ವಿಜಯಪುರ | ಎರೆಮಣ್ಣು ಅಕ್ರಮ ಸಾಗಾಟ ಪ್ರಕರಣ; ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಪ್ರತಿಭಟನೆ

Date:

Advertisements

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕೃಷ್ಣಾನದಿ ತೀರದಲ್ಲಿನ ಫಲವತ್ತಾದ ಎರೆ ಮಣ್ಣನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಪ್ರಕರಣ ಸಂಬಂಧ ಅನೇಕ ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಯುವಜನ ಸೇನೆ ಸಂಘ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನಾ ಧರಣಿ ನಡೆಸಿದವು.

ಯುವಜನ ಸೇನೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಮಾತನಾಡಿ, “ಕೃಷ್ಣಾ ನದಿ ದಡದಲ್ಲಿರುವ ಗ್ರಾಮದಲ್ಲಿ ಕೆಲವರು ಹಗಲು ರಾತ್ರಿ ಎನ್ನದೆ ಜೆಸಿಬಿ ಹಿಟಾಚಿಯಂತಹ ಬೃಹತ್ ಯಂತ್ರಗಳಿಂದ 50ಕ್ಕೂ ಹೆಚ್ಚು ಟಿಪ್ಪರ್‌ಗಳನ್ನು ಮತ್ತು ಅಷ್ಟೇ ಸಂಖ್ಯೆಯಲ್ಲಿ ಟ್ಯಾಕ್ಟರ್‌ಗಳಿಂದ ಫಲವತ್ತಾದ ಮಣ್ಣು ಮತ್ತು ಮೆಕ್ಕಲು ಮಣನ್ನು ಆಕ್ರಮವಾಗಿ ಒಂದು ಟ್ರಿಪ್ಪಿಗೆ ತಲಾ 500ರಂತೆ ಮಾರಾಟ ಮಾಡುವುದನ್ನು ಖಂಡಿಸಿ ಸಂಬಂಧಿಸಿದ ಇಲಾಖೆಗಳಿಗೆ ದೂರು ನೀಡಲಾಗಿದೆ. ಅಕ್ರಮವನ್ನು ತಡೆಗಟ್ಟಬೇಕಾದ ಇಲಾಖೆಯ ಅಧಿಕಾರಿಗಳು ಮೌನಕ್ಕೆ ಶರಣಾಗಿರುವುದು ಸಂಶಯಕ್ಕೆ ಎಡೆ ಮಾಡಿ ಕೊಡುತ್ತಿದೆ. ನದಿ ಪಾತ್ರದ ಜನರ ಬದುಕಿನೊಂದಿಗೆ ಆಟವಾಡುತ್ತಿರುವ ದಂಧಾಕೋರರಿಗೆ ಸ್ಥಳೀಯ ಆಡಳಿತದ ಭಯವಿಲ್ಲ. ಅಕ್ರಮ ಮಣ್ಣು ಸಾಗಾಟದ ಹಿಂದೆ ರಾಜಕೀಯ ವ್ಯಕ್ತಿಗಳ ಕಾಣದ ಕೈಯಿದೆ ಎಂದು ಜನರು ಮಾತನಾಡುತ್ತಿದ್ದಾರೆಂದು” ಆರೋಪಿಸಿದರು.

ಕರವೇ ವಿಜಯನಗರ ತಾಲೂಕು ಅಧ್ಯಕ್ಷ ಸಂಗಯ್ಯ ಸಾರಂಗಮಠ ಮಾತನಾಡಿ, “ಕೃಷ್ಣಾ ತೀರದಲ್ಲಿ ಅಕ್ರಮವಾಗಿ ಯಂತ್ರೋಪಕರಣಗಳನ್ನು ಬಳಸಿಕೊಂಡು ಟಿಪ್ಪರಗಳ ಮುಖಾಂತರ ದಿನದ ಲೆಕ್ಕದಲ್ಲಿ ಸರ್ಕಾರದ ಲಕ್ಷಾಂತರ ಹಣ ಲೂಟಿ ಮಾಡುತ್ತಿದ್ದರೂ ಅಧಿಕಾರಿಗಳು ಮೌನವಹಿಸಿರುವುದು ಯಾಕೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಇದನ್ನೂ ಓದಿ: ವಿಜಯಪುರ | ಆಲಮಟ್ಟಿ ಚಂದ್ರಮ್ಮದೇವಿ ಜಾತ್ರೆ ಆರಂಭ

ಈ ಪ್ರಕರಣವನ್ನು ಸರ್ಕಾರ ಹಾಗೂ ಸ್ಥಳೀಯ ಆಡಳಿತ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಸಹ ಯಾವುದೇ ಕ್ರಮವಾಗಿಲ್ಲ. ಅವೈಜ್ಞಾನಿಕವಾಗಿ ಎಲ್ಲೆಂದರಲ್ಲಿ ಮಣ್ಣು ಅಗೆಯುತ್ತಿದ್ದಾರೆ. ಇದರಿಂದ ನದಿಯ ಹರಿವು ಬದಲಾಗುವ ಸಂಭವವಿದೆ. ಅಣೆಕಟ್ಟುಗಳಲ್ಲಿ ಸಂಗ್ರಹಿಸುವ ನೀರಿನ ಮಟ್ಟ ಹೆಚ್ಚಾಗಬಹುದು ಇದರಿಂದ ಅಣೆಕಟ್ಟಿಗೆ ಅಪಾಯವಾಗುತ್ತದೆ. ಕ್ರಮ ಆಗುವವರೆಗೂ ಹೋರಾಟ ಮುಂದುವರೆಯಲಿದೆ” ಎಂದರು.

ಈ ವೇಳೆ ಅಜಯ ಕುಲಕರ್ಣಿ, ರಾಜು ಮಸಬಿನಾಳ, ಕಾಶಿವರ್ ಗಂಗೂರ, ಶಿವು ವನಕಿಹಾಳ, ಶಿವು ಕನ್ನೊಳ್ಳಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X