ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಝೋಮಿ ಮತ್ತು ಹ್ಮಾರ್ ಜನಾಂಗದ ಜನರ ನಡುವೆ ಚುರಚಂದ್‌ಪುರ ಜಿಲ್ಲೆಯಲ್ಲಿ ಘರ್ಷಣೆ ನಡೆಸಿದೆ. ಘರ್ಷಣೆ ವೇಳೆ ಕಲ್ಲು ತೂರಾಟ ನಡೆದಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ ರಾತ್ರಿ ಘರ್ಷಣೆ ನಡೆದಿದೆ ಎಂದು ವರದಿಯಾಗಿದೆ. ಉಭಯ ಜನಾಂಗದ ಪ್ರಮುಖ ಸಮಿತಿಯ ಜೊತೆ ಮಾತುಕತೆ ನಡೆಸಿ ಶಾಂತಿ ಒಪ್ಪಂದ ನಡೆದ ಕೆಲವೇ ಗಂಟೆಗಳ ಬಳಿಕ ಈ ಹಿಂಸಾಚಾರ ನಡೆದಿದೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಅಧಿವೇಶನ ಆರಂಭ; ರಾಜ್ಯಸಭೆಯಲ್ಲಿಂದು ಮಣಿಪುರ ಬಜೆಟ್ ಚರ್ಚೆ
ಪಟ್ಟದಲ್ಲಿದ್ದ ಝೋಮಿ ಪಡೆಯ ಧ್ವಜವನ್ನು ಕೆಲವು ಯುವಕರ ಗುಂಪು ಪ್ರಯತ್ನಿಸಿದಾಗ ಈ ಘರ್ಷಣೆ ನಡೆದಿದೆ. ಘರ್ಷಣೆ ಹೆಚ್ಚಾಗುತ್ತಿದ್ದಂತೆ ಕಲ್ಲು ತೂರಾಟ ನಡೆದಿದೆ. ಹಲವು ಮಂದಿ ಗಾಯಗೊಂಡಿದ್ದಾರೆ. ಈ ಬೆನ್ನಲ್ಲೇ ಭದ್ರತಾ ಸಿಬ್ಬಂದಿಗಳು ಅಶ್ರುವಾಯು ಪ್ರಯೋಗಿಸಿದ್ದಾರೆ ಮತ್ತು ಗುಂಪನ್ನು ಚದುರಿಸಲು ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸುಮಾರು ಎರಡು ವರ್ಷಗಳ ಅವಧಿಯಿಂದ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದ್ದು, 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಬಳಿಕ ಕೇಂದ್ರ ಸರ್ಕಾರವು ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೊಳಿಸಲಾಗಿದೆ. ಇದಾದ ಬಳಿಕ ಪೊಲೀಸ್ ಶಸ್ತ್ರಾಗಾರದಿಂದಲೇ ಕದ್ದಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲಾ ಶಸ್ತ್ರಾಸ್ತ್ರಗಳು ವಾಪಾಸ್ ಲಭಿಸಿಲ್ಲ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಮಣಿಪುರ ಹಿಂಸಾಚಾರ | ಪ್ರತ್ಯೇಕ ರಾಜ್ಯಕ್ಕೆ ಪಟ್ಟು ಹಿಡಿದ ಕುಕಿ ಸಮುದಾಯ
ಹಾಗೆಯೇ ಶಾಂತಿ ಒಪ್ಪಂದ ಮಾತುಕತೆಗಳನ್ನೂ ಕೂಡಾ ನಡೆಸಲಾಗುತ್ತಿದೆ. ಆದರೆ ಇನ್ನೂ ಕೂಡಾ ಹಿಂಸಾಚಾರವನ್ನು ಸಂಪೂರ್ಣವಾಗಿ ಹತೋಟಿಗೆ ತರಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ನಿನ್ನೆ ನಡೆದ ಹಿಂಸಾಚಾರದಲ್ಲಿ ಕೆಲವರು ಗುಂಡು ಕೂಡಾ ಹಾರಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ ಯಾರು ಗುಂಡು ಹಾರಿಸಿದ್ದಾರೆ ಎಂಬುದು ಖಚಿತವಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
