ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ ಬರುವ ಡಾ. ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಹಾಗೂ ಧಾರವಾಡದ ಕೆ.ಎಲ್.ಇ. ಸಂಸ್ಥೆಯ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 17, 2025 ರಂದು ಹಳೆಗನ್ನಡ ಓದು ಒಂದು ದಿನದ ರಾಷ್ಟ್ರಮಟ್ಟದ ಕಾರ್ಯಾಗಾರವನ್ನು ಕೆಎಲ್ಇ ಕಾಲೇಜಿನ ಸಭಾಭವನದಲ್ಲಿ ಆಯೋಜಿಸಿದ್ದಾರೆ.
ಕಾರ್ಯಾಗಾರದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯ ಹಸ್ತಪ್ರತಿ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಕೆ. ರವೀಂದ್ರನಾಥ ಡಾ. ಎಂ. ಎಂ. ಕಲಬುರ್ಗಿಯವರ ಲೇಖನಗಳನ್ನು ಅನುಲಕ್ಷಿಸಿ ಹಳೆಗನ್ನಡ ಓದು ಕುರಿತು ಮತ್ತು ನಿವೃತ್ತ ಪ್ರಾಚಾರ್ಯ ಹಾಗೂ ಸವದತ್ತಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ವಾಯ್.ಎಂ.ಯಾಕೊಳ್ಳಿ ಅವರು ಹಳೆಗನ್ನಡ ಸಾಹಿತ್ಯದ ಅವಲೋಕನ ಕುರಿತು ಪ್ರಬಂಧವನ್ನು ಮಂಡಿಸುವರು.
ಬೆಳಗಾವಿ ಕೆ.ಎಲ್.ಇ. ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಡಾ. ವ್ಹಿ. ಆಯ್. ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸುವರು. ಪ್ರತಿಷ್ಠಾನದ ಸದಸ್ಯ ಡಾ. ಬಾಳಣ್ಣ ಶೀಗೀಹಳ್ಳಿ ಪ್ರಾಸ್ತಾವಿಕ. ಅಧ್ಯಕ್ಷತೆಯನ್ನು ಪ್ರತಿಷ್ಠಾನದ ಅಧ್ಯಕ್ಷ ಡಾ. ವೀರಣ್ಣ ರಾಜೂರ ವಹಿಸುವರು. ಪ್ರಾಚಾರ್ಯ ಡಾ. ನೀಲಕ್ಕ ಪಾಟೀಲ ಮತ್ತು ಐ.ಕ್ಯೂ.ಐ.ಸಿ. ಸಂಯೋಜಕಿ ಪ್ರೊ. ಶ್ರೀದೇವಿ ಸಂಗೊಳ್ಳಿ ಉಪಸ್ಥಿತಿ ವಹಿಸುವರು.
ಈ ಕಾರ್ಯಗಾರಕ್ಕೆ ಸಂಶೋಧಕರು, ಸಾಹಿತಿಗಳು, ಗಣ್ಯರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು. ಭಾಗವಹಿಸಿದವರಿಗೆ ಇ-ಪ್ರಮಾಣಪತ್ರವನ್ನು ವಿತರಿಸಲಾಗುವುದು ಎಂದು ಡಾ. ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.