ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಸಹಕರಿಸಬೇಕೆಂದು ಬಳ್ಳಾರಿ ಪೊಲೀಸ್ ಠಾಣಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ನಗರದ ಬ್ರೂಸ್‌ಪೇಟೆ ಠಾಣೆ ವ್ಯಾಪ್ತಿಯ ದೊಡ್ಡ ಮಾರ್ಕೆಟ್ ಹತ್ತಿರ ನೀಲಕಂಠೇಶ್ವರ ದೇವಸ್ಥಾನದ ಮುಂದೆ ಸುಮಾರು 45 ವರ್ಷದ ಅನಾಮಧೇಯ ವ್ಯಕ್ತಿಯೊಬ್ಬರು ಯಾವುದೋ ಕಾಯಿಲೆಯಿಂದ ಇಂದು ಮೃತಪಟ್ಟಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ.
ಅಂದಾಜು 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ದುಂಡು ಮುಖ, ತಲೆಯ ಮೇಲೆ ಕಪ್ಪು ಕೂದಲು, ಮುಖದಲ್ಲಿ ಕಪ್ಪು ಗಡ್ಡ, ಮುಖದ ಎಡಭಾಗದ ಕನ್ನೆ ಮೇಲೆ ಮಚ್ಚೆ ಹಾಗೂ ಕಲೆ ಇರುತ್ತದೆ. ಬಾದಾಮಿ ಬಣ್ಣದ ಶರ್ಟ್, ಬಿಳಿ ಬಣ್ಣದ ಲುಂಗಿ ಧರಿಸಿರುತ್ತಾರೆ.
ಇದನ್ನೂ ಓದಿ: ಬಳ್ಳಾರಿ | ಏ.1ರಿಂದ ಬೃಹತ್ ಉದ್ಯೋಗ ಮೇಳ
ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ದೂ.ಸಂ. 08392272022, ಪಿಎಸ್‌ಐ ಮೊ.9480803081, ಪಿಐ ಮೊ.9480803045 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 258102 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
