ಸಾಲಗಾರನ ಕಿರುಕುಳ ತಾಳಲಾರದೆ ಬೇಸತ್ತ ರೈತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಾಜಪ್ಪ (37) ಮೃತ ರೈತ. ಗ್ರಾಮದ ಟಿ ರಾಜಶೇಖರ ಎಂಬುವರ ಬಳಿ ₹30,000 ಸಾಲ ಪಡೆದಿದ್ದರು. ಸಾಲ ಪಡೆದು ಎರಡು ತಿಂಗಳಾಗಿದ್ದು, ₹30,000ಕ್ಕೆ ₹80,000 ಬಡ್ಡಿ ಸೇರಿಸಿ ಕೊಡುವಂತೆ ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದುದು ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿ ಸೋಮವಾರ ಸಂಜೆ ಅವರ ಮನೆಯೊಳಗೆ ಕರೆದುಕೊಂಡು ಆತನ ಮೇಲೆ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
“ಹಲ್ಲೆಯಿಂದ ಬೇಸತ್ತ ರೈತ ಮಾನಸಿಕ ಖಿನ್ನತೆಗೆ ಒಳಗಾಗಿ ಏನೂ ಮಾಡಲು ತೋಚದೆ ಪೆಟ್ರೋಲ್ ಬಂಕ್ ಬಳಿ ಕುಳಿತು ಯೋಚಿಸಿದ್ದಾನೆ. ದಾರಿ ತೋಚದೆ ಹೊಲದಲ್ಲಿದ್ದ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಕೆಲಸದ ವೇಳೆ ಮನರೇಗಾ ಕಾರ್ಮಿಕ ಸಾವು
ಮೃತ ರೈತನಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಈ ಘಟನೆ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.