‘ನಮ್ಮ ಮೆಟ್ರೋ’ದಿಂದ ಕನ್ನಡಿಗರನ್ನು ಹೊರಗಿಡುವ ಹುನ್ನಾರ; ಪ್ರತಿಭಟನೆ ಎಚ್ಚರಿಕೆ ನೀಡಿದ ಮುಖ್ಯಮಂತ್ರಿ ಚಂದ್ರು

Date:

Advertisements

ಬಿಎಂಆರ್‌ಸಿಎಲ್ ಸಂಸ್ಥೆಯು ಇತ್ತೀಚಿನ ತನ್ನ ಲೋಕೋ ಪೈಲೆಟ್‌ಗಳ ನೇಮಕಾತಿಯಲ್ಲಿನ 3 ವರ್ಷಗಳ ಅನುಭವದ
ಷರತ್ತುಗಳು ಸಂಪೂರ್ಣ ಕನ್ನಡಿಗರನ್ನು ಹೊರಗಿಡುವ ಹುನ್ನಾರವೇ ಹೊರತು ಬೇರೇನೂ ಅಲ್ಲ. ಅನ್ಯ ರಾಜ್ಯಗಳ ಮೆಟ್ರೋಗಳಲ್ಲಿ ಕೆಲಸ ಮಾಡುತ್ತಿರುವ ಅನ್ಯ ಭಾಷಿಕರನ್ನು ಚಾಲಕ ಹುದ್ದೆಗಳಿಗೆ ತುಂಬುವುದೇ ಇವರ ಷಡ್ಯಂತ್ರ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆರೋಪಿಸಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಈಗಾಗಲೇ ಸಂಸ್ಥೆಯಲ್ಲಿ ಉನ್ನತ ಹುದ್ದೆಗಳೆಲ್ಲವೂ ಅನ್ಯ ಭಾಷಿಕರ ಪಾಲಾಗಿದ್ದು ಅವರುಗಳ ಇಚ್ಛಾನುಸಾರವೇ ನೇಮಕಾತಿಗಳು ಸಹ ನಡೆಯುತ್ತಿರುವುದು ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ. ಕನ್ನಡದ ನೆಲ, ಜಲ, ತೆರಿಗೆ ಎಲ್ಲವನ್ನು ಬಳಸಿಕೊಳ್ಳುತ್ತಿರುವ ಸಂಸ್ಥೆಯು ಕನ್ನಡಿಗರ ನೇಮಕಾತಿಯ ವಿಚಾರದಲ್ಲಿ ಅನವಶ್ಯಕ ಗೊಂದಲಗಳನ್ನು ಸೃಷ್ಟಿಸುತ್ತಿದ್ದಾರೆ. ಈ ಕೂಡಲೇ ಸರ್ಕಾರ ಇಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕಮ ತೆಗೆದುಕೊಳ್ಳಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅಲ್ಲದೆ ಮೆಟ್ರೋ ಉನ್ನತ ಅಧಿಕಾರಿಗಳು ಅನವಶ್ಯಕವಾಗಿ ಅಧ್ಯಯನದ ಹೆಸರಿನಲ್ಲಿ ವಿದೇಶ ಪ್ರವಾಸಗಳನ್ನು ಕೈಗೊಂಡು ಮೋಜಿನ ಜೀವನ ನಡೆಸುತ್ತಿದ್ದಾರೆ. ಸಂಸ್ಥೆಯಲ್ಲಿ ಅನವಶ್ಯಕ ದುಬಾರಿ ಖರ್ಚುಗಳನ್ನು ಮಾಡುವ ಮೂಲಕ ನಷ್ಟವನ್ನು ತೋರಿಸುತ್ತಿದ್ದಾರೆ. ಸಂಸ್ಥೆಯು ಕನ್ನಡ ನೌಕರರ ಯೂನಿಯನ್ ಜೊತೆ ಯಾವುದೇ ಚರ್ಚೆಗಳನ್ನು ಮಾಡದೆ ಕನ್ನಡ ವಿರೋಧಿ ಧೋರಣೆಯನ್ನು ಪದೇ ಪದೆ ಮುಂದುವರಿಸುತ್ತಲೇ ಬರುತ್ತಿದ್ದಾರೆ. ಇವುಗಳೆಲ್ಲವೂ ತಕ್ಷಣವೇ ನಿಲ್ಲಬೇಕು” ಎಂದಿದ್ದಾರೆ.

Advertisements

:ಈಗಾಗಲೇ ಸಮಾಜದ ಎಲ್ಲ ವರ್ಗಗಳ ತೀವ್ರ ವಿರೋಧಗಳ ನಡುವೆಯೂ ಸಹ ಮೆಟ್ರೋ ಟಿಕೆಟ್ ಬೆಲೆಯನ್ನು ಏರಿಸಿದ್ದಾರೆ. ಮೆಟ್ರೋ ಅಧಿಕಾರಿಗಳ ಬಂಡತನ ಎಲ್ಲೆ ಮೀರಿದೆ. ಕನ್ನಡಿಗರ ಅಸ್ಮಿತೆಯ ವಿಷಯದಲ್ಲಿ ಸರ್ಕಾರವು ಮಧ್ಯಪ್ರವೇಶ ಮಾಡಲೇಬೇಕಾಗಿದೆ. ಇಂತಹ ಕನ್ನಡ ವಿರೋಧಿ ನೇಮಕಾತಿ ಅಧಿಸೂಚನೆಯನ್ನು ಕೂಡಲೇ ಹಿಂಪಡೆದುಕೊಳ್ಳಬೇಕು. ಇದಕ್ಕಾಗಿ 15 ದಿವಸಗಳ ಗಡುವನ್ನು ಸಹ ನೀಡುತ್ತಿದ್ದೇವೆ. ಇಲ್ಲದಿದ್ದಲ್ಲಿ ಮೆಟ್ರೋ ಸಂಸ್ಥೆಯ ವಿರುದ್ಧ ತೀವ್ರ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ” ಎಂದು ಮುಖ್ಯಮಂತ್ರಿ ಚಂದ್ರು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X