ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರದ ತುಂಗಾ ನದಿಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ, ಅಕ್ರಮ ಮರಳು ದಂಧೆಗೆ ಪೊಲೀಸರು ಮಂಗಳವಾರ ಟ್ರಂಚ್ ನಿರ್ಮಾಣ ಮಾಡುವ ಮೂಲಕ ಕಡಿವಾಣ ಹಾಕಿದ್ದಾರೆ.

ತುಂಗಾ ನದಿಯಿಂದ ರಾತ್ರಿ ಸಮಯದಲ್ಲಿ ಲಾರಿ, ಟಿಪ್ಪರ್, ಟ್ರ್ಯಾಕ್ಟರ್ ನಲ್ಲಿ ಅಕ್ರಮ ಮರಳು ದಂಧೆಯನ್ನು ಮಾಡುತ್ತಿದ್ದು, ಕೋಟ್ಯಾಂತರ ಮೌಲ್ಯದ ಮರಳನ್ನು ರಾತ್ರಿ ವೇಳೆ ಕಾಡಿನ ದಾರಿಯಲ್ಲಿ ಸಾಗಿಸಿ, ಸರ್ಕಾರಿ ಜಾಗದಲ್ಲಿ ಶೇಖರಿಸಿ ವಾಹನದ ಮೂಲಕ ಮರಳು ಸಂಗ್ರಹಿಸಿ ಸಾಗಣೆ ಮಾಡಲಾಗುತ್ತಿತ್ತು. ಅಕ್ರಮ ದಂಧೆ ಕುರಿತಂತೆ ಪೊಲೀಸ್ ಇಲಾಖೆಗೆ ಸಾರ್ವಜನಿಕರು ನಿರಂತರ ದೂರು ನೀಡಿದ ಹಿನ್ನೆಲೆಯಲ್ಲಿ, ಕೊಪ್ಪ ಡಿವೈಎಸ್ ಪಿ ಬಾಲಾಜಿ ಸಿಂಗ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ, ಲಕ್ಷಾಂತರ ಮೌಲ್ಯದ ಮರಳು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಬಾರ್ ಸಿಬ್ಬಂದಿ ಮೇಲೆ ಯುವ ಕಾಂಗ್ರೆಸ್ ಅಧ್ಯಕ್ಷನಿಂದ ಹಲ್ಲೆ
ಅಕ್ರಮ ಮರಳು ಸಾಗಾಟದ ಕುರಿತು ನಿರಂತರ ದೂರು ಬಂದ ಹಿನ್ನೆಲೆಯಲ್ಲಿ ಪೊಲೀಸರು ನದಿ ಬಳಿ ಹೋಗುವ ರಸ್ತೆಗೆಲ್ಲ, ಜೆಸಿಬಿ ಮೂಲಕ ಟ್ರಂಚ್ ನಿರ್ಮಿಸಿದ್ದಾರೆ. ಈ ಕುರಿತು ಪೊಲೀಸರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ವರದಿ ನೀಡಲಾಗಿದೆ.
