ವಿಜಯಪುರ | ಹೆಣ್ಣು ಒಂದಲ್ಲ ಒಂದು ಸಮಸ್ಯೆಗಳನ್ನು ಎದುರಿಸುತ್ತ ಬಂದಿದ್ದಾಳೆ: ಎಂ. ಎನ್. ಮಂಜುಳಾ

Date:

Advertisements

“ಸ್ತ್ರೀಯರ ಮೇಲೆ ದಿನೇ ದಿನೇ ಹಿಂಸೆ, ಕ್ರೌರ್ಯ, ದೌರ್ಜನ್ಯ, ಅಪರಾಧಗಳು ಹೆಚ್ಚಾಗುತ್ತಿವೆ. ಹೆಣ್ಣು ಹುಟ್ಟಿನಿಂದ ಮಸಣದವರೆಗೂ ಒಂದಲ್ಲ ಒಂದು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ” ಎಂದು ಮಹಿಳಾ ಸಂಘಟನೆ ರಾಜ್ಯ ಅಧ್ಯಕ್ಷೆ ಎಂ.ಎನ್. ಮಂಜುಳಾ ಹೇಳಿದರು.

ವಿಜಯಪುರ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಪ್ರಥಮ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ  ಮಾತನಾಡಿದರು.

“ಸಾಂಸ್ಕೃತಿಕ ಅಧಃಪತನದಿಂದ ಸಾಮಾಜಿಕ ಮೌಲ್ಯಗಳು ಕುಸಿಯುತ್ತಿವೆ. ಇವೆಲ್ಲದರ ಪರಿಣಾಮವಾಗಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಅಪರಾಧಗಳು ಹೆಚ್ಚುತ್ತಿವೆ. ಇಂದು ಎಲ್ಲಾ ಕ್ಷೇತ್ರದ ಹೆಣ್ಣು ಮಕ್ಕಳು ಸಂಘಟಿತರಾಗಬೇಕು, ಶೋಷಣೆ ರಹಿತ ಸಮಾಜ ಕಟ್ಟುವ ಗುರಿಯೊಂದಿಗೆ ಪುರುಷರ ಸಮಸಮವಾಗಿ ಮುನ್ನಡೆಯಬೇಕು. ಸಮಾಜದ ಎಲ್ಲಾ ಮಹಿಳೆಯರು ಪ್ರಜಾತಾಂತ್ರಿಕ ಮೌಲ್ಯಗಳನ್ನು ರೂಢಿಸಿಕೊಳ್ಳುತ್ತಾ ಮಹಿಳೆ ಅಬಲೆಯಲ್ಲ ಸಬಲೆ” ಎಂದು ಹೇಳಿದರು.

Advertisements

ಎಸ್ಯುಸಿಐ (ಸಿ) ಪಕ್ಷದ ರಾಜ್ಯ ಸೆಕ್ರೆಟರಿಯೆಟ್ ಸದಸ್ಯರಾದ ಡಾ.ಸುನೀತ್ ಕುಮಾರ್ ಟಿ ಎಸ್  ಮಾತನಾಡಿ, “ನಮ್ಮ ಸಮಾಜದಲ್ಲಿ ಪುರುಷ ಪ್ರಧಾನ ಮನೋವಭಾವ ಜೀವಂತವಾಗಿರುವುದರಿಂದ ಹೆಜ್ಜೆ ಹೆಜ್ಜೆಗೂ ಮಹಿಳೆಯರು ದ್ವಿತೀಯ ದರ್ಜೆಯ ಪ್ರಜೆಯಾಗಿ ಪರಿಗಣಿಸ್ಪಲಡುತ್ತಿದ್ದಾರೆ. ಈ ಪುರುಷ ಪ್ರಧಾನ ಮನೋಭಾವ ಜೀವಂತ ಇರುವವರೆಗೂ ಹೆಣ್ಣು ಮಕ್ಕಳಿಗೆ ಸಮಾನತೆ ಎನ್ನುವುದು ಕನಸಿನ ಮಾತು. ಹಾಗಾಗಿ ಇದನ್ನು ತೊಡೆದು ಹಾಕುವಲ್ಲಿ ವೈಚಾರಿಕ, ಸಾಂಸ್ಕೃತಿಕ ಹೋರಾಟ ಬೆಳೆಯಬೇಕು ಹಾಗೂ ಸಮಾನತೆಯ ಸಮಾಜ ಸ್ಥಾಪಿಸಲು ಎಐಎಮ್ಎಸ್ಎಸ್ ಸಜ್ಜಾಗಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಬಾಳಮ್ಮ ಕೊಂಡಗೂಳಿ ವಹಿಸಿದ್ದರು. ಇದೇ ಸಂದರ್ಭದಲ್ಲಿ ನೂತನ ಜಿಲ್ಲಾ ಸಮಿತಿಯನ್ನು ಸಮ್ಮೇಳನದಲ್ಲಿ ಚುನಾಯಿಸಲಾಯಿತು. ಜಿಲ್ಲಾಧ್ಯಕ್ಷರಾಗಿ ಗೀತಾ ಹೆಚ್, ಕಾರ್ಯದಶಿಯಾಗಿ ಶಿವಬಾಳಮ್ಮ ಕೊಂಡಗೂಳಿ, ಜಂಟಿ ಕಾರ್ಯದರ್ಶಿಯಾಗಿ ಶಿವರಂಜನಿ ಎಸ್.ಬಿ ಹಾಗು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಜಬೀನಾ.ಮಹದೇವಿ, ಗಂಗಾ ಜಾಲವಾದ, ಸ್ಥಿತಾ, ಗೀತಾ ಹಿರೇಮಠ, ಸಾನಿಯಾ, ವಿದ್ಯಾ, ಯಶೋಧ, ಚಂದ್ರವ್ವ, ಕಾವೇರಿ ಹಾಗೂ ಅಕ್ಷತಾ ಹಟ್ಟಿ, ಸವಿತಾ ತೆಗ್ಗಿ,ಶಂಕರಮ್ಮ ದೇಸಾಯಿ, ಸುಷ್ಮಾ ಹಾಗೂ 20 ಕೌನ್ಸಿಲ್ ಸಮಿತಿ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

ಸಮ್ಮೇಳನದಲ್ಲಿ ಉದ್ಯೋಗಸ್ಥ ಮಹಿಳೆಯರು ಗೃಹಿಣಿಯರು, ಕಾರ್ಮಿಕ ಮಹಿಳೆಯರು ವಿವಿಧ ಕ್ಷೇತ್ರದಲ್ಲಿ ದುಡಿಯುವ ಮಹಿಳೆಯರು ಭಾಗವಹಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X