ಔರಂಗಜೇಬ್ ಸಮಾಧಿ ವಿವಾದ: ನಾಗ್ಪುರದಲ್ಲಿ ಹಿಂಸಾಚಾರ; ಹಲವರ ಬಂಧನ

Date:

Advertisements

ಮೊಗಲ್ ರಾಜ ಔರಂಗಜೇಬ್ ಸಮಾಧಿಯನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್(ವಿಹೆಚ್‌ಪಿ), ಬಜರಂಗದಳ ಸೇರಿದಂತೆ ಹಿಂದುತ್ವವಾದಿ ಬಲಪಂಥೀಯ ಗುಂಪುಗಳು ನಾಗ್ಪುರದಲ್ಲಿ ಪ್ರತಿಭಟನೆ ನಡೆಸಿವೆ. ಸೋಮವಾರ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಮರ ಧಾರ್ಮಿಕ ಗ್ರಂಥ ಖುರ್‌ಆನ್‌ನ ಪ್ರತಿಯನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿ ಹರಡಿದ್ದು, ಹಿಂಸಾಚಾರ ಉಂಟಾಗಿದೆ. ಘಟನೆ ಸಂಬಂಧ ಹಲವರನ್ನು ಬಂಧಿಸಲಾಗಿದ್ದು, ನಗರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.

ಹಿಂದುತ್ವವಾದಿ ಸಂಘಟನೆಗಳು ನಡೆಸುತ್ತಿದ್ದ ಪ್ರತಿಭಟನೆ ವೇಳೆ, ಎರಡು ಸಮುದಾಯಗಳ ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮನೆಗಳ ಮೇಲೆ ಕಲ್ಲೂ ತೂರಲಾಗಿದೆ. ಅಂಗಡಿ-ಮುಂಗಟ್ಟುಗಳಿಗೆ ಹಾನಿ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿ, ಲಾಠಿ ಪ್ರಹಾರ ನಡೆಸಿದ್ದಾರೆ. ಹಿಂಸಾಚಾರದಲ್ಲಿ ಸುಮಾರು 30 ಪೊಲೀಸ್ ಸಿಬ್ಬಂದಿ ಮತ್ತು 5-6 ನಾಗರಿಕರು ಗಾಯಗೊಂಡಿದ್ದಾರೆ. 60ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಸೋಮವಾರ ಬೆಳಿಗ್ಗೆ 7-9 ಗಂಟೆಯ ನಡುವೆ, ನಾಗ್ಪುರದ ಮಹಲ್ ಪ್ರದೇಶದಲ್ಲಿರುವ ಮರಾಠ ದೊರೆ ಛತ್ರಪತಿ ಶಿವಾಜಿ ಪ್ರತಿಮೆಯ ಮುಂದೆ ʼಶಿವ ಜಯಂತಿʼ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಧ್ಯಾಹ್ನದ ಹೊತ್ತಿಗೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ಸುಮಾರು 40-50 ಕಾರ್ಯಕರ್ತರು ಛತ್ರಪತಿ ಸಂಭಾಜಿನಗರ ಜಿಲ್ಲೆಯ ಖುಲ್ದಾಬಾದ್‌ನಲ್ಲಿರುವ ಔರಂಗಜೇಬ್ ಸಮಾಧಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ, ಔರಂಗಜೇಬ್ ಪ್ರತಿಕೃತಿಯನ್ನು ಸುಟ್ಟು ಹಾಕಿದ್ದರು.

Advertisements

ಈ ವೇಳೆ ಕುರ್‌ಆನ್‌ ಪ್ರತಿಯನ್ನೂ ಸುಡಲಾಗಿದೆ ಎಂಬ ವದಂತಿ ಎಲ್ಲೆಡೆ ಹಬ್ಬಿದೆ. ಈ ಸಂಬಂಧ ಕೆಲವೊಂದು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಂಜೆ 5 ರಿಂದ 7 ಗಂಟೆಯ ನಡುವೆ, ಮುಸ್ಲಿಂ ಸಮುದಾಯದ ಕೆಲ ಯುವಕರು ಮಹಲ್ ಪ್ರದೇಶದಲ್ಲಿ ಒಟ್ಟುಗೂಡಿ ಹಿಂದುತ್ವ ಸಂಘಟನೆಗಳ ವಿರುದ್ದ ಘೋಷಣೆಗಳನ್ನು ಕೂಗಿದ್ದಾರೆ. ನೋಡ ನೋಡುತ್ತಲೇ ಸಾವಿರಾರು ಯುವಕರು ಬೀದಿಗಿಳಿದಿದ್ದಾರೆ. ಈ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿದ್ದಾರೆ.

ಸಂಜೆ 7.30ರ ಸುಮಾರಿಗೆ ಹಿಂಸಾಚಾರ ಹೆಚ್ಚಾಗಿದ್ದು, ಕಾರು, ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿದೆ ಮತ್ತು ಮಹಲ್ ಪ್ರದೇಶದ ಹಲವಾರು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪರಿಸ್ಥಿತಿ ಕೈ ಮೀರುವುದನ್ನು ಗಮನಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಆದರೆ, ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಅಶ್ರುವಾಯು ಸಿಡಿಸಿದ್ದಾರೆ.

ವದಂತಿ ಹರಡಿ ಗಲಭೆಗೆ ಕಾರಣರಾದ 100ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ಕುರಿತು ಮಹಾರಾಷ್ಟ್ರ ಪೊಲೀಸರ ಸೈಬರ್ ವಿಭಾಗ ತನಿಖೆ ಆರಂಭಿಸಿದೆ. ಹಳೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಜನರು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಹಿಂಸಾಚಾರದ ಬಳಿಕ, ಪ್ರಸ್ತುತ ನಗರದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 163 (1) (2) (3) ರ ಅಡಿಯಲ್ಲಿ, ಪರಿಸ್ಥಿತಿ ಸಾಮಾನ್ಯವಾಗುವವರೆಗೆ ನಗರದ ವಿವಿಧೆಡೆ ಕರ್ಫ್ಯೂ ಜಾರಿಗೊಳಿಸಿ ನಾಗ್ಪುರ ನಗರ ಪೊಲೀಸ್ ಆಯುಕ್ತ ಡಾ. ರವೀಂದ್ರ ಕುಮಾರ್ ಸಿಂಘಾಲ್ ಆದೇಶ ಹೊರಡಿಸಿದ್ದಾರೆ.

ಕೊತ್ವಾಲಿ, ಗಣೇಶಪೇಟೆ, ತೆಹಸಿಲ್, ಲಕಡ್ಗಂಜ್, ಪಚ್ಪೋಲಿ, ಶಾಂತಿನಗರ, ಸಕರ್ದಾರ, ನಂದನವನ್, ಇಮಾಮವಾಡ, ಯಶೋಧರನಗರ ಮತ್ತು ಕಪಿಲನಗರ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X