ಹಾವೇರಿ | ಸ್ವಚ್ಛವಾಹಿನಿ ಮಹಿಳಾ ಕಾರ್ಮಿಕರನ್ನು  ಖಾಯಂಗೊಳಿಸಿ, ವೇತನ ಭದ್ರತೆ ಒದಗಿಸಬೇಕು: ಎಂ. ನಾಡಗೌಡ ಆಗ್ರಹ

Date:

Advertisements

“ಗ್ರಾಮೀಣ ಪ್ರದೇಶವನ್ನು ಸ್ವಚ್ಛವಾಗಿಡುವಲ್ಲಿ ಸ್ವಚ್ಛವಾಹಿನಿ ಮಹಿಳಾ ಕಾರ್ಮಿಕರ ಪಾತ್ರ ಬಹುಮುಖ್ಯವಾದುದು. ಇಂತಹ ಶ್ರಮಿಕರು ಇಂದು ಯಾವುದೇ ಕನಿಷ್ಠ ಸೌಲಭ್ಯಗಳಿಲ್ಲದೇ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಈ ಮಹಿಳಾ ಕಾರ್ಮಿಕರನ್ನು ವೇತನ ಭದ್ರತೆ ಸೌಲಭ್ಯ ಒದಗಿಸಿ, ರಾಜ್ಯ ಸರಕಾರ ಖಾಯಂಗೊಳಿಸಬೇಕು” ಎಂದು ಎಂ.ಬಿ ನಾಡಗೌಡ ಒತ್ತಾಯಿಸಿದರು.

ಹಾವೇರಿ ಪಟ್ಟಣದ ಜಿಲ್ಲಾ ಪಂಚಾಯತ ಕಛೇರಿ ಎದುರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘಟನೆ ನೇತೃತ್ವದಲ್ಲಿ ಸ್ವಚ್ಛವಾಹಿನಿ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

“ಹಳ್ಳಿಗಳ ಸ್ವಚ್ಚತೆಯ ಜವಾಬ್ದಾರಿ ನಿಭಾಯಿಸುತ್ತಿರುವ ಸ್ವಚ್ಛವಾಹಿನಿ ನೌಕರರಿಗೆ ಮೂಲಭೂತ ಸೌಕರ್ಯಗಳು ಮರೀಚಿಕೆಯಾಗಿವೆ. ರಾಜ್ಯ ಸರ್ಕಾರದಿಂದ ತರಬೇತಿ ಪಡೆದ ಸ್ವಚ್ಛವಾಹಿನಿ ನೌಕರರಿಗೆ ಗ್ರಾಮ ಪಂಚಾಯತಿಗಳಲ್ಲಿ ಕೆಲಸ ಕೊಡುತ್ತಿಲ್ಲ. ಸ್ವಚ್ಛವಾಹಿನಿ ವಾಹನಗಳಿಗೆ ವಿಮೆ ನವೀಕರಣ ಮಾಡುತ್ತಿಲ್ಲ. ‘ಬೇಟಿ ಬಚಾವೋ ಬೇಟಿ ಪಡಾವೋ’ ಎನ್ನುವ ಸರ್ಕಾರಗಳು ಜೀವದ ಹಂಗು ತೊರೆದು ಅತ್ಯಂತ ಕಡಿಮೆ ಸಂಬಳದಲ್ಲಿ ದುಡಿಯುತ್ತಿರುವ ಮಹಿಳಾ ನೌಕರರ ವೇತನವನ್ನು ಬಾಕಿ ಉಳಿಸಿಕೊಂಡಿರುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.

Advertisements

“ಸರಕಾರ ಕೂಡಲೇ ತರಬೇತಿ ಪಡೆದ ಸ್ವಚ್ಛವಾಹಿನಿ ನೌಕರರಿಗೆ ಗ್ರಾಮ ಪಂಚಾಯತಿಗಳಲ್ಲಿ ಕೆಲಸ ಕೊಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಪ್ರತಿ ತಿಂಗಳು 5ನೇ ತಾರೀಖಿಗೆ ವೇತನ ನೀಡಬೇಕು. ಬಾಕೀ ವೇತನನ್ನು ಪಾವತಿಸಲು ತಕ್ಷಣ ಕ್ರಮ ಕೈಗೊಳ್ಳಲು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಿಗೂ ಸೂಕ್ತ ನಿರ್ದೇಶನ ನೀಡಬೇಕು” ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಅನ್ನದಾನಪ್ಪ ಕೆ. ಹೆಬಸೂರು ಮಾತನಾಡಿ, “ಸ್ವಚ್ಛವಾಹಿನಿ ಗಾಡಿಗಳಿಗೆ ವಿಮೆ ನವೀಕರಣ ಮಾಡಿಕೊಡಲು ತಕ್ಷಣ ಕ್ರಮ ಕೈಗೊಳ್ಳಬೇಕು. ಸ್ವಚ್ಛತಾ ಸಿಬ್ಬಂಧಿಗಳಿಗೆ ರಕ್ಷಣಾ ಸಲಕರಣೆಗಳನ್ನು ಒದಗಿಸಬೇಕು. ಸ್ವಚ್ಛವಾಹಿನಿ ಮಹಿಳಾ ಸಿಬ್ಬಂದಿಗಳಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಆರೋಗ್ಯ ವಿಮೆ ಜಾರಿ ಮಾಡಬೇಕು” ಎಂದು ಆಗ್ರಹಿಸಿದರು.

ಡಿ ವೈ ಎಫ್ ಐ ರಾಜ್ಯ ಪ್ರದಾನ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, “ತರಬೇತಿ ಪಡೆದ ಮಹಿಳಾ ಡ್ರೈವರ್ ಗಳಿಗೆ ಮಾತ್ರ ಆಟೋಗಳನ್ನ ಕೊಡಲು ಕ್ರಮ ಕೈಗೊಳ್ಳಬೇಕು. ಗ್ರಾಮ ಪಂಚಾಯತಿಗಳಲ್ಲಿ ಕೆಟ್ಟು ನಿಂತಿರುವ ಆಟೋಗಳ ದುರಸ್ತಿಯನ್ನ ಮಾಡಲು ಸೂಕ್ತ ಕ್ರಮಕೈಗೊಳ್ಳಬೇಕು. ಸ್ವಚ್ಚವಾಹಿನಿ ನೌಕರರನ್ನು ಪ್ರತಿ ವರ್ಷ ನವೀಕರಿಸುವ ಬದಲಾಗಿ ಒಮ್ಮೆ ಕೆಲಸಕ್ಕೆ ಸೇರಿಸಿಕೊಂಡವರನ್ನು ಕೆಲಸದಲ್ಲಿ‌ ಖಾಯಂ ಆಗಿ ಮುಂದುವರೆಸಬೇಕು. ಸ್ವಚ್ಛವಾಹಿನಿ ನೌಕರರನ್ನು ಗ್ರಾಮ ಪಂಚಾಯತಿ ನೌಕರರೆಂದು ಪರಿಗಣಿಸಿ ಗ್ರಾಮ ಪಂಚಾಯತಿ ನೌಕರರಿಗೆ ನೀಡುವ ಸೌಲಭ್ಯಗಳನ್ನು ಜಾರಿಗೊಳಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು l ಬಾರ್ ಸಿಬ್ಬಂದಿ ಮೇಲೆ ಯುವ ಕಾಂಗ್ರೆಸ್ ಅಧ್ಯಕ್ಷನಿಂದ ಹಲ್ಲೆ

ಪ್ರತಿಭಟನೆಯಲ್ಲಿ ಜಿಲ್ಲಾ ಮುಖಂಡರಾದ ಜಗದೀಶ ಕೋಟಿ, ಸುಭಾಸ್ ಸೊಟ್ಟೆಪ್ಪನವರ, ದೀಪಾ ಛಲವಾದಿ, ಜ್ಯೋತಿ ಮಾಸುರು, ವೀಣಾ ಮತ್ತೂರು, ಪ್ರೇಮಾ ಅಂಗಡಿ, ವೈಶಾಲಿ ಮೇವುಂಡಿ, ಸರೋಜಾ ಎಸ್, ಗೌರಮ್ಮ ಭಜಂತ್ರಿ ಸೇರಿದಂತೆ ವಿವಿಧ ತಾಲೂಕಿನ ಸ್ವಚ್ಛವಾಹಿನಿ ನೌಕರರು ಪಾಲ್ಗೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X