ಗೃಹಲಕ್ಷ್ಮಿ ಯೋಜನೆಗಾಗಿ ಪ್ರತ್ಯೇಕ ಆ್ಯಪ್‌, ಮೊಬೈಲ್‌ನಲ್ಲೇ ಅರ್ಜಿ ತುಂಬಲು ಅವಕಾಶ: ಡಿಕೆ ಶಿವಕುಮಾರ್

Date:

Advertisements
  • ಶೀಘ್ರದಲ್ಲೇ ಈ ಯೋಜನೆಗೆ ನೋಂದಣಿ ಆರಂಭವಾಗಲಿದೆ
  • ಆಗಸ್ಟ್‌ನಿಂದ ಹಣ ಹಂಚಲು ಸರ್ಕಾರ ತೀರ್ಮಾನಿಸಿದೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಆಗಸ್ಟ್‌ನಿಂದ ಹಣ ನೀಡಲು ಸರ್ಕಾರ ತೀರ್ಮಾನಿಸಿದೆ. ಇದಕ್ಕಾಗಿ ಪ್ರತ್ಯೇಕ ಆ್ಯಪ್‌ ಸಿದ್ಧವಾಗುತ್ತಿದ್ದು, ಶೀಘ್ರದಲ್ಲೇ ಈ ಯೋಜನೆಗೆ ನೋಂದಣಿ ಆರಂಭವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದರು.

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದೆ ರಾಜ್ಯದ ವಿರುದ್ಧ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಮಂಗಳವಾರ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದ ಬಳಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತ‌ನಾಡಿದರು.

“ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ನೋಂದಣಿ ಆರಂಭದ ದಿನಾಂಕ ಪ್ರಕಟಿಸಲಿದ್ದಾರೆ. ಎಷ್ಟು ಪಾರದರ್ಶಕವಾಗಿ ಹಾಗೂ ಪ್ರಾಮಾಣಿಕವಾಗಿ ಯೋಜನೆ ಜಾರಿ ಮಾಡಲು ಸಾಧ್ಯವೋ ಅಷ್ಟು ಪಾರದರ್ಶಕವಾಗಿ ಮಾಡಲಾಗುವುದು” ಎಂದರು.

Advertisements

“ಆತುರದಿಂದ ತಾಂತ್ರಿಕ ತೊಂದರೆ ಆಗಬಾರದು ಎಂದು ಗೃಹಲಕ್ಷ್ಮಿ ಯೋಜನೆಯನ್ನು ಕಾಲಾವಕಾಶ ಪಡೆದು ಜಾರಿ ಮಾಡಲಾಗುವುದು. ಬಾಪು ಕೇಂದ್ರ, ಪಂಚಾಯ್ತಿ ಕೇಂದ್ರ ಹಾಗೂ ಸ್ವಂತ ಮೊಬೈಲ್ ನಲ್ಲಿ ಅರ್ಜಿ ತುಂಬಲು ಅವಕಾಶ ಕಲ್ಪಿಸಲಾಗುತ್ತಿದೆ. ಇದರ ಜೊತೆಗೆ ಪಕ್ಷದ ಕಾರ್ಯಕರ್ತರು ಜನಪ್ರತಿನಿಧಿಗಳು ಮನೆ ಮನೆಗೆ ಹೋಗಿ ಪಕ್ಷಭೇದ ಮರೆತು ಈ ಯೋಜನೆಯ ಅರ್ಜಿ ತುಂಬಬೇಕು” ಎಂದು ಕರೆ ನೀಡಿದರು.

“ಪ್ರತಿ ಬೂತ್ ಮಟ್ಟದಲ್ಲಿ ಓರ್ವ ವಿದ್ಯಾವಂತ ಮಹಿಳೆ ಹಾಗೂ ಪುರುಷ ಪ್ರತಿ ಮನೆಗೆ ಹೋಗಿ ಅರ್ಜಿ ತುಂಬಲಿದ್ದಾರೆ. ಯಾರೂ ಅರ್ಜಿ ತುಂಬಲು ಲಂಚ ಪಡೆಯಬಾರದು. ಲಂಚ ಪಡೆದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಗ್ಯಾರಂಟಿ ಯೋಜನೆ ಜನರಿಗೆ ತಲುಪದಂತೆ ಕೇಂದ್ರ ಸರ್ಕಾರ ತಂತ್ರಾಂಶ ಹ್ಯಾಕ್ ಮಾಡಿದೆ: ಸತೀಶ್‌ ಜಾರಕಿಹೊಳಿ ಆರೋಪ

3.30 ಕೋಟಿ ಮಹಿಳೆಯರು ಉಚಿತ ಪ್ರಯಾಣ

“ಪಕ್ಷ ನೀಡಿದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಶಕ್ತಿ ಯೋಜನೆ ಜಾರಿ ಆಗಿದೆ. ಶಕ್ತಿ ಯೋಜನೆ ಜಾರಿಯಾದ ಒಂದು ವಾರದಲ್ಲಿ 3.30 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಧಾರ್ಮಿಕ ಕ್ಷೇತ್ರಗಳಲ್ಲಿ ಜನ ತೀರ್ಥಯಾತ್ರೆ ಮಾಡುತ್ತಿದ್ದಾರೆ. ಆ ಮೂಲಕ ಧರ್ಮ ಉಳಿಸುವ ಕೆಲಸ ಆಗುತ್ತಿದೆ” ಎಂದು ಹೇಳಿದರು.

“ಇನ್ನು ಗೃಹಜ್ಯೋತಿ ಯೋಜನೆ ನೋಂದಣಿ ಆರಂಭವಾಗಿದೆ. ನೀವೆಲ್ಲರೂ ತಾಳ್ಮೆಯಿಂದ ನೋಂದಣಿ ಮಾಡಿಕೊಳ್ಳಿ, ಆತುರ, ಗಾಬರಿ ಬೇಡ. ಎಲ್ಲರಿಗೂ ಈ ಯೋಜನೆ ಸಿಗಲಿದೆ”ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X