ತುಮಕೂರು | ಸಿದ್ಧಗಂಗಾ ಮಠದಲ್ಲಿ ಇಫ್ತಿಯಾರ್ ಕೂಟ

Date:

Advertisements

ಪವಿತ್ರ ರಂಜಾನ್ ಪ್ರಯುಕ್ತ ವಿವಿಧ ಮುಸ್ಲೀಂ ಮುಖಂಡರು ಭಾನುವಾರ ಸಂಜೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಅನ್ನ ದಾಸೋಹ ಕೇಂದ್ರ ಸಿದ್ಧಗಂಗಾ ಮಠದಲ್ಲಿ ಮುಖಂಡರು ರಂಜಾನ್ ಪ್ರಯುಕ್ತ ಕೈಗೊಂಡಿದ್ದ ಉಪವಾಸವನ್ನು ಅಂತ್ಯಗೊಳಿಸಿದರು. ಅಲ್ಲದೆ ಶ್ರೀಮಠದಲ್ಲಿ ನಡೆದ ಭಾವೈಕ್ಯತಾ ಸತ್ಕಾರ ಕೂಟದಲ್ಲಿ ಭಾಗವಹಿಸಿ ಫಲಾಹಾರ ಸೇವಿಸಿದರು.

ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆಹ್ರೂಜ್ ಖಾನ್, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಇಕ್ಬಾಲ್ ಅಹ್ಮದ್, ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಹಾಗೂ ಇತರೆ ಮುಖಂಡರು ಸಿದ್ಧಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದು ಸಂಜೆ ಮಠದಲ್ಲಿ ನಡೆದ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಸಿದ್ಧಲಿಂಗ ಸ್ವಾಮೀಜಿ, ಭಾರತ ಎಲ್ಲಾ ಧರ್ಮಗಳಿಗೂ ಆಶ್ರಯ ನೀಡಿದೆ. ಇನ್ಯಾವ ದೇಶಗಳಲ್ಲೂ ಭಾರತದಷ್ಟು ಧರ್ಮಗಳು ಇಲ್ಲ. ಎಲ್ಲಾ ಧರ್ಮಗಳ ಸಾರ ಒಂದೇ, ಅದು ಶಾಂತಿ ಮತ್ತು ಪ್ರೀತಿ. ಎಲ್ಲಾ ಧರ್ಮದವರು ಶಾಂತಿ, ಸಹಬಾಳ್ವೆಯಿಂದ ಬಾಳಬೇಕು ಎಂಬುದು ಎಲ್ಲಾ ಧರ್ಮಗಳ ಆಶಯ. ಭಾರತ ಭಾವೈಕ್ಯತೆಯ ದೇಶ ಎಂದು ಹೇಳಿದರು.

Advertisements

ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆಹ್ರೂಜ್ ಖಾನ್ ಮಾತನಾಡಿ, ರಂಜಾನ್ ಸಂದರ್ಭದಲ್ಲಿ ಮುಸಲ್ಮಾನರು ಆಚರಿಸುವ ಉಪವಾಸವು ಅನ್ನದ ಮಹತ್ವವನ್ನು ಸಾರುತ್ತದೆ. ಅನ್ನ ದಾನ ಕೇಂದ್ರವಾಗಿ ವಿಖ್ಯಾತವಾಗಿರುವ ಸಿದ್ಧಗಂಗಾ ಮಠದಲ್ಲಿ ರಂಜಾನ್‌ನ ಉಪವಾಸವನ್ನು ಅಂತ್ಯಗೊಳಿಸುವುದು ಕೂಡಾ ಪವಿತ್ರ ಎಂದು ನಾವು ಇಲ್ಲಿಗೆ ಬಂದಿದ್ದೇವೆ. ಹಿಂದಿನ ವರ್ಷವೂ ಸಿದ್ಧಗಂಗಾ ಮಠದಲ್ಲಿ ರಂಜಾನ್ ಉಪವಾಸ ಬಿಟ್ಟಿದ್ದಾಗಿ ಹೇಳಿದರು

1001185232

ಕೆಪಿಸಿಸಿ ಮಾಜಿ ಕಾರ್ಯದರ್ಶಿ ಇಕ್ಬಾಲ್ ಅಹ್ಮದ್ ಮಾತನಾಡಿ, ದಯವಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಹೇಳಿದಂತೆ ಇಸ್ಲಾಂ ಧರ್ಮವೂ ದಾನ, ದಯೆ, ಕರುಣೆಯನ್ನು ಪಚ್ರತಿಪಾದಿಸುತ್ತದೆ. ಅನ್ನದ ಮಹತ್ವ, ಹಸಿವಿನ ಕಷ್ಟದ ಅರಿವಾಗಬೇಕು, ಹಸಿದವರ ಸಂಕಟ ತಿಳಿಯಬೇಕು ಎನ್ನುವ ಕಾರಣಕ್ಕೆ ರಂಜಾನ್‌ನಲ್ಲಿ ಉಪವಾಸ ಆಚರಿಸಲಾಗುತ್ತದೆ. ಇಂದು ಅನ್ನ ದಾಸೋಹ ಕೇಂದ್ರವಾದ ಸಿದ್ಧಗಂಗಾ ಮಠದಲ್ಲಿ ನಾವು ಉಪವಾಸ ಬಿಟ್ಟಿದ್ದು ವಿಶೇಷವಾಗಿದೆ ಎಂದು ಹೇಳಿದರು.

ಬಡವರು, ಅನಾಥರಿಗೆ ಸಹಾಯ ಮಾಡಬೇಕು, ಹಸಿದವರಿಗೆ ಅನ್ನ ದಾನ ಮಾಡಬೇಕು. ಎಲ್ಲರಲ್ಲೂ ಸಮಾನತೆಯಿಂದ ಕಾಣಬೇಕು ಎಂಬುದು ಇಸ್ಲಾಂ ಧರ್ಮ ಆಶಯ. ಅಶಕ್ತರಿಗೆ ಸಹಾಯ ಮಾಡುವ ಮಾನವೀಯ ಧರ್ಮ ದೊಡ್ಡದು ಎಂದರು.

ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಮಾತನಾಡಿ, ಅಕ್ಷರ, ಅನ್ನ, ಆಶ್ರಯದ ತ್ರಿವಿಧ ದಾಸೋಹದ ಸಿದ್ಧಗಂಗಾ ಮಠದಲ್ಲಿ ಎಲ್ಲಾ ಜನಾಂಗದ ಬಡ ಮಕ್ಕಳಿಗೆ ಆಶ್ರಯ ನೀಡಿ ಅವರಿಗೆ ಅನ್ನ ನೀಡಿ ಅಕ್ಷರ ಕಲಿಸುವ ಪವಿತ್ರ ಕೆಲಸ ನಡೆಯುತ್ತಿದೆ. ಎಲ್ಲರೂ ಸಮಾನವರು ಬೇಧಭಾವ ಮರೆತು ಸಹಬಾಳ್ವೆಯಿಂದ ವಾಳಬೇಕು ಎಂದು ಡಾ.ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ ಹೇಳಿದೆ. ಅದರ ತತ್ವಗಳನ್ನು ಅನುಸರಿಸಿಕೊಂಡು ಎಲ್ಲರೂ ಶಾಂತಿ ಸಮಾಧಾನದಿಂದ ಬಾಳೋಣ ಎಂದು ಹೇಳಿದರು.

ರಾಜೀವ್ ಗಾಂಧಿ ವೈದ್ಯಕೀಯ ವಿಶ್ವಿದ್ಯಾಲಯದ ಸೆನೆಟ್ ಸದಸ್ಯ ಡಾ.ಶ್ರೀನಿವಾಸನ್, ಕೆಪಿಸಿಸಿ ಕಾನೂನು ಘಟಕ ಕಾರ್ಯದರ್ಶಿ ಆಲಿ, ಮುಖಂಡರಾದ ಅನಿಲ್ ತಡಕಲ್, ಸೈಯದ್ ನಯಾಜ್ ಅಹ್ಮದ್, ಡಾ.ರಿಯಾನ್ ಷರೀಫ್ ಮೊದಲಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X