- ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಗೆ ದೂರು ನೀಡಿದ ಆಂಡ್ರ್ಯೂ ಅಕ್ಕ
- ಆಸ್ಪತ್ರೆಯಲ್ಲಿ ಆಡಳಿತ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಆಂಡ್ರ್ಯೂ ಪತ್ನಿ
42ರ ಹರೆಯದ ವ್ಯಕ್ತಿಯೊಬ್ಬ ತನ್ನ ಪತ್ನಿ ಆಕೆಯ ಸಹೋದ್ಯೋಗಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕೆ ಮನನೊಂದು ಸುಬ್ರಹ್ಮಣ್ಯನಗರದಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಘಟನೆ ಜೂನ್ 16ರಂದು ನಡೆದಿದೆ. ಮೃತ ವ್ಯಕ್ತಿಯ ಹೆಸರು ಆಂಡ್ರ್ಯೂ (ಹೆಸರು ಬದಲಾಯಿಸಲಾಗಿದೆ). ಇವರು ಖಾಸಗಿ ಬ್ಯಾಂಕ್‌ನಲ್ಲಿ ಸಹಾಯಕ ಉಪಾಧ್ಯಕ್ಷನಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ದಂಪತಿಗೆ ಇಬ್ಬರು ಮಕ್ಕಳಿದ್ದರು. ಈ ಕುಟುಂಬ ಮೊದಲಿಗೆ ವಿದ್ಯಾರಣ್ಯಪುರದಲ್ಲಿ ವಾಸಿಸುತ್ತಿತ್ತು. ಆಂಡ್ರ್ಯೂ ಅವರ ಪತ್ನಿ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಆಡಳಿತ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಆಂಡ್ರ್ಯೂ ಪತ್ನಿ ತಾನು ಕಾರ್ಯನಿರ್ವಹಿಸುವ ಆಸ್ಪತ್ರೆಗೆ ಹತ್ತಿರವಾಗಲು ಸುಬ್ರಹ್ಮಣ್ಯನಗರದಲ್ಲಿ ತನ್ನ ವೈದ್ಯ ಸಹೋದ್ಯೋಗಿಯೊಬ್ಬರ ಸಹಾಯದಿಂದ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದರು.
ಬಳಿಕ ಮಹಿಳೆಯು ತನ್ನ ಸಹೋದ್ಯೋಗಿ ವೈದ್ಯರೊಂದಿಗೆ ನಿಕಟ ಸಂಬಂಧವನ್ನು ಬೆಳೆಸಿಕೊಂಡರು. ದಿನಕಳೆದಂತೆ ಕೆಲಸಕ್ಕೆ ಕರೆದುಕೊಂಡು ಹೋಗುವುದು ಮನೆಗೆ ಕರೆದುಕೊಂಡು ಬಂದು ಬಿಡುವ ಕೆಲಸವನ್ನು ವೈದ್ಯರೇ ಮಾಡಲು ಪ್ರಾರಂಭಿಸಿದರು. ಆಂಡ್ರ್ಯೂ ಅವರ ಕುಟುಂಬದ ವಿಷಯಗಳಲ್ಲಿ ವೈದ್ಯರು ಸಹ ತಲೆಹಾಕತೊಡಗಿದರು.
ಈ ವಿಚಾರ ಆಂಡ್ರ್ಯೂ ಅವರನ್ನು ಬಹಳ ವಿಚಲಿತಗೊಳಿಸಿತು. ಈ ಬಗ್ಗೆ ಆಂಡ್ರ್ಯೂ ಅವರು ತಮ್ಮ ಸಹೋದರಿಯೊಂದಿಗೆ ಹೇಳಿಕೊಂಡಿದ್ದರು ಹಾಗೂ ತಾವು ಇದರಿಂದ ತೀವ್ರ ಮಾನಸಿಕ ನೋವು ಅನುಭವಿಸುತ್ತಿದ್ದೇನೆ ಎಂದಿದ್ದರು.
ಈ ಬಗ್ಗೆ ಆಂಡ್ರ್ಯೂ ಅಕ್ಕ ಸುಬ್ರಹ್ಮಣ್ಯನಗರ ಪೊಲೀಸರಿಗೆ ದೂರು ನೀಡಿದ್ದು, ದೂರಿನ ಪ್ರಕಾರ ಶುಕ್ರವಾರ ಬೆಳಗ್ಗೆ 8.30ಕ್ಕೆ ಆಂಡ್ರ್ಯೂ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪತ್ನಿಗೆ ಕರೆ ಮಾಡಿದ್ದರು. ಅವರ ತಮ್ಮನ ಸಾವಿಗೆ ವೈದ್ಯರೇ ಕಾರಣ ಎಂದು ದೂಷಿಸಿದರು.
ಈ ಸುದ್ದಿ ಓದಿದ್ದೀರಾ? ತನ್ನ ಶಾಲೆಗಳನ್ನು ಶಿಕ್ಷಣ ಇಲಾಖೆಯ ಸ್ವಾಧೀನಕ್ಕೆ ತೆಗೆದುಕೊಳ್ಳುವಂತೆ ಮನವಿ ಮಾಡಿದ ಬಿಬಿಎಂಪಿ
ಆಂಡ್ರ್ಯೂ ಅಕ್ಕ ನೀಡಿದ ದೂರಿನ ಆಧಾರದ ಮೇಲೆ ಸುಬ್ರಹ್ಮಣ್ಯನಗರ ಪೊಲೀಸರು ವೈದ್ಯರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 306ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣವನ್ನು ದಾಖಲಿಸಲಾಗಿದೆ.