ಲಿ ಪ್ರೀತಿ ಹರಡುವವರಾಗಬೇಕು” ಎಂದು ಕರೆ ನೀಡಿದರು.

1003795181

‘ನನ್ನ ಅಮ್ಮ ರಾಮನ ಭಕ್ತೆ. ದ್ವೇಷ ಯಾವುದಕ್ಕೂ ಉತ್ತರವಲ್ಲ. ರಾಮನ ಜೀವನ ಸಲಹೆಯಲ್ಲಿ ಯಾವತ್ತೂ ದ್ವೇಷಕ್ಕೆ ಜಾಗವಿಲ್ಲ. ಹಿಂದೂ-ಮುಸ್ಲಿಮರ ನಡುವಿನ ಗಲಭೆಗಳು ದಿನದಿಂದ ದಿನಕ್ಕೆ ದಿಕ್ಕನ್ನೇ ಬದಲಾಯಿಸುತ್ತಿದೆ. ದ್ವೇಷ ಹುಟ್ಟುವಂತೆ ಮಾಡುತ್ತದೆ. ಸಮುದಾಯಗಳ ನಡುವೆ ಸ್ನೇಹ-ಸಂಬಂಧ ಗಟ್ಟಿ ಮಾಡಲಿಕ್ಕಾಗಿ ಈ ಇಫ್ತಾರ್ ಕೂಟ ಆಯೋಜಿಸಿದ್ದೇವೆ’ ಎಂದು ಮೀನಾಕ್ಷಿ ಅಮ್ಮನ ಮಗ, ವೃತ್ತಿಯಲ್ಲಿ ಬ್ಯಾಂಕರ್ ಆಗಿರುವ ವೆಂಕಟ್ ಶ್ರೀನಿವಾಸನ್ ತಿಳಿಸಿದರು.

1003795182

ಸಮಾರಂಭದಲ್ಲಿ ಮಾತನಾಡಿದ ವಕೀಲೆ ರಾಜಲಕ್ಷ್ಮಿ ಅಂಕಲಗಿ, ‘ಇಲ್ಲಿ ಸೇರಿರುವವರಲ್ಲಿ ಬೆರಳೆಣಿಕೆಯಷ್ಟು ಮಂದಿ ಇರಬಹುದು. ಆದರೆ, ಇಂತಹ ಬಾಂಧವ್ಯ ಬೆಸೆಯುವ ಸಣ್ಣ ಪುಟ್ಟ ಸಮಾರಂಭಗಳು ಪ್ರತೀ ಹಳ್ಳಿಗಳಲ್ಲಿ ನಡೆಯಬೇಕಿದೆ. ಇಫ್ತಾರ್ ಕೂಟ ಆಯೋಜಿಸಿದ ಮೀನಾಕ್ಷಿ ಅಮ್ಮನ ಕುಟುಂಬದ ನಿಜಕ್ಕೂ ಶ್ಲಾಘನೆಗೆ ಅರ್ಹವಾದವರು’ ಎಂದು ತಿಳಿಸಿದರು.

1003795226

ಜಮಾಅತೆ ಇಸ್ಲಾಮೀ‌ ಹಿಂದ್ ಮುಖಂಡರಾದ ಯೂಸುಫ್ ಕನ್ನಿ ಮಾತನಾಡಿ, ‘ನಮಗಾಗಿ ಇಫ್ತಾರ್ ಕೂಟ ಆಯೋಜಿಸಿದ್ದಕ್ಕೆ ಮೀನಾಕ್ಷಿ ಅಮ್ಮನ ಕುಟುಂಬದ ಧನ್ಯವಾದ ಸಲ್ಲಿಸುತ್ತೇನೆ.‌ ಮೀನಾಕ್ಷಿ ಅಮ್ಮ‌ ಕೇವಲ ಇಬ್ಬರು ಮಕ್ಕಳ ಅಮ್ಮ ಮಾತ್ರವಲ್ಲ, ಅವರು ನಮ್ಮೆಲ್ಲರ ಅಮ್ಮ.‌ ಅವರಲ್ಲಿರುವುದು ನಿಷ್ಕಲ್ಮಶ ಪ್ರೀತಿ ಮಾತ್ರ ಎಂದು ತೋರಿಸಿಕೊಟ್ಟಿದ್ದಾರೆ. ದೇಶದಲ್ಲಿ ವ್ಯವಸ್ಥಿತವಾಗಿ ಹರಡಲಾಗುತ್ತಿರುವ ದ್ವೇಷಕ್ಕೆ ಇಂತಹ ಕಾರ್ಯಕ್ರಮಗಳನ್ನು ನಾವು ಪರಸ್ಪರ ಆಯೋಜಿಸುವ ಮೂಲಕ ದೇಶವನ್ನು ದ್ವೇಷದಿಂದ ರಕ್ಷಣೆ ಮಾಡಬಹುದು ಎಂದು ಹೇಳಿದರು.

1003795239

ವೃತ್ತಿಯಲ್ಲಿ ವೈದ್ಯರಾದ ಡಾ. ಗಿರೀಶ್ ಮೂಡ್ ಮಾತನಾಡಿ, ‘ಈ ಭೂಮಿಯ ಮೇಲೆ ನಾವು ಯಾರೂ ಕೂಡ ಶಾಶ್ವತವಾಗಿ ಇರುವವರಲ್ಲ. ಇರುವಷ್ಟು ದಿನ ಪ್ರೀತಿಯಿಂದ ಬದುಕಬೇಕಿದೆ.‌ ಮಾನವೀಯ ಮೌಲ್ಯಗಳನ್ನು ತಮ್ಮಲ್ಲಿ ಇಟ್ಟುಕೊಂಡು ಕಾರ್ಯನಿರ್ವಹಿಸಬೇಕಾದ ವೈದ್ಯರು ಕೂಡ ಇಂದು ತಮಯ ವೈದ್ಯಕೀಯ ವೃತ್ತಿಯ ವೇಳೆ ದ್ವೇಷ ಕಾರುತ್ತಿರುವುದನ್ನು ನೋಡುವಾಗ ಆತಂಕವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ದ್ವೇಷವನ್ನು ಹೋಗಲಾಡಿಸುವ ಜವಾಬ್ದಾರಿ ಸಮಾಜದ ಪ್ರತಿಯೊಬ್ಬರ ಮೇಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಲ್ಲರನ್ನೂ ಸೇರಿಸುವ ಸಂದೇಶವುಳ್ಳ ಹಾಡನ್ನು ಸಾಮಾಜಿಕ ಕಾರ್ಯಕರ್ತರಾದ ವಿನಯ್ ಶ್ರೀನಿವಾಸ್, ತನ್ವೀರ್, ಮಲ್ಲಿಗೆ ಸಿರಿಮನೆ ಸೇರಿದಂತೆ ಹಲವು ಮಂದಿ ಗುಂಪಿನಲ್ಲಿ ಹಾಡಿ, ಪ್ರೀತಿಯಿಂದ ಬೀಳುವಂತೆ ಬಾಳುವಂತೆ ಕರೆ ನೀಡಿದರು.

1003795184

ಅಮ್ಮನ ಈ‌ ಇಫ್ತಾರ್ ಕೂಟದಲ್ಲಿ ಆಲ್ಟ್​​​​ ನ್ಯೂಸ್​ ನ ಸಹ ಸಂಸ್ಥಾಪಕ ಮೊಹಮ್ಮದ್ ಝುಬೇರ್, ಪತ್ರಕರ್ತರಾದ ಎನ್ ಎಂ ಇಸ್ಮಾಯಿಲ್, ರಾಜಕೀಯ ಕಾರ್ಯಕರ್ತರಾದ ಡಾ. ವಾಸು ಎಚ್ ವಿ, ಜನಶಕ್ತಿಯ ಗೌರಿ, ತೌಸೀಫ್ ಬೆಂಗಳೂರು ಸೇರಿದಂತೆ ಹಲವು ಮಂದಿ ಭಾಗಿಯಾಗಿದ್ದರು. ಮೀನಾಕ್ಷಿ ಅಮ್ಮನ ಮಗಳಾದ ಶೋಭಾ ಶ್ರೀನಿವಾಸನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

1003795277

ಕಾರ್ಯಕ್ರಮದಲ್ಲಿ ಮುಸ್ಲಿಮರು ಉಪವಾಸವನ್ನು ಮುರಿಯಲು ಬೇಕಾಗುವ ಹಣ್ಣು-ಹಂಪಲುಗಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಸಹ ಮಾಡಲಾಗಿತ್ತು. ಈ ಸೌಹಾರ್ದಯುವ ಕಾರ್ಯಕ್ರಮಕ್ಕೆ ಊಟೋಪಚಾರವನ್ನು ಕರೀಮ್ಸ್ ರೆಸ್ಟೋರೆಂಟ್‌ನವರು ನೋಡಿಕೊಂಡಿದ್ದರು.‌ ಅಲ್ಲದೇ, ಸಭಾಂಗಣದ ಕೊಠಡಿಯೊಂದರಲ್ಲಿ ಸಂಜೆಯ ನಮಾಝ್ ನಿರ್ವಹಿಸಲು ಕೂಡ ಪ್ರತ್ಯೇಕವಾದ ವ್ಯವಸ್ಥೆಯನ್ನು ಮೀನಾಕ್ಷಿ ಅಮ್ಮನ ಕುಟುಂಬವೇ ಮಾಡಿದ್ದು ವಿಶೇಷವಾಗಿತ್ತು.

1003795183 1

ಮೀನಾಕ್ಷಿ ಅಮ್ಮನ ಕುಟುಂಬದ ಈ ಸೌಹಾರ್ದಯುತ ನಡೆಯು ದೇಶದ ಮೂಲೆಮೂಲೆಗಳಿಗೂ ಪಸರಿಸಲಿ ಎಂದು ನೆರೆದಿದ್ದ ಮಂದಿ ಹಾರೈಸಿದರು.

1003795223
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X