ಭೂಮಿ ಒತ್ತುವರಿ | ಸರ್ಕಾರದ ಷಡ್ಯಂತ್ರದ ವಿರುದ್ಧ ಕಾನೂನು ಹೋರಾಟ:‌ ಹೆಚ್‌ ಡಿ ಕುಮಾರಸ್ವಾಮಿ

Date:

Advertisements

ನಾನು ನನ್ನ ಜೀವನದಲ್ಲಿ ಯಾವುದೇ ಅಕ್ರಮಗಳನ್ನು ಎಸಗಿಲ್ಲ. ನಲವತ್ತು ವರ್ಷಗಳ ಹಿಂದೆ ಖರೀದಿ ಮಾಡಿರುವ ಭೂಮಿ ಅದಾಗಿದ್ದು, ಈ ಸರ್ಕಾರದ ಷಡ್ಯಂತ್ರದ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿಯೇ ಹೋರಾಟ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ನವದೆಹಲಿಗೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಂಗಳವಾರ ಅವರು ಮಾಧ್ಯಮಗಳ ಜತೆ ಮಾತನಾಡಿ, “ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಭೂಮಿ ಒತ್ತುವರಿ ಸೇರಿದಂತೆ ನಾನು ಯಾವ ಅಕ್ರಮವನ್ನೂ ಮಾಡಿಲ್ಲ, ಮಾಡುವುದೂ ಇಲ್ಲ. ನಾನು ಒಬ್ಬ ರೈತನಾಗಿ ಬದುಕಲು 40 ವರ್ಷಗಳ ಹಿಂದೆ ಖರೀದಿಸಿರುವ ಜಮೀನು ಅದು. ಒಬ್ಬ ಸಾಮಾನ್ಯ ಪ್ರಜೆಗೆ ಯಾವುದೇ ತೆರವು ಮಾಡಬೇಕು ಎಂದರೂ ಕಾನೂನು ಪ್ರಕಾರ ಹದಿನೈದು ದಿನಗಳ ಮೊದಲೇ ನೋಟಿಸ್ ನೀಡಬೇಕು. ಆದರೆ ನನಗೆ ಈವರೆಗೆ ಯಾವುದೇ ಮಾಹಿತಿ ಅಥವಾ ನೋಟಿಸ್ ನೀಡಿಲ್ಲ” ಎಂದು ದೂರಿದರು.

“ಈ ಸರ್ಕಾರ ನಡೆಸುತ್ತಿರುವ ದಬ್ಬಾಳಿಕೆ ಏನು ಎಂದು ಎಲ್ಲರಿಗೂ ಗೊತ್ತಿದೆ. ಈ ಸರ್ಕಾರ ಬೆಂಗಳೂರು ನಗರವನ್ನು ಲೂಟಿ ಮಾಡುತ್ತಿದೆ. ದೇಶದ ಇತಿಹಾಸದಲ್ಲೇ ಇದೆ ಮೊದಲ‌ ಬಾರಿಗೆ ಈ ರೀತಿ ಪ್ರಕರಣಕ್ಕೆ ಎಸ್‌ಐಟಿ ರಚನೆ ಮಾಡಿದ್ದಾರೆ. ಇಂತಹ ನಡವಳಿಕೆಗಳಿಗೆ ಒಂದಲ್ಲ ಒಂದು ದಿನ ಬೇರೆ ರೀತಿಯ ಉತ್ತರ ಬರುತ್ತದೆ” ಎಂದು ಕಿಡಿಕಾರಿದರು.

Advertisements

“ಕಾಂಗ್ರೆಸ್ ಸರ್ಕಾರಕ್ಕೆ ನಾನೇ ಟಾರ್ಗೆಟ್ ಆಗಿದ್ದೇನೆ. ನನ್ನ ಬಿಟ್ಟರೆ ಯಾರು ಇಲ್ಲ ಈ ಸರ್ಕಾರಕ್ಕೆ. ಸದ್ಯ ನಡೆಯುತ್ತಿರುವ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತಿದ್ದೇನೆ. 40 ವರ್ಷದ ಹಿಂದೆ ಖರೀದಿ ಮಾಡಿದ ಈ ಭೂಮಿಗೆ ನೂರು ಬಾರಿ ತನಿಖೆಯಾಗಿದೆ. 40 ವರ್ಷದಿಂದಲೂ ತನಿಖೆ ನಡೆಯುತ್ತಲೆ‌ ಇದೆ. ನನ್ನ ಪರಿಸ್ಥಿತಿಯೇ ಹೀಗಾದರೆ ಜನ ಸಾಮಾನ್ಯರ ಪರಿಸ್ಥಿತಿ ಹೇಗಿರಬಹುದು” ಎಂದು ಪ್ರಶ್ನಿಸಿದರು.

ಕಾನೂನು ಬದ್ದವಾಗಿ ನಾನು 40 ವರ್ಷಗಳ ಹಿಂದೆ ತೆಗೆದುಕೊಂಡಿರುವ ಜಮೀನು ಅದು

“ಇವತ್ತು ನಡೆಯುತ್ತಿರುವ ಸರ್ಕಾರದ ನಡವಳಿಕೆ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತೇನೆ. ಯಾರೂ ಗಾಬರಿಯಾಗಬೇಕಿಲ್ಲ. ಅದರೆ, ಮಾಧ್ಯಮಗಳು ಸತ್ಯಾಂಶಗಳನ್ನು ತಿಳಿದು ವರದಿ‌ ಮಾಡಬೇಕು” ಎಂದು ಮಾಧ್ಯಮಗಳಲ್ಲಿ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X