ತನ್ನ ಮಗಳ ಮೇಲೆ ವಿಕೃತ ಕಾಮುಕ ತಂದೆಯೇ ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ. ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮಂಜುನಾಥ್ ಎಂದು ಹೆಸರಿಸಲಾಗಿದೆ. ಆತ ಕಾರು ಚಾಲಕನಾಗಿದ್ದಾನೆ. ಆರೋಪಿಗೆ ಮೂವರು ಮಕ್ಕಳಿದ್ದು, ಅವರಲ್ಲಿ ಇಬ್ಬರು ಹೆಣ್ಣು ಮಕ್ಕಳು. ಹಿರಿಯ ಮಗಳ ಮೇಲೆ ಕಾಮುಕ ಮಂಜುನಾಥ್ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಅತ್ಯಾಚಾರ ಎಸಗಿದ್ದ ಆರೋಪಿ, ಕೃತ್ಯದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದನು ಎಂದು ತಿಳಿದುಬಂದಿದೆ. ತಂದೆಯೇ ವಿಕೃತ ಕೃತ್ಯಗಳಿಂದ ಬೇಸತ್ತಿದ್ದ ಯುವತಿ, ಮನೆ ತೊರೆದಿದ್ದರು. ಪಿಜಿಯಲ್ಲಿ ವಾಸವಿದ್ದರು. ಇದೀಗ, ಹೊಸಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.