ಮಂಗಳೂರು | ಬರಕಃ ಕಾಲೇಜಿನಲ್ಲಿ 45 ದಿನಗಳ ನೀಟ್-ಸಿಇಟಿ ಕ್ರ್ಯಾಶ್ ಕೋರ್ಸ್

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬರಕಃ ಇಂಟರ್ ನ್ಯಾಷನಲ್ ಸಂಸ್ಥೆಯಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಅವರ ಉನ್ನತ ವ್ಯಾಸಂಗಕ್ಕೆ ನೆರವಾಗಲು ನೀಟ್ / ಸಿಇಟಿ ಕ್ರ್ಯಾಶ್ ಕೋರ್ಸ್ ಆಯೋಜಿಸಲಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ‌.

45 ದಿನಗಳ ಕಾಲ ನಡೆಯುವ ಈ ತರಬೇತಿ ಕೋರ್ಸ್ ಮಾರ್ಚ್ 22ರಿಂದ ಆರಂಭಗೊಂಡು ಮೇ 3ನೇ ತಾರೀಕಿನ ವರೆಗೆ ನಡೆಯಲಿದೆ . ನೀಟ್ / ಸಿಇಟಿ ಕ್ರ್ಯಾಶ್ ಕೋರ್ಸಿನಲ್ಲಿ ನುರಿತ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲಿದ್ದಾರೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಡಾ.ಶರ್ಫುದ್ದೀನ್ ತಿಳಿಸಿದ್ದಾರೆ.

ಈ ಕೋರ್ಸಿನಲ್ಲಿ ಭಾಗವಹಿಲು ಇಚ್ಚಿಸುವ ವಿದ್ಯಾರ್ಥಿಗಳು ಮಾರ್ಚ್ 19ನೇ ತಾರೀಕಿನ ಸಂಜೆ 4 ಗಂಟೆಯ ಒಳಗೆ ಬರಕಃ ಶಾಲೆಗೆ ಅರ್ಜಿ ಸಲ್ಲಿಸಬೇಕಾಗಿದ್ದು, ವಿದ್ಯಾರ್ಥಿಗಳಿಗೆ ಬರಕಃ ವಿದ್ಯಾ ಸಂಸ್ಥೆಯಲ್ಲಿ ಮಾರ್ಚ್ 21 ರಂದು ಬೆಳಗ್ಗೆ 9 ಗಂಟೆಗೆ ಅರ್ಹತಾ ಪರೀಕ್ಷೆಯನ್ನು ಇಡಲಾಗಿದೆ. ಅದೇ ದಿನ 11:30ಕ್ಕೆ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

Advertisements

ಆಸಕ್ತ ಪೋಷಕರು ಮತ್ತು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲು ನಸೀಮ್ 9845112379 ಇಮೇಲ್: barkahneet@gmail.com ಅನ್ನು ಸಂಪರ್ಕಿಸಬಹುದಾಗಿದೆ.
ಕೆಲವೇ ವಿದ್ಯಾರ್ಥಿಗಳಿಗೆ ಅವಕಾಶ ಇರುವುದರಿಂದ ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಕಾಲೇಜಿನ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X