ವಿಜಯಪುರ | ಮಾ.21ರಿಂದ 27ರವರೆಗೆ ‘ರಾಷ್ಟ್ರೀಯ ಐಕ್ಯತಾ ಶಿಬಿರ-2025ʼ

Date:

Advertisements

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನ್ನಡ ಸಭಾಭವನದಲ್ಲಿ ಇದೇ ಮಾರ್ಚ್‌ 21ರಿಂದ 27ರವರೆಗೆ ‘ರಾಷ್ಟ್ರೀಯ ಐಕ್ಯತಾ ಶಿಬಿರ-2025ʼ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕುರಿತು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಕೋಶದ ಸಂಯೋಜನಾಧಿಕಾರಿ ಡಾ. ಅಶೋಕಕುಮಾರ ಸುರಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, “ರಾಜ್ಯ ಸರ್ಕಾರ ಎನ್ಎಸ್ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್‌ಎಸ್‌ಎಸ್ ಪ್ರಾದೇಶಿಕ ನಿರ್ದೇಶನಾಲಯ ಭಾರತ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಲಿದೆ” ಎಂದು ತಿಳಿಸಿದ್ದಾರೆ.

“ಮಾರ್ಚ್‌ 21ರಂದು ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮವನ್ನು ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ ವಹಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಕರ್ನಾಟಕ ರಾಜ್ಯ ಎನ್‌ಎಸ್‌ಎಸ್ ಸಲಹಾ ಸಮಿತಿ ಸದಸ್ಯ ಜಾವಿದ್ ಜಮಾದಾರ ಹಾಗೂ ವಿವಿ ಕುಲಸಚಿವ ಶಂಕರಗೌಡ ಸೋಮನಾಳ ಭಾಗವಹಿಸಲಿದ್ದು, ಬೆಂಗಳೂರಿನ ಎನ್‌ಎಸ್‌ಎಸ್ ಪ್ರಾದೇಶಿಕ ನಿರ್ದೇಶಕ ಡಿ. ಕಾರ್ತಿಗ್ವಾನ, ಕರ್ನಾಟಕ ರಾಜ್ಯ ಎನ್‌ಎಸ್‌ಎಸ್‌ ಅಧಿಕಾರಿ ಡಾ. ಪ್ರತಾಪ ಲಿಂಗಯ್ಯ, ಮಹಿಳಾ ವಿವಿ ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್ ಎಮ್ ಚಂದ್ರಶೇಖರ ಉಪಸ್ಥಿತರಿರಲಿದ್ದಾರೆ. ಈ ಏಳು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ವಿವಿಧ ವಿಷಯಗಳ ಕುರಿತು ವಿಶೇಷ ಉಪನ್ಯಾಸಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮಾರುಕಟ್ಟೆಗೆ ಲಗ್ಗೆಯಿಟ್ಟ ಮಹಾರಾಷ್ಟ್ರದ ಕಲ್ಲಂಗಡಿ; ಸ್ಥಳೀಯ ರೈತರ ಆದಾಯಕ್ಕೆ ಪೆಟ್ಟು

“ಮಾರ್ಚ್‌ 27ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ವಿಜಯಪುರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್ ಸಮಾರೋಪ ಭಾಷಣ ಮಾಡಲಿದ್ದು, ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಎನ್ಎಸ್ಎಸ್ ಪ್ರಾದೇಶಿಕ ನಿರ್ದೇಶಕ ಬೆಂಗಳೂರಿನ ಎನ್‌ಎಸ್‌ಎಸ್ ಪ್ರಾದೇಶಿಕ ನಿರ್ದೇಶಕ ಡಿ.ಕಾರ್ತಿಗ್ವಾನ್, ಕರ್ನಾಟಕ ರಾಜ್ಯ ಸರ್ಕಾರ ಎನ್ಎಸ್ಎಸ್ ಅಧಿಕಾರಿ ಡಾ. ಪ್ರತಾಪ್ ಲಿಂಗಯ್ಯ, ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್ ಎಮ್ ಚಂದ್ರಶೇಖರ ಉಪಸ್ಥಿತರಿರಲಿದ್ದಾರೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X