ಬಳ್ಳಾರಿ | ಬಿಸಿಗಾಳಿ: ಅಗತ್ಯ ಮುನ್ನೆಚ್ಚರಿಕೆಗಳೇನು?

Date:

Advertisements

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ವಯ ಬಳ್ಳಾರಿ ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ಬಿಸಿ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿರುವ ಹಿನ್ನೆಲೆ ಜಿಲ್ಲೆಯ ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

ಏನು ಮಾಡಬೇಕು:
ಸಾರ್ವಜನಿಕರು ರೇಡಿಯೋ, ಟಿವಿ, ದಿನ ಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಕುರಿತ ಮುನ್ಸೂಚನೆಗಳನ್ನು ಪಡೆದುಕೊಳ್ಳಬೇಕು. ಬಾಯಾರಿಕೆಯಿಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯಬೇಕು. ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾದ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು.

ಹೊರಗೆ ಹೋಗಿ ಕೆಲಸ ಮಾಡುವವರು ಟೋಪಿ ಅಥವಾ ಛತ್ರಿಯನ್ನು ಬಳಸಿ ಮತ್ತು ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಸಹ ಬಳಸಿ. ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ಅದು ದೇಹವನ್ನು ಪುನಃ ತಂಪಾಗಿಡಲು ಸಹಾಯ ಮಾಡುತ್ತದೆ. ಪ್ರಾಣಿ-ಪಕ್ಷಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸಿ. ಆದಷ್ಟು ಫ್ಯಾನ್‌ಗಳನ್ನು ಬಳಸಿ.

Advertisements

ಒದ್ದೆಯಾದ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಿ. ಕೆಲಸವನ್ನು ಆದಷ್ಟು ತಂಪಾದ ಸಮಯದಲ್ಲಿ ಮಾಡುವುದು ಉತ್ತಮ ಹಾಗೂ ಕೆಲಸದ ಸ್ಥಳದ ಬಳಿ ತಂಪಾದ ಕುಡಿಯುವ ನೀರನ್ನು ಇರಿಸಿಕೊಳ್ಳಬೇಕು.
ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಹೆಚ್ಚಿನ ಗಮನ ನೀಡಬೇಕು. ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು, ಅದರಲ್ಲೂ ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗರೂಕತೆ ವಹಿಸಬೇಕು.

ಇದನ್ನೂ ಓದಿ: ಬಳ್ಳಾರಿ | ಶಾಸಕರ ಕಚೇರಿಗೆ ಬಾಂಬ್ ಬೆದರಿಕೆ; ಯುವಕನ ಬಂಧನ

ಏನು ಮಾಡಬಾರದು:
ಮಕ್ಕಳು ಅಥವಾ ಸಾಕುಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಹತ್ತಿರ ಬಿಡಬಾರದು. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನ ತಾಪಮಾನವು ಅವರಿಗೆ ಮತ್ತು ಅವುಗಳಿಗೆ ಅಪಾಯಕಾರಿಯಾಗಬಹುದು. ಕಪ್ಪುಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಿ. ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ. ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ.

ಬಿಸಿಲಿನ ಸಮಯದಲ್ಲಿ ಅಡುಗೆ ಮಾಡುವುದನ್ನು ತಪ್ಪಿಸಿ. ಅಡುಗೆ ಪ್ರದೇಶವನ್ನು ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆಯಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯಗಳನ್ನು ಸೇವಿಸಬೇಡಿ. ಹಾನಿಕಾರಕವಾದ ಆಹಾರ ಮತ್ತು ಹಳಸಿದ ಆಹಾರವನ್ನು ಸೇವಿಸಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಬೇಕು.

ತುರ್ತು ಸಹಾಯವಾಣಿ

ಸಾರ್ವಜನಿಕರಿಗೆ ಯಾವುದೇ ತೊಂದರೆಗಳು ಕಂಡುಬಂದಲ್ಲಿ ತುರ್ತು ಸಹಾಯಕ್ಕಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ದೂ.08392-277100 ಮತ್ತು ಮೊ.8277888866 ಗೆ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X