ವಾಕಿಂಗ್ ಹೋಗುತ್ತಿದ್ದ ಯುವಕನಿಗೆ ಬೈಕ್ ಡಿಕ್ಕಿ ಹೊಡೆದು ಉರುಳಿಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಔರಾದ್ ತಾಲೂಕಿನ ಸಂತಪೂರ-ಮಸ್ಕಲ್ ರಸ್ತೆಯಲ್ಲಿ ಭಾನುವಾರ ಸಂಜೆ ನಡೆದಿದೆ.
ಮಸ್ಕಲ್ ಗ್ರಾಮದ ನವನಾಥ ರಾಮಣ್ಣ (32) ಮೃತರು. ಗಾಯಗೊಂಡ ಸಂತಪೂರ ಗ್ರಾಮದ ರಾಹುಲ್ ಎಂಬ ಯುವಕನನ್ನು ಬೀದರ್‌ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಭಾನುವಾರ ಸಂಜೆ ಸ್ನೇಹಿತನೊಂದಿಗೆ ವಾಕಿಂಗ್ ಹೋಗುತ್ತಿದ್ದ ರಾಹುಲ್‌ಗೆ ಎದುರಿನಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ.
ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.