ಹೈದರಾಬಾದ್‌ನ ಪಶ್ಚಿಮ ವಲಯ ಪೊಲೀಸರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಬೆಟ್ಟಿಂಗ್ ಆ್ಯಪ್‌ಗಳ ಪ್ರಚಾರ ಮಾಡಿದ ಮೂವರು ಮಹಿಳೆಯರು ಸೇರಿದಂತೆ 11 ಯೂಟ್ಯೂಬರ್‌ಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದ್ದಾರೆ.
1867ರ ಸಾರ್ವಜನಿಕ ಜೂಜಾಟ ಕಾಯ್ದೆಯನ್ನು ನೇರವಾಗಿ ಉಲ್ಲಂಘಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಹಾಗೆಯೇ ಈ ಅಪ್ಲಿಕೇಶನ್‌ಗಳು ವ್ಯಸನಕಾರಿಯಾಗಿದೆ, ಸಮಾಜಕ್ಕೆ ಹಾನಿಯನ್ನುಂಟು ಮಾಡುತ್ತದೆ, ಆರ್ಥಿಕ ಸಂಕಷ್ಟಕ್ಕೆ ಕಾರಣವಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಯೂಟ್ಯೂಬರ್ ಸಮೀರ್ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ಆಜ್ಞೆ
ಈ ಸಂಬಂಧ ಯೂಟ್ಯೂಬರ್‌ಗಳಾದ ಇಮ್ರಾನ್ ಖಾನ್, ವಿಷ್ಣು ಪ್ರಿಯಾ, ಹರ್ಷ ಸಾಯಿ, ಶ್ಯಾಮಲಾ, ಟೇಸ್ಟಿ ತೇಜಾ, ರಿತು ಚೌಧರಿ, ಬಂಡಾರು ಶೇಷಯಾನಿ ಸುಪ್ರೀತಾ, ಕಿರಣ್ ಗೌಡ್, ಅಜಯ್, ಸನ್ನಿ, ಸುಧೀರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಬೆಟ್ಟಿಂಗ್ ಆ್ಯಪ್‌ಗಳು ನಿರ್ದಿಷ್ಟವಾಗಿ ಯುವ ವಯಸ್ಕರನ್ನು ಗುರಿಯಾಗಿಸಿಕೊಂಡು ಜೂಜಾಟವನ್ನು ಸುಲಭವಾಗಿ ಪ್ರವೇಶಿಸಲು ಸಾಧ್ಯವಾಗುವಂತೆ ಮಾಡುತ್ತದೆ. ಸಾಮಾಜಿಕ ಮಾಧ್ಯಮಗಳ ಮೂಲಕ ಈ ಜೂಜಿನ ಪ್ರಚಾರ ಮಾಡುತ್ತದೆ ಎಂದು ಹೈದಾರಾಬಾದ್ ಡಿಸಿಪಿ ವಿಜಯ್ ಕುಮಾರ್ ಹೇಳಿದರು.
ಇದನ್ನು ಓದಿದ್ದೀರಾ? ವಿಜಯಪುರ | ಬೆಟ್ಟಿಂಗ್ ಆ್ಯಪ್‌ಗಳನ್ನು ನಿಷೇಧಿಸುವಂತೆ ಜಿಲ್ಲಾಧಿಕಾರಿಗೆ ಮನವಿ
“ಬೆಟ್ಟಿಂಗ್ ಆ್ಯಪ್‌ಗಳ ಬಗ್ಗೆ ನಾಗರಿಕರ ದೂರಿನ ಆಧಾರದ ಮೇಲೆ, ನಾವು ಪ್ರಕರಣ ದಾಖಲಿಸಿದ್ದೇವೆ. ನಾವು 11 ಯೂಟ್ಯೂಬರ್‌ಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದ್ದೇವೆ. ನಾವು ಅವರ ಸಾಮಾಜಿಕ ಮಾಧ್ಯಮ ಖಾತೆಗಳ ತನಿಖೆ ಮಾಡುತ್ತೇವೆ, ಯಾವ ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇವೆ. ಪುರಾವೆಗಳನ್ನು ಸಂಗ್ರಹಿಸಿ ನಂತರ ಕ್ರಮಕೈಗೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.
“ಬೆಟ್ಟಿಂಗ್ ಆ್ಯಪ್‌ಗಳ ಮೂಲಕ ಗಣನೀಯ ಹಣ ಗಳಿಸಬಹುದು ಎಂದು ಹೇಳಿಕೊಂಡು ಈ ವ್ಯಕ್ತಿಗಳು ನಿರುದ್ಯೋಗಿ ಯುವಕರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ. ಯಾರೂ ಅಕ್ರಮವಾಗಿ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಬಾರದು” ಎಂದು ಹೇಳಿದ್ದಾರೆ.
