ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಸೋಮವಾರ (ಮಾ.17) ಸಂಜೆ ಕೊಪ್ಪಳ ಜಿಲ್ಲೆಯ ಕನಕಗಿರಿ ವಾಲ್ಮೀಕಿ ವೃತ್ತದ ಬಳಿ ನವಲಿ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದರು. ಬೆಂಕಿ ಕಾಣಿಸಿಕೊಂಡಿದ್ದರಿಂದ ತಕ್ಷಣ ಮೂವರು ಕಾರಿನಿಂದ ಕೆಳಗಿಳಿದಿದ್ದಾರೆ. ಸಮಯ ಪ್ರಜ್ಞೆಯಿಂದ ಮೂವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕೊಪ್ಪಳ | ಕಾಲು ಜಾರಿ ಕಾಲುವೆಯಲ್ಲಿ ಕೊಚ್ಚಿಹೋದ ನರೇಗಾ ಕಾರ್ಮಿಕ
ಕಾರಿನ ಇಂಜಿಯನ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬೇರೆ ಯಾವುದೇ ಹಾನಿ ಸಂಭವಿಸಿಲ್ಲ.
