ಬೈಕ್‌ಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲ್ಲೂಕಿನ ದಾಡಗಿ ಕ್ರಾಸ್ ಬಳಿ ಮಂಗಳವಾರ ನಡೆದಿದೆ.
ಔರಾದ್ ತಾಲ್ಲೂಕಿನ ಬೆಳಕುಣಿ (ಚೌ) ಗ್ರಾಮದ ಆಕಾಶ ದಿಲೀಪ (28) ಮೃತ ಯುವಕ ಎಂದು ಗುರುತಿಸಲಾಗಿದೆ. ಮೃತರಿಗೆ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರು ಇದ್ದಾರೆ.
ಹುಮನಾಬಾದ್ ಕಡೆಯಿಂದ ಭಾಲ್ಕಿಗೆ ತೆರಳುತ್ತಿದ್ದ ಬಸ್ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಮೇಲಿಂದ ಕೆಳಗೆ ಬಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಖಟಕಚಿಂಚೋಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.