ದಾವಣಗೆರೆ | ಸರ್ಕಾರಿ ಗೋಮಾಳ, ಕೆರೆ ಒತ್ತುವರಿ;ಸಾವಿರಾರು ಅಡಿಕೆ ಮರಗಳ ತೆರವು.

Date:

Advertisements

ಕಬ್ಬೂರು ಗ್ರಾಮಸ್ಥರ ಹಲವು ತಿಂಗಳುಗಳ ಹೋರಾಟದ ಫಲವಾಗಿ ಒತ್ತುವರಿಯಾಗಿದ್ದ ಸರ್ಕಾರಿ ಗೋಮಾಳ ಜಮೀನು ಮತ್ತು ಕೆರೆಯನ್ನು ತೆರವುಗೊಳಿಸುವ ಕಾರ್ಯಕ್ಕೆ ಬುಧವಾರ ಚಾಲನೆ ನೀಡಲಾಗಿದೆ. ಭೂಮಾಪಕರು ಅಳತೆ ಮಾಡಿ ಒತ್ತುವರಿ ಮಾಡಿದ್ದ ಜಾಗದಲ್ಲಿ ಬೆಳೆದಿದ್ದ ಫಲಕ್ಕೆ ಬಂದ ಅಡಿಕೆ ಮರಗಳನ್ನು ತೆರವುಗೊಳಿಸಿದ್ದು ದಾವಣಗೆರೆ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ಕಾರ್ಯಾಚರಣೆ ನೆಡೆದಿದೆ.

‘ಸರ್ಕಾರಿ ಗೋಮಾಳ ಜಮೀನು ಮತ್ತು ಕೆರೆಯನ್ನು ಒತ್ತುವರಿ ಮಾಡಲಾಗಿದೆ’ ಎಂದು ಆರೋಪಿಸಿ ತಾಲೂಕಿನ ಕಬ್ಬೂರು ಗ್ರಾಮಸ್ಥರು ಹಲವು ಬಾರಿ ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು.

1001713377

ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಬುಧವಾರ ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ತಹಸೀಲ್ದಾರ್ ಡಾ.ಅಶ್ವತ್ಥ್, ಭೂ ದಾಖಲೆಗಳ ಉಪನಿರ್ದೇಶಕಿ ಕಸ್ತೂರಿ ಅವರ ಸಮ್ಮುಖದಲ್ಲಿ ಭೂಮಾಪಕರು ಮತ್ತು ಪರ್ಯಾವೇಕ್ಷಕರು ಅಳತೆ ಕಾರ್ಯ ಕೈಗೊಂಡರು. ಈ ಸಂದರ್ಭದಲ್ಲಿ ಒತ್ತುವರಿಯಾದ ಎರಡ್ಮೂರು ಎಕರೆ ಜಾಗದಲ್ಲಿ ಬೆಳೆದಿದ್ದ ಫಲಕ್ಕೆ ಬಂದಿದ್ದ ಸಾವಿರಾರು ಅಡಿಕೆ ಮರಗಳನ್ನು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸಲಾಯಿತು. ಗೋಮಾಳ ಜಮೀನು ಮತ್ತು ಕೆರೆಯ ನಾಲ್ಕು ಭಾಗಗಳಲ್ಲಿ ಒತ್ತುವರಿಯಾಗಿದ್ದು, ಈಗ ಒಂದು ಭಾಗದಲ್ಲಿ ಮಾತ್ರ ಅಳತೆ ಮಾಡಿ ಒತ್ತುವರಿಯಾದ ಜಾಗವನ್ನು ತೆರವುಗೊಳಿಸುತ್ತಿದ್ದಾರೆ. ಅಳತೆ ಕಾರ್ಯಾಚರಣೆ ಮುಂದುವರಿದಿದೆ. ಸಂಪೂರ್ಣ ಅಳತೆ ಮಾಡಿದ ಮೇಲೆ ವಸ್ತುನಿಷ್ಠವಾಗಿ ಹದ್ದುಬಸ್ತ್ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಗ್ರಾಮಸ್ಥರು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

Advertisements
1001713337
ಒತ್ತುವರಿ ಕಾರ್ಯಾಚರಣೆ ವೇಳೆ ಕಬ್ಬೂರು ಗ್ರಾಮಸ್ಥರು

ಈ ಸಂದರ್ಭದಲ್ಲಿ ಮಾತನಾಡಿದ ದಸಂಸ ಜಿಲ್ಲಾಧ್ಯಕ್ಷ ಮಂಜುನಾಥ್ ಕುಂದುವಾಡ, “ಗ್ರಾಮದಲ್ಲಿ ಸರ್ಕಾರಿ ಗೋಮಾಳ ಜಮೀನು ಮತ್ತು ಕೆರೆಯ ಜಾಗ ಒತ್ತುವರಿಯಾಗಿದ್ದು, ತೆರವುಗೊಳಿಸಿ ಹದ್ದುಬಸ್ತು ಮಾಡುವಂತೆ ಇಡೀ ಗ್ರಾಮಸ್ಥರೇ ಹೋರಾಟ ಮಾಡುತ್ತಿದ್ದಾರೆ. ಆದರೆ ಅಧಿಕಾರಿಗಳು ಒಂದು ಪ್ರಭಾವಿ ಕುಟುಂಬದ ಪ್ರಭಾವಕ್ಕೊಳಗಾಗಿ ಗ್ರಾಮಸ್ಥರ ವಿರುದ್ಧವೇ ದಬ್ಬಾಳಿಕೆ ಮಾಡುತ್ತಿದ್ದಾರೆೆ” ಎಂದು ಆರೋಪಿಸಿದರು.

1001713401
ಜಿಲ್ಲಾಧಿಕಾರಿಗಳ ಕಛೇರಿ ಮುಂದಿನ ಹೋರಾಟ

“ಹೋರಾಟದ ಪ್ರತಿಫಲವಾಗಿ ಇಂದು ಆರಂಭಿಕ ಯಶಸ್ಸು ಸಿಕ್ಕಿದೆ. ಅಳತೆ ಕಾರ್ಯ ಸಂಪೂರ್ಣಗೊಳಿಸಿದ ಮೇಲೆ ಸರ್ಕಾರಿ ಗೋಮಾಳ ಜಾಗದ ಮೂಲ ವಿಸ್ತೀರ್ಣ ಮತ್ತು ಕೆರೆಯ ಮೂಲ ವಿಸ್ತೀರ್ಣದಲ್ಲಿ ಸ್ವಲ್ಪ ವ್ಯತ್ಯಾಸ ಕಂಡು ಬಂದರೆ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಪ್ರತಿಭಟನೆ ನಡೆಸುತ್ತೇವೆ” ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕೆಲಸದ ವೇಳೆ ನರೇಗಾ ಕಾರ್ಮಿಕ ಸಾವು, ದಿನ ಕಳೆದರೂ ಗಮನಹರಿಸದ ಅಧಿಕಾರಿಗಳು.

ಅಳತೆ ಕಾರ್ಯಾಚರಣೆಯಲ್ಲಿ ಭೂಮಾಪಕರಾದ ಪ್ರಸನ್ನಕುಮಾರ್, ಕೃಪಾಕರ್ ಗೌರವಿ, ಕೃಷ್ಣಮೂರ್ತಿ, ಬಿ.ಎಲ್.ಮಂಜುನಾಥ್, ಪಿ.ಎಸ್.ಹನುಮಂತಪ್ಪ, ರಂಜನ್, ಪರ್ಯಾವೇಕ್ಷಕ ಕೆ.ಎಚ್.ರಂಗನಾಥ್ ಭಾಗವಹಿಸಿದ್ದರು. ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜುನಾಥ್, ಕೋಟೆಪ್ಪ, ಗ್ರಾಮಸ್ಥರಾದ ಗಂಗಾಧರಣ್ಣ, ಕುಮಾರಣ್ಣ, ಚಂದ್ರಶೇಖರ್, ದೇವೇಂದ್ರಣ್ಣ, ಮಂಜುನಾಥ್ ವೈ.ಕಬ್ಬೂರು, ರಾಜಣ್ಣ, ಪ್ರಸನ್ನ, ಚಂದ್ರಪ್ಪ, ವಿರೂಪಾಕ್ಷಪ್ಪ, ಗುರುಮೂರ್ತಿ, ರಾಮಸ್ವಾಮಿ, ಧರ್ಮಣ್ಣ, ಕೆ.ಪಿ.ರಾಮಸ್ವಾಮಿ ಸೇರಿದಂತೆ ಸ್ಥಳದಲ್ಲಿ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X