ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಸ್ನೇಹಿತರಿಂದ ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದಲ್ಲಿ ನಡೆದಿದೆ.
ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯಾನಂದ ಮತ್ತು ಸದಸ್ಯ ರಾಶ್ಚಿಕ್ ಹಾಗೂ ಸಹಚರರು ಹಲ್ಲೆ ನಡೆಸಿದ್ದಾರೆ. ತಡ ರಾತ್ರಿ 1 ಗಂಟೆಗೆ ಶ್ರೀ ಗಂಧ ಬಾರಿನಲ್ಲಿ ಸಿಬ್ಬಂದಿ ಕೆಲಸ ಮಾಡುತಿದ್ದ ವ್ಯಕ್ತಿ ಎಣ್ಣೆ ನೀಡಲು ನಿರಾಕರಿಸಿದ ಕಾರಣಕ್ಕಾಗಿ, ವಿಜಯಾನಂದ ಮತ್ತು ಸಹಚರರು ಸೇರಿ ಸಿಬ್ಬಂದಿಗೆ ಮನಸ್ಸು ಇಚ್ಛೆಯಂತೆ ಹಲ್ಲೆ ನಡೆಸಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಇಬ್ಬರು ಪ್ರವಾಸಿಗರು ನೀರಿನಲ್ಲಿ ಮುಳುಗಿ ಸಾವು
ಹಲ್ಲೆಗೆ ಒಳಗಾದ ಸಿಬ್ಬಂದಿ ಯಾವುದೇ ದೂರು ನೀಡಿರಲಿಲ್ಲ, ನಂತರ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಆಮಟೆ ಸೂಚನೆ ಮೇರೆಗೆ ಕೊಪ್ಪ ಪೊಲೀಸರಿಂದ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
