ದೇವರ ಚಿನ್ನದ ಕಿರೀಟ ಸೇರಿ ಸುಮಾರು 30 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಲ್ಲೂರ ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದಿದೆ.
ಕಿಡಿಗೇಡಿಗಳು ಇಂದು (ಮಾ.20) ಬೆಳಗಿನ ಜಾವ ಸುಮಾರು 2 ಗಂಟೆಗೆ ದೇವಸ್ಥಾನಕ್ಕೆ ನುಗ್ಗಿ ಕಳುವು ಮಾಡಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ವಾಟ್ಸಪ್‌ನಲ್ಲಿ ವಿಡಿಯೋವೊಂದಕ್ಕೆ ನಗುವ ಚಿಹ್ನೆ ಹಾಕಿದ್ದಕ್ಕೆಗುಂಪು ಹಲ್ಲೆ ; ಜೀವ ಬೆದರಿಕೆ ಆರೋಪ
ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಹರೀಶ ಹಾಗೂ ಸಿಪಿಐ ಶಶಿಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ವರ್ಷಗಳಿಂದ ಈ ಹಿಂದೆ ಪೊಲೀಸರು ದೇವಸ್ಥಾನಕ್ಕೆ ಸಿಸಿ ಕ್ಯಾಮೆರಾ ಅಳವಡಿಸಲು ಸೂಚನೆ ನೀಡಿದ್ದರು ಎಂದು ತಿಳಿದು ಬಂದಿದೆ.