ಬಳ್ಳಾರಿ | ಯುವಕರು ಶಿಕ್ಷಣದ ಜೊತೆ ಕ್ರೀಡೆಯಲ್ಲೂ ತೊಡಗಿಸಿಕೊಳ್ಳಬೇಕು: ಮೇಯರ್ ಮುಲ್ಲಂಗಿ ನಂದೀಶ್

Date:

Advertisements

ಕ್ರೀಡೆ ಎಂಬುದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೇ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ ಬೆಳವಣಿಗೆಗೂ ಸಾಕಷ್ಟು ಪ್ರಯೋಜನಕಾರಿಯಾಗಿದೆ ಎಂದು ಬಳ್ಳಾರಿ ಮಹಾನಗರ ಪಾಲಿಕೆ ಮಹಾಪೌರರಾದ ಮುಲ್ಲಂಗಿ ನಂದೀಶ್ ಹೇಳಿದರು.

ನೆಹರು ಯುವ ಕೇಂದ್ರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ಲಿಯಾ ಯೂತ್ ಅಸೋಸಿಯೇಷನ್(ರಿ) ಇವರ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀಮತಿ ಗಾಲಿ ರುಕ್ಮಣಮ್ಮ ಚೆಂಗಾರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ಯುವಜನತೆಯಲ್ಲಿ ಶಿಸ್ತು, ನಾಯಕತ್ವ ಹಾಗೂ ಸಂಘಟನೆ ಮಖ್ಯ. ಶಿಕ್ಷಣದ ಜೊತೆ ಕ್ರೀಡೆಯಲ್ಲೂ ತೊಡಗಿಸಿಕೊಳ್ಳುವುದರಿಂದಷ್ಟೇ ಜೀವನದಲ್ಲಿ ಮೌಲ್ಯಗಳು ಬೆಳೆಯಲು ಸಾಧ್ಯ” ಎಂದು ತಿಳಿಸಿದರು.

Advertisements

ಕಾಲೇಜಿನ ಪ್ರಾಚಾರ್ಯ ಡಾ. ಸುಧಾಕರ ಡಿ ಮಾತನಾಡಿ, “ಓದಿನೊಂದಿಗೆ ಕ್ರೀಡೆಗೂ ಒತ್ತು ನೀಡಿದಾಗ ಯುವ ಸಮುದಾಯ ಆರೋಗ್ಯವಂತರಾಗಿರಬಹುದು” ಎಂದು ತಿಳಿಸಿದರು.

ನೆಹರು ಯುವ ಕೇಂದ್ರದ ಯುವ ಅಧಿಕಾರಿ ಮೊಂಟ್ ಪತ್ತಾರ್ ಅವರು ಕ್ರೀಡೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸಂಕ್ಷಿಪ್ತ ಮಾಹಿತಿ ನೀಡಿದರು. ಕ್ರೀಡಾಕೂಟದಲ್ಲಿ ವಾಲಿಬಾಲ್, ಖೋಖೋ, 100 ಮೀ. ಓಟದ ಸ್ಪರ್ಧೆ, ಸ್ಲೋಸೈಕಲಿಂಗ್ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಇದನ್ನೂ ಓದಿ: ಬಳ್ಳಾರಿ | ವರ್ಷದ ಹಿಂದೆ ತಾಯಿಯಿಂದಲೇ ಮಾರಾಟವಾಗಿದ್ದ ಮಗು ಆಂಧ್ರಪ್ರದೇಶದಲ್ಲಿ ಪತ್ತೆ

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕ ಮುತ್ತೇಗೌಡ, ಕ್ರೀಡಾಕೂಟ ಆಯೋಜಕ ಆರ್.ಕೆ.ಅಬ್ರಹಂ, ಎನ್.ಐ.ಎಫ್.ಎ.ಎ  ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X