ಉಡುಪಿ ನಗರದ ಬೀಡಿನಗುಡ್ಡೆ ವಲಸೆ ಕಾರ್ಮಿಕರ ಕಾಲೋನಿಯಲ್ಲಿ ಜೋಪಡಿಯಲ್ಲಿ ವಾಸವಾಗಿದ್ದ ವಲಸೆ ಕಾರ್ಮಿಕ ವೃದ್ಧರೊಬ್ಬರು ವಾಸಸ್ಥಳದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆಗೆ ನೈಜಕಾರಣ ತಿಳಿದು ತಿಳಿದುಬಂದಿಲ್ಲ. ಘಟನಾ ಸ್ಥಳದಲ್ಲಿದ್ದು ನಗರ ಪೋಲಿಸ್ ಠಾಣೆಯ ಹೆಡ್ ಕಾನ್ಸಟೇಬೆಲ್ ಗಳಾದ ಹರೀಶ್ ಮಾಳ, ಸತೀಶ್ ಪಳ್ಳಿ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಕಳೇಬರವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಘಟಕಕ್ಕೆ ಸಾಗಿಸಲು ನೆರವಾದರು.

