ವಿಶ್ವ ಜಲ ದಿನ |ಅರಿವು ಕೇಂದ್ರಗಳಲ್ಲಿ ನೀರಿನ ಬಗ್ಗೆ ಜಾಗೃತಿ ಕಾರ್ಯಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

Date:

Advertisements

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ರಾಜ್ಯದ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಮಾರ್ಚ್‌ ತಿಂಗಳ ʼಓದುವ ಬೆಳಕುʼ ಕಾರ್ಯಕ್ರಮದಡಿ ಮಾ.21ರಂದು ‘ವಿಶ್ವ ಜಲ ದಿನ’ದ ಅಂಗವಾಗಿ ನೀರಿನ ಮಹತ್ವ, ಮಿತ ಬಳಕೆ ಮತ್ತು ಸಂರಕ್ಷಣೆ, ಮಳೆ ನೀರು ಕೊಯ್ದು ಹಾಗೂ ಸಂಗ್ರಹಣೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆಯಾಗುತ್ತಿರುವ ವಿಧಾನ, ನೀರಿನ ಮೂಲಗಳು ಹಾಗೂ ನೀರಿನ ಕೊಳವೆ ಮಾರ್ಗಗಳ ಸುರಕ್ಷತೆ, ಕೈಪಂಪ್ ಕೊಳವೆ ಬಾವಿ ಸುತ್ತ ಹಾಗೂ ಕಿರುನೀರು ಸರಬರಾಜು ಯೋಜನೆಗಳ ತೊಂಬೆಗಳ ಸುತ್ತ ನೈರ್ಮಲ್ಯ ಕಾಪಾಡುವಿಕೆ, ನೀರಿನ ಮೂಲದ ಪುನಶ್ವೇತನ ಮತ್ತು ಮಳೆ ನೀರು ಸಂಗ್ರಹಣೆ ಕುರಿತಂತೆ ಮಕ್ಕಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಕುಡಿಯುವ ನೀರಿನ ಪೂರೈಕೆ ಕುರಿತು ಗ್ರಾಮಗಳಲ್ಲಿ ಮಕ್ಕಳಿಗೆ ಕ್ಷೇತ್ರ ಭೇಟಿ ವ್ಯವಸ್ಥೆ ಮಾಡಿಸುವಂತೆ ಸಚಿವರು ಸೂಚಿಸಿದ್ದಾರೆ.

ಮಾರ್ಚ್‌ 21ರಂದು ‘ವಿಶ್ವ ಅರಣ್ಯ ದಿನʼ ನಡೆಯಲಿದ್ದು, ಸಾಮಾಜಿಕ ಅರಣ್ಯ ಇಲಾಖೆಯ ಸಹಯೋಗದಿಂದ ಶಾಲಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಆಯೋಜಿಸುವುದು ಹಾಗೂ ಪ್ರತಿ ಮಕ್ಕಳೂ ಒಂದೊಂದು ಸಸಿ ನೆಟ್ಟು ಆ ಸಸಿಗಳನ್ನು ದತ್ತು ತೆಗೆದುಕೊಂಡು, ನೀರುಣಿಸಿ ಕಾಪಾಡುವಂತೆ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಬೇಕೆಂದು ಸಚಿವರು ನಿರ್ದೇಶನ ನೀಡಿದ್ದಾರೆ.

Advertisements

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X