ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬಸ್ಥರ ವಿರುದ್ಧ ದಾಖಲಿರುವ ಭೂ ಒತ್ತುವರಿ ಪ್ರಕರಣ ಸಂಬಂಧಿ ಅದಿಕಾರಿಗಳು ಸಮೀಕ್ಷೆ ಮತ್ತು ತನಿನೆ ನೀಡಿದ್ದಾರೆ. ಇದೀಗ, ಒತ್ತುವರಿ ತೆರವಿಗೆ ಸಿದ್ದತೆ ನಡೆದಿದ್ದು, ಕುಮಾರಸ್ವಾಮಿ ಅವರು ತೋಟದ ಬಳಿ ಎರಡು ಜೆಸಿಬಿಗಳು ಒತ್ತುವರಿ ತೆರವು ಕಾರ್ಯಾರಚರಣೆಗೆ ಸಿದ್ದವಾಗಿದೆ ಎಂದು ಹೇಳಲಾಗಿದೆ.
ಬಿಡದಿಯ ಕೇತಗಾನಹಳ್ಳಿಯಲ್ಲಿ ಸರ್ವೇ ನಂಬರ್ 7, 8, 9, 10, 16, 17 ಮತ್ತು 79ರಲ್ಲಿ ಸುಮಾರು 70 ಎಕರೆ ಸರ್ಕಾರಿ ಭೂಮಿಯನ್ನು ಕುಮಾರಸ್ವಾಮಿ ಮತ್ತು ಸಂಬಂಧಿಗಳು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಒತ್ತುವರಿ ಪ್ರಕರಣದಲ್ಲಿ ತನಿಖೆ ನಡೆಸಿ, ಒತ್ತುವರಿಯಾಗಿದ್ದರೆ ತೆರವುಗೊಳಿಸಲು ಹೈಕೋರ್ಟ್ ಸೂಚನೆ ನೀಡಿತ್ತು.
ಹೈಕೋರ್ಟ್ ಆದೇಶದಂತೆ ಕಂದಾಯ ಇಲಾಖೆ ಹಾಗೂ ಸರ್ವೇ ಇಲಾಖೆ ಅಧಿಕಾರಿಗಳು ಸರ್ವೇ ನಡೆಸಿ, ತನಿಖೆ ನಡೆಸಿದ್ದಾರೆ. ಆದರೆ, ಕೇವಲ 14 ಎಕರೆ ಮಾತ್ರವೇ ಒತ್ತುವರಿಯಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ, ಒತ್ತುವರಿ ತೆರಳು ಕಾರ್ಯಾಚರಣೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ. ಶೀಘ್ರದಲ್ಲೇ ತೆರವು ಕಾರ್ಯಾಚರಣೆ ಆರಂಭ ಸಾಧ್ಯತೆ ಇದೆ.
ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಕೋರ್ಟ್ ಆದೇಶ ಮತ್ತು ಒತ್ತುವರಿ ಸರ್ವೆ ವರದಿಯೊಂದಿಗೆ ಕುಮಾರಸ್ವಾಮಿ ಅವರ ತೋಟದ ಮನೆ ಬಳಿಗೆ ಬಂದಿದ್ದಾರೆ. ಉಪ ವಿಭಾಗಾಧಿಕಾರಿ ಬಿನೋಯ್ ಪಿ.ಕೆ, ತಹಶೀಲ್ದಾರ್ ತೇಜಸ್ವಿನಿ, ಸರ್ವೆ ಅಧಿಕಾರಿ ಹನುಮೇಗೌಡ, ಪೊಲೀಸರು ಸೇರಿದಂತೆ ಇತರ ಅಧಿಕಾರಿಗಳು ಜೊತೆಗಿದ್ದಾರೆ. ಐದು ಜೆಸಿಬಿಗಳನ್ನೂ ತರಲಾಗಿದೆ.
“ಕೋರ್ಟ್ ಆದೇಶದಂತೆ ತೆರವು ಕಾರ್ಯಾಚರಣೆ ನಡೆಸಲು ಮುಂದಾಗಿದ್ದೇವೆ. ಹಲವರಿಗೆ ಸೇರಿರುವ 12 ಸರ್ವೆ ನಂಬರ್‌ಗಳ 14 ಎಕರೆಯಷ್ಟು ಜಾಗ ಒತ್ತುವರಿಯಾಗಿದೆ. ಅದನ್ನು ತೆರವುಗೊಳಿಸಲಾಗುತ್ತದೆ” ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಹೇಳಿದ್ದಾರೆ.