ಸಿಟ್ಟಿಗೆದ್ದ ಕಾಡಾನೆಯೊಂದು ಎಲಿಫೆಂಟ್ ಟಾಸ್ಕ್ ಫೋರ್ಸ್ (ಇಟಿಎಫ್) ಸಿಬ್ಬಂದಿಯನ್ನೇ ಅಟ್ಟಾಡಿಸಿದ ಘಟನೆ ಹಾಸನ ಜಿಲ್ಲೆ ಬೇಲೂರಿನ ಅರೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಜುಲ್ಫಿ ಎಂಬುವರ ಕಾಫಿ ತೋಟದಲ್ಲಿ ಇಟಿಎಫ್ ಸಿಬ್ಬಂದಿ ಪ್ರಶಾಂತ್ ಹಾಗೂ ಸುನೀಲ್ ಕಾಡಾನೆ ಚಲನವಲನಗಳನ್ನು ಗಮನಿಸುತ್ತಿದ್ದರು. ಈ ವೇಳೆ, ವಿಕ್ರಾಂತ್ ಹೆಸರಿನ ಒಂಟಿಸಲಗ ಏಕಾಏಕಿ ದಾಳಿ ನಡೆಸಿದೆ. ಸಿಬ್ಬಂದಿ ಓಡಿ ಜೀವ ಉಳಿಸಿಕೊಂಡಿದ್ದಾರೆ.
ಆನೆ ಅಟ್ಟಿಸಿಕೊಂಡು ಬಂದಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ: ಹಾಸನ l ಆಕಸ್ಮಿಕ ಬೆಂಕಿ; ಹೊತ್ತಿ ಉರಿದ ಗುಜರಿ ಅಂಗಡಿ, ಮನೆ
