ಗದಗ | ಪ್ರವಾಸೋದ್ಯಮ ಅಭಿವೃದ್ಧಿಗೆ ಆಳವಾದ ಅಧ್ಯಯನವಾಗಲಿ: ಸಚಿವ ಎಚ್‌ ಕೆ ಪಾಟೀಲ್

Date:

Advertisements
  • ಗದಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ
  • ತಿಂಗಳಲ್ಲಿ ಸರ್ಕಾರಕ್ಕೆ ವರದಿ ನೀಡುವಂತೆ ಸಮಿತಿಗೆ ಸೂಚನೆ

ಗದಗ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿಗಾಗಿ ಪೂರಕ ವಾತಾವರಣ ನಿರ್ಮಿಸಲು ಯೋಜನೆಗಳನ್ನು ರೂಪಿಸುವ ಕುರಿತು ಆಳವಾದ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ ಸೂಚಿಸಿದರು.

ಗದಗ ನಗರದ ರೈತರ ಭವನದಲ್ಲಿ ಜರುಗಿದ ಗದಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯನ್ನು ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಮಗ್ರ ಹಾಗೂ ತಳಮಟ್ಟದಲ್ಲಿ ಅಧ್ಯಯನ ಮಾಡಿ ಉತ್ತಮ ವರದಿಯನ್ನು ಒಂದು ತಿಂಗಳೊಳಗೆ ಸರ್ಕಾರಕ್ಕೆ ಸಲ್ಲಿಸಬೇಕು. ಗದಗ ಜಿಲ್ಲೆಯನ್ನು ಪ್ರಮುಖ ಪ್ರವಾಸಿ ತಾಣವಾಗಿಸಲು ಪೂರಕ ವಾತಾವರಣವಿದೆ. ಇರುವ ಸಂಪನ್ಮೂಲ ಸಮರ್ಪಕವಾಗಿ ಬಳಸಿ ಜಿಲ್ಲೆಯನ್ನು ಪ್ರಮುಖ ಪ್ರವಾಸಿ ತಾಣವಾಗಿಸೋಣ ಎಂದರು.

ಜಿಲ್ಲೆಯಲ್ಲಿ ವಾಸ್ತುಶಿಲ್ಪಕ್ಕೆ ಪ್ರಸಿದ್ದಿ ಪಡೆದಿರುವ ಲಕ್ಕುಂಡಿ, ಹರ್ತಿ, ಡಂಬಳ, ಹುಲಕೋಟಿ ಸೇರಿದಂತೆ ಇತರೆ ಸ್ಥಳಗಳು ಐತಿಹಾಸಿಕ ದೇವಾಲಯಗಳನ್ನು ಹೊಂದಿದ್ದು, ಈ ಕುರಿತು ಈಗಾಗಲೇ ರಚಿಸಿರುವ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯು ಆಳವಾದ ಅಧ್ಯಯನ ನಡೆಸುವ ಅವಶ್ಯಕತೆ ಇದೆ ಎಂದು ಹೇಳಿದರು.

Advertisements

ರೋಣ, ಗಜೇಂದ್ರಗಡ, ನರಗುಂದ, ಶ್ರೀಮಂತಗಡ ಕೋಟೆಗಳು ಐತಿಹಾಸಿಕ ಚಾರಿತ್ರ್ಯ ಸಾರುವ ಕೋಟೆಗಳಾಗಿವೆ. ಹತ್ತಿರದ ಕಪ್ಪತಗುಡ್ಡ ಔಷಧಿ ಗುಣವುಳ್ಳ ಸಸ್ಯ ಸಂಪತ್ತನ್ನು ತನ್ನ ಒಡಲಲ್ಲಿ ಅಡಗಿಸಿಕೊಂಡು ಸಹ್ಯಾದ್ರಿಯಾಗಿದೆ. ಬಿಂಕದಕಟ್ಟಿಯಲ್ಲಿ ಇರುವ ಪ್ರಾಣಿ ಸಂಗ್ರಹಾಲಯವು 50 ವರ್ಷಗಳನ್ನು ಪೂರೈಸಿ ಸುವರ್ಣ ಸಂಭ್ರಮ ಆಚರಣೆ ಮಾಡಿದೆ. ನಗರದ ಭೀಷ್ಮಕೆರೆ, ಜುಮ್ಮಾ ಮಸೀದಿ, ತಿರಂಗಾ ಪಾರ್ಕ್‌, ಬೆಟಗೇರಿಯ ತಾರಾಲಯ, ಪ್ರಾಚ್ಯ ವಸ್ತು ಸಂಗ್ರಹಾಲಯ, ನೇಕಾರಿಕೆ ಇವೆಲ್ಲವುಗಳು ಪ್ರವಾಸಿಗರ ಆಕರ್ಷಣೆಗೆ ಪೂರಕವಾಗಿವೆ ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹೆಣ್ಣುಮಕ್ಕಳು ಸ್ವಾವಲಂಬನೆಯತ್ತ ಹೆಜ್ಜೆ ಹಾಕಿ; ಬಿ ವಾಮದೇವಪ್ಪ ಸಲಹೆ

ಗದಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಹಿರಿಯ ಐಎಎಸ್ ಅಧಿಕಾರಿ ಮನೋಜ ಕುಮಾರ್, ಕಾರ್ಯದರ್ಶಿಯಾಗಿ ಜಿ. ಜಗದೀಶ, ಸದಸ್ಯರಾಗಿ ಮಂಜುನಾಥ ಚವ್ಹಾಣ, ಜೆ ಕೆ ಜಮಾದಾರ, ವಿವೇಕಾನಂದಗೌಡ ಪಾಟೀಲ, ಡಾ. ಎಸ್ ಜಿ ಚಲವಾದಿ, ಕಿಶೋರ ಬಾಬು ನಾಗರಕಟ್ಟೆ, ಎ ದೇವರಾಜ, ಎಫ್ ಎನ್ ಹುಡೇದ ಸೇರಿದಂತೆ ಒಟ್ಟು 16 ತಜ್ಞರು ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಜಿಲ್ಲಾಧಿಕಾರಿ ಎಂ ಎಲ್‌ ವೈಶಾಲಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ಬಿ ಸುಶೀಲಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೇಯಿ, ಉಪವಿಭಾಗಾಧಿಕಾರಿ ಎಂ ಅನ್ನಪೂರ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ, ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ ಹಾಗೂ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X