ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಗಂಗಾವತಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಹಿಳೆ ಆಂಬ್ಯುಲೆನ್ಸ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ತಾಲೂಕಿನ ಜೀರಾಳ ಗ್ರಾಮದ ಲಕ್ಷ್ಮೀ ಪರುಶುರಾಮ ಗುತ್ತೂರು ಎಂಬಾಕೆ ಗಂಡು ಮಗುವಿಗೆ ಜನ್ಮ ನೀಡಿದವರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಕೊಪ್ಪಳ | ಈದ್ಗಾ ಪ್ರಾರ್ಥನಾ ಮಂದಿರದ ಗೋಡೆಯ ಮೇಲೆ ಅಶ್ಲೀಲ ಚಿತ್ರ ಬಿಡಿಸಿದ ಕಿಡಿಗೇಡಿಗಳು
ಮಾರ್ಗ ಮಧ್ಯೆ ತೀವ್ರ ನೋವಿನಿಂದ ನರಳುತ್ತಿದ್ದ ಆಕೆಗೆ 108 ಆರೋಗ್ಯ ಕವಚ ಸಿಬ್ಬಂದಿ ಧರ್ಮೇಂದ್ರ ಮರಕುಂಬಿ ಹಾಗೂ ಚಾಲಕ ಮಾರುತಿ ವಾಲ್ಮೀಕಿ ಅವರ ಸಹಕಾರದಿಂದ ಹೆರಿಗೆ ಮಾಡಿಸಿ ತಾಯಿ ಮತ್ತು ಮಗುವನ್ನು ಗಂಗಾವತಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.
